Thursday, June 30, 2022

ಪುತ್ತೂರಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಅಪ್ರಾಪ್ತೆಯೋರ್ವಳಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಹಾಡುಹಗಲೇ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಆರೋಪಿ ನೌಫಲ್ (28) ಎಂದು ಗುರುತಿಸಲಾಗಿದೆ.
ಗದಗ ಮೂಲದ ಹಿಂದೂ ಅಪ್ರಾಪ್ತ ಬಾಲಕಿ ಬಸ್ ನಿಲ್ದಾಣದ ಬಳಿ ಇದ್ದ ಸಂದರ್ಭದಲ್ಲಿ ಸರಳೀಕಟ್ಟೆ ನಿವಾಸಿ

ನೌಫಲ್ ಎಂಬಾತ ಬಾಲಕಿಯ ಬಳಿ ಬಂದು ಹತ್ತು ನಿಮಿಷ ನನ್ನ ಜೊತೆ ಬರ್ತಿಯಾ, ನಾನು ನಿನಗೆ ಹಣ ಕೊಡುತ್ತೇನೆ ಎಂದು ಅಮಿಷವೊಡ್ಡಿ ಬಾಲಕಿಯನ್ನು ತನ್ನ ಜೊತೆ‌ ಬರುವಂತೆ ಒತ್ತಾಯಿಸಿದ್ದಾನೆ.

ಬಾಲಕಿ ಈ ವಿಚಾರವನ್ನು ತನ್ನ ಪೋಷಕರ ಬಳಿ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಆಗಮಿಸಿದ‌ ಪೊಲೀಸರು ಆರೋಪಿ ನೌಫಲ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಬಂಟ್ವಾಳ ತಾಲೂಕಿನ ಕನ್ಯಾನದ ದಲಿತ ಬಾಲಕಿ ಆತ್ಮಹತ್ಯೆ ಪ್ರಕರಣವು ತಣ್ಣಗಾಗುವ ಮೊದಲೇ ಇನ್ನೊಂದು ಪ್ರಕರಣ‌ ನಡೆದಿರುವುದು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

LEAVE A REPLY

Please enter your comment!
Please enter your name here

Hot Topics

ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಕಾಲೇಜುಗಳಿಗೆ ರಜೆ ಘೋಷಣೆ: ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೆಲವು ಕಡೆ...

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟ: 1,249 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ.1,154 ಮಂದಿ ಡಿಸ್ಚಾರ್ಜ್...

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡಿದ ಇಲಾಖೆ

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್‌ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ.ಕ್ಲಿನಿಕ್‌ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ...