Monday, January 24, 2022

ಪುತ್ತೂರಿನಲ್ಲಿ ಪ್ರತಿ ಬಾರಿಯೂ ಪ್ರತಿಭಟಿಸಿ ನ್ಯಾಯ ಕೇಳುವ ಅನಿವಾರ್ಯತೆ ಇದೆ: ಸೇಸಪ್ಪ ಬೆದ್ರಕಾಡು ಆರೋಪ

ಪುತ್ತೂರು: ಪುತ್ತೂರಿನಲ್ಲಿ ಪ್ರತಿ ಬಾರಿಯೂ ಪ್ರತಿಭಟನೆ ನಡೆಸಿ ನ್ಯಾಯ ಕೇಳುವ ಅನಿವಾರ್ಯತೆ ಎದುರಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ಆರೋಪಿಸಿದ್ದಾರೆ.


ಈ ಬಗ್ಗೆ ಪುತ್ತೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಲಿತರ ಮೇಲೆ ನಡೆದ ಎರಡು ಪ್ರಕರಣ, ಸುಳ್ಯ ಠಾಣೆಯ ಎಎಸ್‌ಐ ಗಂಗಾಧರ್‌ ಕರ್ತವ್ಯ ಮುಗಿಸಿ ಬರುತ್ತಿರುವಾಗ ಪವನ್‌ ಹಾಗೂ ಪ್ರಸಾದ್‌ ಪೊಲೀಸ್‌ ಅಧಿಕಾರಿಗೆ ಹಲ್ಲೆ ನಡೆದಿಸಿದ್ದರು.

ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಓರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಲ್ಲಿಯೂ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದರು.

ಎಲ್ಲಾ ಪ್ರಕರಣದಲ್ಲೂ ಪೊಲೀಸರು ಕ್ರಮ ಕೈಗೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ. ಪೊಲೀಸ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸದೇ ಇದ್ದಲ್ಲಿ ಮತ್ತೆ ಪ್ರತಿಭಟನೆಯನ್ನು ಮಾಡುವುದು ಅನಿವಾರ್ಯವಾಗುತ್ತದೆ ಎಂದರು.

ಜೊತೆಗೆ ಪುತ್ತೂರು ತಾಲೂಕಿನ ಪುತ್ತಿಗೆ ಗ್ರಾಮದ ಸಿದ್ದಮೂಲೆಯ ಕೆಮ್ಮಾರು ಎಂಬಲ್ಲಿ 6 ದಲಿತ ಸಮುದಾಯದ ಮನೆಗಳು ಇದೆ.

ಆದರೆ ಶೌಚಾಲಯ ಸೇರಿದಂತೆ ಮೂಲಭೂತ ವ್ಯವಸ್ಥೆ ಇಲ್ಲ.ಈ ಬಗ್ಗೆ ಗ್ರಾಮ ಪಂಚಾಯತ್‌ಗೆ ಮನವಿ ಸಲ್ಲಿಸಿದ್ದೇವೆ.

ಈಗಾಗಲೇ ಕಲುಷಿತಗೊಂಡಿರುವ ಕೆರೆಯ ನೀರನ್ನು ಕುಡಿಯಲು ನೀಡುತ್ತಿದ್ದಾರೆ. ಈ ಬಗ್ಗೆ, ಗ್ರಾಮ ಹಾಗೂ ತಾಲೂಕು ಪಂಚಾಯತ್‌ಗೆ ಮನವಿ ಮಾಡಲಾಗಿದೆ ಎಂದರು.

Facebook Notice for EU!
You need to login to view and post FB Comments!

Hot Topics

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...