Saturday, August 20, 2022

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಜಾಮೀನು

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಪುತ್ತೂರಿನ ಖಾಸಗಿ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಎಂಬಾತನಿಗೆ ಪುತ್ತೂರು ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ.


ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿ ಮಡಿಕೇರಿ ಮೂಲದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೊಪದಡಿಯಲ್ಲಿ ಎಲ್ಯಾಸ್ ಪಿಂಟೋ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.

ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿಗೆ ಶರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.

LEAVE A REPLY

Please enter your comment!
Please enter your name here

Hot Topics