Sunday, May 16, 2021

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ 

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ 

ಬಂಟ್ವಾಳ: ಪುಂಜಾಲಕಟ್ಟೆ  ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ  ಪ್ರಕರಣದಡಿಯಲ್ಲಿ  ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ನಿವಾಸಿ, 21 ವರ್ಷದ ಅಜಯ್ ಎಂಬಾತನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆಯ ಸಖ್ಯ ಬೆಳೆಸಿದ್ದ ಆರೋಪಿ, ಲೈಂಗಿಕ ದೌರ್ಜನ್ಯ ಎಸಗಿದ್ದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು.

ಹೆರಿಗೆ ನೋವಿನಿಂದ ನರಳುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ವಾಹನದಲ್ಲೇ ಹೆರಿಗೆಯಾಗಿ ಮಗು ಮೃತಪಟ್ಟಿತ್ತು. ಬಳಿಕ ಆಕೆಯನ್ನು ಆರೈಕೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ಮಾಹಿತಿ ಬಂದ ಮೇರೆಗೆ, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಾಚರಣೆ ನಡೆಸಿ, ಆರೋಪಿ ಅಜಯ್‌ನ​ನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಮುಂದಿನ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...