Connect with us

DAKSHINA KANNADA

ವಿವಿಯಲ್ಲಿನ ಲೈಂಗಿಕ ಕಿರುಕುಳವನ್ನು ಮುಚ್ಚಿಟ್ಟ ಮಾಜಿ ಕುಲಸಚಿವ ಪ್ರೊ| ಎ.ಎಂ. ಖಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ..

Published

on

ವಿವಿಯಲ್ಲಿನ ಲೈಂಗಿಕ ಕಿರುಕುಳವನ್ನು ಮುಚ್ಚಿಟ್ಟ ಮಾಜಿ ಕುಲಸಚಿವ ಪ್ರೊ| ಎ.ಎಂ. ಖಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ..

ಮಂಗಳೂರು : ಎರಡು ವರ್ಷಗಳ ಹಿಂದೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಭಾಗದ ಪ್ರಾಧ್ಯಾಪಕ ಪ್ರೊ| ಅರಬಿ ಮತ್ತು ದೌರ್ಜನ್ಯದ ಕುರಿತ ವಿವಿ ಆಂತರಿಕ ತನಿಖಾ ಸಮಿತಿ `ಸ್ಪರ್ಷ್’ ನೀಡಿದ ವರದಿಯನ್ನು ಮಹಿಳಾ ಆಯೋಗಕ್ಕೆ ಸಲ್ಲಿಕೆ ಮಾಡದೆ ಪ್ರಕರಣವನ್ನು ಮುಚ್ಚಿಟ್ಟ ಹಿಂದಿನ ಕುಲಸಚಿವ ಪ್ರೊ| ಎ.ಎಂ. ಖಾನ್ ಅವರನ್ನು ವಿವಿ ತಕ್ಷಣ ಸೇವೆಯಿಂದ ವಜಾ ಮಾಡಿ ಕಾನೂ ನು ರೀತ್ಯ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಎಬಿವಿಪಿ ಕಠಿಣ ಹೋರಾಟ ಮುಂದುವರಿಸಲಿದೆ ಎಂದು ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಒತ್ತಾಯಿಸಿದ್ದಾರೆ.  
ಲೈಂಗಿಕ ದೌರ್ಜನ್ಯ ನಡೆಸಿದ ಪ್ರೊ ಆರಬಿ ಹಾಗೂ ಇದರ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸದ ಹಿಂದಿನ ಕುಲಸಚಿವ ಪ್ರೊ| ಎ.ಎಂ. ಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಗಳಗಂಗೋತ್ರಿಯ ವಿವಿ ಕ್ಯಾಂಪಸ್‍ನ ಆಡಳಿತ ಸೌಧದ ಎದುರು ನಡೆದ ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದರು.
ಲೈಂಗಿಕ ಕಿರುಕುಳ ನಡೆದಾಗ ವಿವಿ ಆಡಳಿತಕ್ಕೆ ದೂರು ನೀಡಿದ್ದರು. ಕ್ರಮ ಕೈಗೊಳ್ಳದೇ ಇದ್ದಾಗ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು, ಆದರೆ ಮಹಿಳಾ ಆಯೋಗದ ಸೂಚನೆಯ ಮೇರೆಗೆ ಆಂತರಿಕ ತನಿಖೆ ನಡೆದರೂ ಅದರ ವರದಿ ನೀಡದೆ ಕುಲಸಚಿವರು ಆರೋಪಿಯನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ ಇವರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು ಎಂದರು.
ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ ಮಾತನಾಡಿ ಸಿಂಡಿಕೇಟ್ ಸಭೆಯಲ್ಲಿ ಈ ಪ್ರಕರಣ ಚರ್ಚೆ ನಡೆದಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಲು ಸಿಂಡಿಕೇಟ್ ಸಭೆ ನಿರ್ಣಯಿಸಿದ್ದು, ಇಂದು ಬೆಳಗ್ಗೆ ಕರ್ತವ್ಯ ಲೋಪಮಾಡಿದ ಪ್ರೊ| ಎ.ಎಂ. ಖಾನ್ ಅವರಿಗೆ ಕಾರಣ ಕೇಳಿ ನೋಟೀಸು ಮಾಡಿದ್ದು, ಅರಬಿ ಅವರ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಕಾನೂನು ತಜ್ಞರ ಅಭಿಪ್ರಾಯದಂತೆ ತಪ್ಪಿತಸ್ಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನನ್ನ ಅಧಿಕಾರದ ಅವಧಿಯಲ್ಲಿ ಶಿಕ್ಷಕ, ಶಿಕ್ಷಕೇತರ, ವಿದ್ಯಾರ್ಥಿಗಳು ದುರ್ವರ್ತನೆ ಅಶಿಸ್ತು ತೋರಿಸಿದರೆ ಆವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಾಗುವುದು. ವಿವಿಯಲ್ಲಿ ಶೂನ್ಯ ಕಿರುಕುಳ ದಾಖಲಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭ ಎಬಿವಿಪಿ ವಿಭಾಗ ಸಂಘಟನ ಕಾರ್ಯದರ್ಶಿ ಬಸವೇಶ್, ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ್ ಆಶಿಶ್ ಅಜ್ಜಿಬೆಟ್ಟು, ಮಂಗಳೂರು ನಗರ ಸಹಕಾರ್ಯದರ್ಶಿಗಳಾದ ನಿಶಾನ್ ಆಳ್ವ ಹಾಗೂ ಶ್ರೇಯಸ್ ರೈ, ಎಬಿವಿಪಿ ಬಂಟ್ವಾಳ ತಾಲೂಕು ಸಂಚಾಲಕ ಹರ್ಷಿತ್ ಕೊಯಿಲ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ ಮಡಿವಾಳ್ ಮತ್ತಿತರರು ಉಪಸ್ಥಿತರಿದ್ದರು.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending