Monday, January 24, 2022

ಮಂಗಳೂರು: ಸ್ವಂತ ಪುಟ್ಟ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ತಂದೆ…!

ಮಂಗಳೂರು: ಒಂದನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದು ಈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಝೊಮಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯೂ ರೌಡಿಶೀಟರ್ ಆಗಿದ್ದು ಈತನ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Hot Topics

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...

ಕುಂಪಲ: ಪ್ರಯಾಣಿಕರನ್ನು ಇಳಿಸುವ ವೇಳೆ ಖಾಸಗಿ ಸಿಟಿ ಬಸ್‌ಗಳ ಢಿಕ್ಕಿ

ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್‌ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ...

“ಬಿಜೆಪಿಗರಿಗೆ ವಿಶ್ವಗುರು ನರೇಂದ್ರ ಮೋದಿ ಒಬ್ಬರೇ”

ಮಂಗಳೂರು: ಬಿಜೆಪಿಗರಿಗೆ ಇಡೀ ಪ್ರಪಂಚದಲ್ಲಿ ಏಕೈಕ ಗುರು ವಿಶ್ವಗುರು ಎನ್ನುವ ನರೇಂದ್ರ ಮೋದಿ ಬಿಟ್ಟು ಬೇರೆ ಯಾವ ಗುರುಗಳಿಗೂ ಗೌರವ ಕೊಡದಿದ್ದುದನ್ನು ನೋಡಿದ್ದೇವೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್...