DAKSHINA KANNADA
ಕಾನೂನು ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ಕೆಎಸ್‌ಎನ್ ರಾಜೇಶ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Published
3 years agoon
By
Adminಮಂಗಳೂರು : ತನ್ನ ಬಳಿ ಕಲಿಕೆಗಾಗಿ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಕೆ.ಎಸ್.ಎನ್.ರಾಜೇಶ್‌ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ 6ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಇಂದು ಶುಕ್ರವಾರ ವಜಾಗೊಳಿಸಿದೆ.
ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವಕೀಲ ರಾಜೇಶ್ ಭಟ್ ವಿರುದ್ಧ ಅ.18ರಂದು ಮಹಿಳಾ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಆ ಬಳಿಕ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗೆ ಪ್ರಯತ್ನಿಸಿದ್ದ.
ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಎರಡು ಬಾರಿ ಮುಂದೂಡಿದ್ದು, ಮೂರನೇ ಬಾರಿ ತಿರಸ್ಕೃತಗೊಳಿಸಿದೆ. ಪ್ರಕರಣವನ್ನು ಮಾತುಕತೆ ನಡೆಸಿ ಮುಚ್ಚಿ ಹಾಕಲು ಯತ್ನಿಸಿದ್ದಾರೆನ್ನಲಾದ ಉರ್ವ ಠಾಣೆಯ ಮಹಿಳಾ ಪಿಎಸ್‌ಐ ಸಹಿತ ಇಬ್ಬರು ಪೊಲೀಸರು ಅಮಾನತುಗೊಂಡಿದ್ದರು.
ಠಾಣಾಧಿಕಾರಿ ಭಾರತಿ ಅವರಿಗೆ ಪೊಲೀಸ್ ಆಯುಕ್ತರು ನೊಟೀಸು ಜಾರಿ ಮಾಡಿದ್ದರು.
ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಧ್ರುವ ಮಹಾಲಕ್ಷ್ಮೀ , ಶಿವಾನಂದ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ರಾಜೇಶ್ ಭಟ್‌ಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದಾರೆನ್ನಲಾದ ಬೊಂದೇಲ್‌ನ ಅನಂತ ಭಟ್ ಗುರುವಾರವೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
BANTWAL
ನಾಲ್ಕು ಪತ್ನಿಯರಿಗೆ ಕೈಕೊಟ್ಟು ಐದನೇ ಮದುವೆಗೆ ಸಜ್ಜಾಗುತ್ತಿದ್ದ ರಸಿಕ ಅರೆಸ್ಟ್ !!
Published
4 hours agoon
29/11/2024ಬಂಟ್ವಾಳ: ನಾಲ್ಕು ಮದುವೆಯಾಗಿ, ಐದನೇ ಮದುವೆಗೆ ತಯಾರಾಗುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹ*ಲ್ಲೆ ನಡೆಸಿ ಮನೆಯಿಂದ ಹೊರದಹಾಕಿದ್ದ ರಾ*ಕ್ಷಸೀಯ ಕೃ*ತ್ಯವೊಂದು ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ಬುಧವಾರ (ನ.27) ರಾತ್ರಿ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಪತ್ನಿ ನೀಡಿರುವ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದನ್ನೇ ಕಸುಬಾಗಿಸಿಕೊಂಡ ನಟೋರಿಯಸ್ ಬಹುಪತ್ನಿ ವಲ್ಲಭನನ್ನು ಮಾಣಿ ರಫೀಕ್ ಯಾನೆ ಮಹಮ್ಮದ್ ರಫೀಕ್(42)ನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ. ಆರೋಪಿ ಮಾಣಿ ರಫೀಕ್ ಈಗಾಗಲೇ ನಾಲ್ಕು ಮದುವೆಯಾಗಿದ್ದು, ಒಂದೆರಡು ವರ್ಷ ಜೊತೆಯಾಗಿ ಜೀವನ ಮಾಡಿ ಮಕ್ಕಳನ್ನು ಕರುಣಿಸಿದ ಬಳಿಕ ವಿಚ್ಚೇದನ ನೀಡಿ ಪರಾರಿಯಾಗುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
ನಾಲ್ಕನೇ ಪತ್ನಿಯಿಂದ ದೂರು ದಾಖಲು :
‘ನಿನ್ನೆ ( ನ.26) ಸಂಜೆ ಐದು ಗಂಟೆ ಸುಮಾರಿಗೆ ರಫೀಕ್ ನ ಮನೆಗೆ ನಾನು ಹೋಗಿದ್ದೇನೆ. ಹೋದಂತ ಸಂದರ್ಭದಲ್ಲಿ ಆರೋಪಿಯಾದ ರಫೀಕ್ ಅ*ವಾಚ್ಯ ಶಬ್ದಗಳಿಂದ ಬೈದು, ಹ*ಲ್ಲೆ ನಡೆಸಿದ್ದಲ್ಲದೇ ಮಗುವನ್ನು ಕೊಂ*ದು ಹಾಕುತ್ತೇನೆಂದು ಬೆದರಿಕೆ ಹಾಕಿದ್ದಲ್ಲದೇ, ತಾಯಿಯ ಮಡಿಲಲ್ಲಿದ್ದ ಮಗುವನ್ನು ಎಳೆದು ಎಸೆಯಲು ಮುಂದಿಗಿದ್ದಾನೆ’ ಎಂದು ಸಂತ್ರಸ್ತ ಪತ್ನಿ ಆರೋಪಿಸಿದ್ದಾಳೆ. ಅಲ್ಲದೇ ತ್ರಿವಳಿ ತಲಾಖ್ ಎಂದು ಹೇಳಿ ಕುತ್ತಿಗೆಗೆ ಕೈಹಾಕಿ ಮನೆಯಿಂದ ಹೊರಗೆ ದಬ್ಬಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾಳೆ. ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನೂ ಕಿತ್ತುಕೊಂಡಿರುವ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ.
ಮಾಣಿ ರಫೀಕ್ ಯಾರು ? ಹಿನ್ನಲೆ ಏನು ?
ಮಾಣಿ ರಫೀಕ್ ಯಾನೆ ನಟೋರಿಯಸ್ ಕಿರಾತಕ. ಮಾಣಿಯಿಂದ ವಲಸೆ ಬಂದ ರಫೀಕ್ ವಿಟ್ಲ ಸಮೀಪದ ಮಂಗಲಪದವು ಎಂಬಲ್ಲಿ ಮನೆ ಕಟ್ಟಿಕೊಂಡಿದ್ದ. ಅಲ್ಲಿಯೂ ನೆರೆಹೊರೆಯವರ ಜೊತೆ ಗಲಾಟೆ, ಗದ್ದಲ ಎಬ್ಬಿಸಿ ಕೊನೆಗೆ ಮನೆ ಮಾರಾಟ ಮಾಡಿ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಲ್ಲೂ ಕೂಡಾ ಪರಿಸರದ ಶಾಂತಿಪ್ರಿಯ ನಿವಾಸಿಗಳ ಜೊತೆ ತಕರಾರು ಎಬ್ಬಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಜನ್ಮ ನೀಡಿದ ತಾಯಿಯ ಮೇಲೆಯೇ ಮನಬಂದಂತೆ ಹ*ಲ್ಲೆ ನಡೆಸಿ ಆಕೆಯ ಚಿನ್ನಾಭರಣ ಕಿತ್ತು ಕಾಲಿನಿಂದ ತುಳಿದು ಮನೆಯಿಂದ ಹೊರದಬ್ಬಿ ರಾ*ಕ್ಷಸೀಯ ಕೃ*ತ್ಯ ನಡೆಸಿದ್ದ. ಈತನ ಹ*ಲ್ಲೆ, ಕಿರುಕುಳದಿಂದ ಮನನೊಂದ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಲ್ಲದೇ ಠಾಣೆಯಲ್ಲೂ ಹೆತ್ತ ತಾಯಿಯ ಮೇಲೆ ಮನಬಂದಂತೆ ಅ*ವಾಚ್ಯ ಶಬ್ದಗಳಿಂದ ನಿಂದಿಸಿ ರಾ*ಕ್ಷಸೀ ಕೃ*ತ್ಯ ನಡೆಸಿರುವುದು ಪ್ರತಿಯೊಬ್ಬನಿಗೂ ತಿಳಿದ ವಿಚಾರವಾಗಿದೆ. ಅದಾದ ಬಳಿಕ ಅನಾರೋಗ್ಯದಿಂದ ಮೃ*ತಪಟ್ಟ ಮೊದಲ ಪತ್ನಿಯ ಹಿರಿಮಗಳ ಮೇಲೆ ಹ*ಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾನೆ. ಇದೀಗ ಆಕೆಯೂ ತನ್ನ ಅಜ್ಜಿ ಜೊತೆ ಮಂಗಲಪದವು ಬಳಿ ಬಾಡಿಗೆ ಮನೆಯಲ್ಲಿದ್ದಾರೆ।
ಇದೀಗ ನಾಲ್ಕನೇ ಪತ್ನಿಯ ಚಿನ್ನಾಭರಣವನ್ನೆಲ್ಲಾ ಕಿತ್ತುಕೊಂಡು ಬಳಿಕ ಆಕೆಯ ಮಗುವಿನ ಮೇಲೆ ಹ*ಲ್ಲೆ ನಡೆಸಿ ಹೊರದಬ್ಬಿದ್ದ ಕಿರಾತಕನ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಸೆಕ್ಷನ್ BNS/-85,86,352,351(1),115(2) ರಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು : ದಿ.ಉಮೇಶ್ ಕಾಜಿಲ ಸವಿನೆನಪಿಗಾಗಿ ಡಿ.1 ರಂದು ಬೃಹತ್ ರಕ್ತದಾನ ಶಿಬಿರ
Published
4 hours agoon
29/11/2024By
NEWS DESK4ಮಂಗಳೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ, ವೀರಾಂಜನೇಯ ಶಾಖೆ ಕಾಜಿಲ, ಭಾರತೀಯ ಜನತಾ ಪಾರ್ಟಿ ತೆಂಕುಳಿಪಾಡಿ ವಾರ್ಡ್ ಸಮಿತಿ ಕಾಜಿಲ, ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗ ಮೋರ್ಚಾ ಮಂಗಳೂರು ಉತ್ತರ ಮಂಡಲ ಇದರ ಸಹಯೋಗದಿಂದ ರಕ್ತಕೇಂದ್ರ ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಿ.ಉಮೇಶ್ ಕಾಜಿಲ ಇವರ ಸವಿನೆನಪಿಗಾಗಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಡಿಸೆಂಬರ್ 1 ರಂದು ಭಾನುವಾರ ಕಾಜಿಲ ಮಾಧವ ಮನೆ ವಠಾರದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 8.30 ರಿಂದ 1 ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.
BELTHANGADY
ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆ*ತ್ಮಹತ್ಯೆ ಪ್ರಕರಣ; ಪೊಲೀಸರಿಂದ ಶೋಧಕಾರ್ಯ
Published
5 hours agoon
29/11/2024ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಇಲಿಪಾಷಣ ಸೇವಿಸಿ ಆ*ತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾ*ವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಗಳು ಆ*ತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಬಳಿಕ ಯುವಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ. ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಚಾರ್ಮಾಡಿ ಗ್ರಾಮದ ಮರಂಗಾಯಿ ನಿವಾಸಿ ಪ್ರವೀಣ್ ಗೌಡ (22) ಎಂಬಾತ ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡಿದ್ದು, ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ.
ವಿದ್ಯಾರ್ಥಿನಿ ತಾಯಿ ಜತೆ ತನ್ನನ್ನು ಪ್ರವೀಣ್ ಜತೆ ಮದುವೆ ಮಾಡಿಸುವಂತೆಯೂ ಹೇಳಿದ್ದಳು. ಪ್ರವೀಣ್ ಗೌಡ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಯುವಕ ಆಕೆಯನ್ನು ಜತೆ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ‘ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಹೇಳಿ ಸಾ*ಯುವುದಾದರೆ ಸಾಯಿ, ನಾನು ನಿನ್ನನ್ನು ಮದುವೆಯಾಗಲ್ಲ’ ಎಂದು ಹೇಳಿ ಮೋಸ ಮಾಡಿದ್ದಾನೆ.
ಇದರಿಂದ ಮನನೊಂದ ವಿದ್ಯಾರ್ಥಿನಿ ನವೆಂಬರ್ 20 ರಂದು ರಾತ್ರಿ ಮನೆಯಲ್ಲಿ ಅಂಗಡಿಯಿಂದ ತಂದಿದ್ದ ಇಲಿಪಾಷಣ ಪೇಸ್ಟ್ ಸೇವಿಸಿದ್ದಾಳೆ. ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ತಾಯಿ ಜತೆ ಮಲಗಿದ್ದಾಗ ವಾಂತಿ ಮಾಡಿದ್ದರಿಂದ ಮನೆಮಂದಿಗೆ ವಿಚಾರ ತಿಳಿದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ನವೆಂಬರ್ 26 ರಂದು ಚಿಕಿತ್ಸೆ ಫಲಿಸದೆ ಸಾ*ವನ್ನಪ್ಪಿದ್ದಾಳೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ತನ್ನ ಮಗಳ ಸಾವಿಗೆ ನ್ಯಾಯ ಬೇಕು ಅಂತಾ ವಿದ್ಯಾರ್ಥಿನಿಯ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಯುವಕ ಪ್ರವೀಣ್ ಗೌಡ ಮೊಬೈಲ್ ಸ್ಪೀಚ್ ಆಫ್ ಮಾಡಿ ಪರಾರಿಯಾಗಿದ್ದು ಆತನ ಬಂಧನಕ್ಕೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
LATEST NEWS
ಅಪರಾಧ ಪ್ರಕರಣಗಳಿಂದ ಸುಸ್ತಾದ ಪೊಲೀಸರು; ಠಾಣೆಯಲ್ಲಿ ಹೋಮ, ಹವನ !
BBK11: ಮಹಾರಾಜ ಮಂಜಣ್ಣ, ಯುವರಾಣಿ ಮೋಕ್ಷಿತಾ ದಿಢೀರ್ ಬಂಧನ!
ವಯನಾಡ್ ನೂತನ ಸಂಸದೆ ಪ್ರಿಯಾಂಕ ಗಾಂಧಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ CM ಸಿದ್ದರಾಮಯ್ಯ.!
ನವಜಾತ ಶಿಶುಗಳ ಫೋಟೊಶೂಟ್ ಮಾಡಿಸುವುದು ಎಷ್ಟು ಅಪಾಯ ನೋಡಿ..!
ಈ ಟಿಪ್ಸ್ ಪಾಲಿಸಿದ್ರೆ ಗ್ಯಾಸ್ ಒಂದು ವಾರ ಹೆಚ್ಚು ಬಳಸಬಹುದು; ಅಡುಗೆ ಮಾಡುವಾಗ ಈ ಸಣ್ಣ ಕೆಲಸಗಳನ್ನು ಮಾಡಿ
ಬೆಂಗಳೂರಿನಲ್ಲಿ ನಡೆಯಲಿದೆ ಡಬ್ಲ್ಯುಪಿಎಲ್ ಮಿನಿ ಹರಾಜು
Trending
- BIG BOSS6 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- BANTWAL22 hours ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- Baindooru6 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
- Ancient Mangaluru2 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು