Monday, May 23, 2022

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ರಾಜೇಶ್‌ ಭಟ್‌ ಪತ್ನಿ ಸೇರಿ ಮತ್ತೋರ್ವನ ಬಂಧನ-ಬಿಡುಗಡೆ

ಮಂಗಳೂರು: ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಗೆ ಸಹಾಯ ನೀಡುತ್ತಿದ್ದ ಆರೋಪದಲ್ಲಿ ಆತನ ಪತ್ನಿ ಹಾಗೂ ಅಚ್ಯುತ ಭಟ್ ಎಂಬಾತನ ಮಗನನ್ನೂ ಕೂಡ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ.


ರಾಜೇಶ್ ಭಟ್‌ಗೆ ಸಹಕಾರ ನೀಡಿದ್ದ ಆರೋಪದ ಮೇಲೆ ಅನಂತ ಭಟ್ ಎಂಬಾತನನ್ನು ಬಂಧಿಸಲಾಗಿತ್ತು.

ಈ ಮಧ್ಯೆ ಮತ್ತೋರ್ವ ಆರೋಪಿ ಅಚ್ಯುತ ಭಟ್ ಮತ್ತು ಆತನ ಪುತ್ರ ಅಲೋಕ್ ಎಂಬಾತ ಕೂಡ ಆರೋಪಿ ರಾಜೇಶ್ ಭಟ್‌ಗೆ ನೆರವು ನೀಡುತ್ತಿದ್ದರು ಎಂಬ ಆರೋಪವಿತ್ತು.

ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ನಿನ್ನೆ ಅಚ್ಯುತ್‌ ಭಟ್‌ನ ಮಗ ಆಲೋಕ್ ಮತ್ತು ರಾಜೇಶ್ ಭಟ್‌ನ ಪತ್ನಿಯನ್ನೂ ಕೂಡಾ ಬಂಧಿಸಿದ್ದಾರೆ. ಈಕೆ ಆರೋಪಿ ಪತಿಗೆ ಹಣಕಾಸಿನ ಸಹಕಾರ ನೀಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.


ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಅ.18ರಂದು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ.

LEAVE A REPLY

Please enter your comment!
Please enter your name here

Hot Topics

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...