ಬಾವಿಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ : ಬಾವಿಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ.
ಪಡಬೆಟ್ಟು ರಾಮಸಾಗು ನಿವಾಸಿ ಶಿವಪ್ಪ ಎಂಬವರ ಪತ್ನಿ ಕುಶಲಾವತಿ(45) ಮೃತ ದುರ್ದೈವಿ. ಕಳೆದ ಹಲವು ಸಮಯದಿಂದ ಮಧುಮೇಹದಿಂದ ಬಳಲುತ್ತಿದ್ದು ಇದು ಗ್ರಾಂಗ್ರಿನ್ ಹಂತವನ್ನು ತಲುಪಿತ್ತು ಎನ್ನಲಾಗಿದೆ.
ಇದರಿಂದ ಮನನೊಂದು ರಾತ್ರಿ ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.