ಮುಂಬೈ: ಹಿಂದಿ ಆವೃತ್ತಿಯ ಬಿಗ್‌ಬಾಸ್ ಸ್ಪರ್ಧಿಗಳು ತಮ್ಮ ಕಚ್ಚಾಟದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ದೊಡ್ಡ ಮನೆಯಿಂದ ಹೊರಬಂದಿರುವ ಸ್ಪರ್ಧಿ ಉರ್ಫಿ ಜಾವೇದ್, ಅಲ್ಲಿ ನಡೆಯುತ್ತಿದ್ದ ಘಟನಾವಳಿಗಳ ಬಗ್ಗೆ ಟೀಕೆಗಳ ಸುರಿಮಳೆಗೈದಿದ್ದಾರೆ.
ಹಿಂದಿ ಬಿಗ್‌ಬಾಸ್ ಕಾರ್ಯಕ್ರಮದ ಬಗ್ಗೆ ಸ್ಪರ್ಧೆಯಿಂದ ಹೊರಬಿದ್ದಿರುವ ಉರ್ಫಿ ಜಾವೇದ್ ಗಂಭೀರ ಆರೋಪ ಮಾಡಿದ್ದಾರೆ.
ಹಿಂದಿ ಆವೃತ್ತಿಯ ಬಿಗ್‌ಬಾಸ್ ಸ್ಪರ್ಧಿಗಳು ತಮ್ಮ ಕಚ್ಚಾಟದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ದೊಡ್ಡ ಮನೆಯಿಂದ ಹೊರಬಂದಿರುವ ಸ್ಪರ್ಧಿ ಉರ್ಫಿ ಜಾವೇದ್, ಅಲ್ಲಿ ನಡೆಯುತ್ತಿದ್ದ ಘಟನಾವಳಿಗಳ ಬಗ್ಗೆ ಟೀಕೆಗಳ ಸುರಿಮಳೆಗೈದಿದ್ದಾರೆ.
‘ಬಿಗ್‌ಬಾಸ್ ಮನೆಯಲ್ಲಿ ಕ್ಯಾಮರಾ ಮುಂದೆಯೇ ಸೆಕ್ಸ್ ನಡೆಯುತ್ತಿದೆ’ ಎಂದು ಮನೆಯಿಂದ ಹೊರ ಬಂದಿರುವ ಉರ್ಫಿ ಜಾವೇದ್ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
‘ಬಿಗ್ ಬಾಸ್ ಒಟಿಟಿ ಕೆ ಘರ್ ಮೇ ಸೆಕ್ಸ್ ಹೋ ಚುಕಾ ಹೈ ಕ್ಯಾಮೆರಾ’ ಎಂದು ಹೇಳಿಕೊಂಡಿದ್ದಾರೆ. ಈ ವೇಳೆ ಇತರೆ ಸ್ಪರ್ಧಿಗಳು ನೀನು ಏನು ಹೇಳುತ್ತಿದ್ದೀಯಾ ಎಂದು ಪ್ರಶ್ನಿಸಿರುವುದನ್ನು ಬಿಗ್‌ಬಾಸ್ ಮನೆಯ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯದಲ್ಲಿ ಕಾಣಬಹುದು.
ಬಿಗ್‌ಬಾಸ್ ಮನೆಯಲ್ಲಿ ಸಂಭೋಗ ನಡೆಯುತ್ತದೆ ಎಂದು ಆಕೆ ಪುನರಾವರ್ತಿಸಿದ ನಂತರ ಇದನ್ನು ಕೇಳಿ ಆಘಾತಕ್ಕೊಳಗಾದ ಮತ್ತೋರ್ವ ಸ್ಪರ್ಧಿ ಪ್ರತೀಕ್ ಸೆಹಜ್ಪಾಲ್, ಏನು ಮಾತನಾಡುತ್ತಿದ್ದೀರಿ? ಎಂದು ಉರ್ಫಿಯನ್ನು ಕೇಳಿದರು.
ಆಗ, ‘ಪ್ರತೀಕ್ ಸೋ ರಹೇ ಕ್ಯಾ? ಜಬ್ ಸೆಕ್ಸ್ ಹೋ ರಹಾ ಥಾ ಕ್ಯಾಮರಾ’ ಎಂದು ಪ್ರಶ್ನಿಸಿದ್ದಾರೆ.ಉರ್ಫಿ ತನ್ನ ತಮಾಷೆಯ ನಟನೆ ಮತ್ತು ಜನರನ್ನು ಅನುಕರಿಸುವ ಮೂಲಕ ಪ್ರೇಕ್ಷಕರನ್ನು ರಂಜಿಸಲು ಪ್ರಯತ್ನಿಸಿದ್ದರು.
ಆದರೂ ಮೊದಲ ವಾರದಲ್ಲಿ ಕಡಿಮೆ ಮತಗಳನ್ನು ಪಡೆದಿದ್ದು ಬಿಗ್‌ಬಾಸ್ ಮನೆಯಿಂದ ಹೊರಬಿದ್ದರು.
ಮಂಗಳೂರು : ಎಲನ್ ಮಸ್ಕ್ ಜಗತ್ತಿನ ನಂಬರ್ ಒನ್ ಶ್ರೀಮಂತ ವ್ಯಕ್ತಿ. ಮಸ್ಕ್ ಅಮೆರಿಕಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿ, ಭಾರತದ ಚುನಾವಣಾ ಪ್ರಕ್ರಿಯೆಯನ್ನು ಹೊಗಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಮಸ್ಕ್, ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಅದ್ಬುತವಾಗಿ ನಡೆಯುತ್ತದೆ. ಒಂದೇ ಒಂದು ದಿನದಲ್ಲಿ ಇಡೀ ಲೋಕಸಭಾ ಚುನಾವಣೆಯ ಮತ ಎಣಿಕೆ ಮಾಡಿದ ಶ್ರೇಯಸ್ಸು ಭಾರತದ್ದು ಎಂದಿದ್ದಾರೆ.
ಇದನ್ನೂ ಓದಿ: ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !
ಕ್ಯಾಲಿಫೋರ್ನಿಯಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿರುವ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಈ ಪೊಸ್ಟ್ ಹಾಕಿದ್ದಾರೆ. ಅದರ ಅಡಿಬರಹದಲ್ಲಿ, ಭಾರತದಲ್ಲಿ ಚುನಾವಣೆ ಎಂದರೆ ವಂಚನೆಯೇ ಮೊದಲ ಗುರಿ ಇರುವಲ್ಲಿ ಒಂದೇ ಒಂದು ದಿನದಲ್ಲಿ 64 ಕೋಟಿ ಮತಗಳನ್ನು ಎಣಿಕೆ ಮಾಡಿದ್ದಾರೆ. ಆದ್ರೆ ಕ್ಯಾಲಿಫೋರ್ನಿಯಾದಲ್ಲಿ ಇನ್ನೂ ಕೂಡ ಮತಗಳು ಎಣಿಕೆ ಆಗುತ್ತಲೇ ಇವೆ ಎಂದು ಬರೆದಿದ್ದಾರೆ.
ಕ್ಯಾಲಿಫೋರ್ನಿಯಾದಲ್ಲಿ ಮತ ಎಣಿಕೆ ಕಾರ್ಯ ವಿಳಂಬ ಯಾಕೆ :
ಅಮೆರಿಕಾದಲ್ಲಿ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದೆ. ಇದನ್ನು ಎಣಿಕೆ ಮಾಡುವ ಅನೇಕ ರೀತಿಯ ಪ್ರಕ್ರಿಯೆಗಳನ್ನು ಮಾಡುವ ಕಾರಣ ಚುನಾವಣಾ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅದರಲ್ಲೂ ಕ್ಯಾಲಿಫೋರ್ನಿಯಾದಂತಹ ದೊಡ್ಡ ದೊಡ್ಡ ನಗರಗಳಲ್ಲಿ ಈ ಮೇಲ್ ಇನ್ ವೋಟಿಂಗ್ ಗಳು ತುಂಬಾ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ವಿಳಂಬ ನೀತಿಯನ್ನು ಎಲನ್ ಮಸ್ಕ್ ಟೀಕಿಸಿ ಭಾರತವನ್ನು ಹೊಗಳಿದ್ದಾರೆ.
ಅಮೇರಿಕಾದಲ್ಲಿ ಹಿಂದಿನಿಂದಲೂ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದ್ದು, ಈಗಲೂ ಮುಂದುವರಿದುಕೊಂಡು ಬಂದಿದೆ.
ಮಂಗಳೂರು: ತಮಿಳಿನ ಶಿವ ಕಾರ್ತಿಕೇಯನ್ ಮತ್ತು ಸಾಯಿ ಪಲ್ಲವಿ ಅಭಿನಯದ ‘ಅಮರನ್’ ಚಿತ್ರ ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದಾಗಲೇ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.
ನಟಿ ಸಾಯಿ ಪಲ್ಲವಿಯವರು ದಕ್ಷಿಣ ಭಾರತದ ಜನಪ್ರಿಯ ನಟಿ ಹಾಗೂ ತನ್ನ ಪ್ರತಿಭೆಯಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ. ಸದಾ ಒಂದಲ್ಲಾ ಒಂದು ಸಿನಿಮಾದಲ್ಲಿ ಕಾರ್ಯನಿರತರಾಗಿರುವ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.
ಇದನ್ನೂ ಓದಿ: ಹಾಸಿಗೆ ಹಿಡಿದಿದ್ದ 80ರ ಅಜ್ಜಿ ಮೇಲೆಯೂ ವರದಕ್ಷಿಣೆ ಕೇಸ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ರಣಬೀರ್ ಕಪೂರ್, ಯಶ್ ನಟನೆಯ ಹಿಂದಿಯ ರಾಮಾಯಣ ಸಿನಿಮಾದಲ್ಲಿ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ನಂತರ ಅಮೀರ್ ಖಾನ್ ನಿರ್ಮಾಣ ಮಾಡಿ ಅವರ ಮಗ ನಟಿಸುತ್ತಿರುವ ಹೊಸ ಹಿಂದಿ ಸಿನಿಮಾದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಈಗಾಗಲೇ, ನಟ ನಾಗಚೈತನ್ಯ ನಟಿಸಿರುವ ‘ತಾಂಡೇಲ್’ ಸಿನಿಮಾದಲ್ಲೂ ಸಾಯಿ ಪಲ್ಲವಿಯವರು ನಟಿಸಿದ್ದಾರೆ. ಇದರ ಚಿತ್ರೀಕರಣ ಮುಗಿದಿದ್ದು, ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ. ಇನ್ನೂ ಸುಕುಮಾರ್ ನಿರ್ದೇಶನದ ಹೊಸ ಸಿನಿಮಾದಲ್ಲೂ ಸಾಯಿ ಪಲ್ಲವಿ ನಟಿಸಲಿದ್ದಾರೆ. ಇದರಲ್ಲಿ ನಾಯಕನಾಗಿ ರಾಮ್ ಚರಣ್ ಅಭಿನಯಿಸಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಯಿ ಪಲ್ಲವಿ, ಪಕ್ಕಾ ಫ್ಯಾಮಿಲಿ ಗರ್ಲ್ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗಾಗಿಯೇ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಮಂಗಳೂರು : ವಯಸ್ಸು ಎಂಬುದು ಕೇವಲ ಅಂಕೆಗಳು ಅಷ್ಟೇ. ಸಾಧನೆಗೆ ವಯಸ್ಸು ಅಡ್ಡಿ ಅಲ್ಲ, ಅದು ನೆಪ ಅಷ್ಟೇ. 80ರ ವಯಸ್ಸಿನಲ್ಲೂ ಫ್ಯಾಶನ್ ಲೋಕವನ್ನೆ ನಿದ್ದೆಗೆಡಿಸಿರುವ ಈ ಅಜ್ಜಿಯ ಸ್ಟೋರಿ ತುಂಬಾ ಕುತೂಹಲದಾಯಕವಾಗಿದೆ.
‘ಆಗದು ಎಂದು ಕೈ ಕಟ್ಟಿ ಕುಳಿತರೆ ಆಗದು ಎಂದು ಕೆಲಸವ’ ಎಂಬ ಹಾಡಿನ ಸಾಲಿನಂತೆ ಈ ಅಜ್ಜಿಗೆ ತನ್ನ ಮೊಮ್ಮಗಳೇ ಸ್ಪೂರ್ತಿ. ಕೆಲವೊಬ್ಬರು ಅಜ್ಜಿಯಂದಿರು, ಮೊಮ್ಮಕ್ಕಳು ಏನೇ ಹೇಳಿದರು ಅದನ್ನು ಮಾಡುತ್ತಾರೆ. ಹಾಗೆನೇ ಈ ಅಜ್ಜಿ ಕೂಡ ತನ್ನ ಮೊಮ್ಮಗಳ ಆಸೆ ಈಡೇರಿಸಲು ಹೋಗಿ ಇಂದು ಲಕ್ಷಾಂತರ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.
ಜಾಂಬಿಯಾ ದೇಶದ 80ರ ಹರೆಯದ ಈ ವೃದ್ದೆಯ ಹೆಸರು ಮಾರ್ಗರೇಟಾ ಚೋಲಾ. ಕಟ್ಟಿಗೆ ಚೇರಲ್ಲಿ ಕೂತು, ಕಣ್ಣಿಗೆ ಸ್ಟೈಲಿಶ್ ಗ್ಲಾಸ್ ಹಾಕಿಕೊಂಡು, ಬಣ್ಣ ಬಣ್ಣದ ಕಾಸ್ಟ್ಯೂಮ್ ಗಳು ಹಾಕಿಕೊಂಡಿರುವುದನ್ನು ನೋಡಿದರೆ ಎಂಥವರಿಗೂ, ಒಂದು ಕ್ಷಣ ರೋಮಾಂಚನಕಾರಿಯಾಗಬೇಕು. ಹಾಗಂತ ಇವರು ಯಾವುದೋ ರಾಯಲ್ ಫ್ಯಾಮೀಲಿಗೆ ಸೇರಿದವರಲ್ಲ. ಮಾರ್ಗರೇಟ್ ಚೋಲಾ 12-13 ವರ್ಷದಲ್ಲಿಯೇ ಶಿಕ್ಷಣಕ್ಕೆ ಗುಡ್ ಬೈ ಹೇಳಿ, 30ನೇ ವಯಸ್ಸಿಗೆ ಮದುವೆಯಾಗಿ ಬಡತನ, ಕಷ್ಟ ಎಲ್ಲವನ್ನೂ ಕಂಡವರು.
ಆದರೆ ಮೊಮ್ಮಗಳಾದ ಡಿಯಾನಾ ಕುಂಬಾ ನ್ಯೂಯಾರ್ಕ್ ಮೂಲದ ಸ್ಟೈಲಿಸ್. ಈಕೆಗೆ, ತನ್ನ ಅಜ್ಜಿಯನ್ನು ಹೊಸ ಹೊಸ ಅವತಾರದಲ್ಲಿ ನೋಡಲು ಇಷ್ಟವಂತೆ. ಈಗಾಗೀ ಹೊಸ ಹೊಸ ಬಗೆಯ ಕಾಸ್ಟ್ಯೂಮ್ ಹಾಕಿ ಖುಷಿ ಪಡುತ್ತಾರೆ. ಈ ಅಜ್ಜಿಯ ಜನಪ್ರೀಯತೆ ಎಷ್ಟರ ಮಟ್ಟಿಗೆ ಇದೆ ಅಂದ್ರೆ, ಅಂತರಾಷ್ಟ್ರೀಯ ಸುದ್ದಿ ಮಾಧ್ಯಮಗಳೇ ಸಂದರ್ಶನ ಮಾಡಲು ಬರುತ್ತಿವೆ. ತನ್ನ ಫ್ಯಾಶನ್ ಬಗ್ಗೆ ಮಾರ್ಗರೇಟ್ ಹೆಳೋದು ಹೀಗೆ, ನಾನು ಈ ರೀತಿಯ ಉಡುಗೆ-ತೊಡುಗೆಗಳನ್ನು ಹಾಕಿಕೊಳ್ಳುವುದರಿಂದ ನನ್ನನ್ನು ನಾನು ಉಳಿದವರಿಗಿಂತ ಭಿನ್ನ ಎಂದುಕೊಳ್ಳುವಂತಹ ಭಾವ ಬರುತ್ತದೆ. ನಾನು ಇಂತಹ ಬಟ್ಟೆಗಳನ್ನು ಧರಿಸಿಕೊಳ್ಳುತ್ತಾ ಮತ್ತಷ್ಟು ಜೀವಂತಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಮಾರ್ಗರೇಟ್ ರವರ ಈ ಫ್ಯಾಶನ್ ಫೋಟೋಗಳಿಗೆ, ಕ್ಲೀನ್ ಬೊಲ್ಡ್ ಆಗಿರುವ ಅವರ ಅಭಿಮಾನಿಗಳು ಅಜ್ಜಿಯನ್ನು ಕೊಂಡಾಡುತ್ತಿದ್ದಾರೆ. ಇವರಿಗೆ ಜಗತ್ತಿನಾದ್ಯಂತ ಅಭಿಮಾನಿಗಳು ಇದ್ದಾರೆ ಮತ್ತು ಇನ್ ಸ್ಟಾ ಗ್ರಾಮ್ ನಲ್ಲಿ 1 ಲಕ್ಷ 13 ಸಾವಿರದಷ್ಟು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.
ನಿಮ್ಮ ವಯಸ್ಸು, ನಿಮ್ಮ ಗುರಿ ಸಾಧನೆಗೆ ಅಡ್ಡಿಯಾಗುವುದಿಲ್ಲ. ಗುರು ಮತ್ತು ಗುರಿ ಎರಡು ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುವುದಕ್ಕೆ ಮಾರ್ಗರೇಟ್ ಚೋಲಾ ನಿದರ್ಶನ.