LATEST NEWS
ಬಾಂಗ್ಲಾ ಯುವತಿಗೆ ಲೈಂಗಿಕ ದೌರ್ಜನ್ಯ; ಯುವತಿ ಸೇರಿದಂತೆ ಐವರು ಆರೋಪಿಗಳ ಬಂಧನ..!
ಬೆಂಗಳೂರು : ಯುವಕರ ತಂಡವೊಂದು ಬಾಂಗ್ಲಾ ಮೂಲದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಆ ಘಟನೆಯಲ್ಲಿ ಓರ್ವ ಯುವತಿ ಸೇರಿ ಐವರು ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ಥೆ ಮತ್ತು ಆರೋಪಿಗಳು ಬಾಂಗ್ಲಾ ದೇಶದ ಮೂಲದವರು ಎಂದು ತಿಳಿದು ಬಂದಿದೆ.
ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಆರೋಪಿಗಳು,ರಾಮಮೂರ್ತಿ ನಗರದ ಎನ್ ಆರ್ ಐ ಕಾಲೋನಿಯಲ್ಲಿ ವಾಸವಾಗಿದ್ದರು,ಆರೋಪಿಗಳು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರಿಂದ ಕೃತ್ಯ ನಡೆದಿದೆ.ಲೈಂಗಿಕ ಮತ್ತು ದೈಹಿಕ ದೌರ್ಜನ್ಯವೆಸಗಿ , ವಿಡಿಯೋ ಮಾಡಿ ವಿಕೃತಿ ಮೆರೆದಿದ್ದರು.
ಬಾಂಗ್ಲಾ ದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಮಾಹಿತಿ ಪಡೆದ ಪೊಲೀಸರು ಬಾಂಗ್ಲಾ ದೇಶದ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು.
ಆ ಬಳಿಕ ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆಮಾಡಿದ್ದ ಬಾಂಗ್ಲಾ ಪೊಲೀಸರು,ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆವಲಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ.
ಈ ಮಧ್ಯೆ ಇಂದು ಬೆಳಗ್ಗೆ ಆರೋಪಿಗಳು ವಾಸವಿದ್ದ ಕರೆಗೌಡ ಬಡಾವಣೆಯಲ್ಲಿ ಮಹಜರು ನಡೆಸುವಾಗ ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.ಆರೋಪಿ ಸಾಗರ್ ಮತ್ತು ಹೃದಯ್ ಎಂಬುವರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಶರಣಪ್ಪ, ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ಪೂರ್ವ ವಿಭಾಗ ಡಿಸಿಪಿ ಡಾ. ಶರಣಪ್ಪ, ನಿನ್ನೆ ಘಟನೆ ಸಂಬಂಧ ಎಸಿಪಿ ಸಖ್ರಿ, ಇನ್ಸ್‌ಪೆಕ್ಟರ್ ಮೆಲ್ವಿನ್ ಆರೋಪಿಗಳನ್ನ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಈ ವೇಳೆ ಎಸಿಪಿ ಸಖ್ರಿ, ಪೇದೆಯೊಬ್ಬರಿಗೆ ಗಾಯವಾಗಿದೆ. ಕೃತ್ಯ ನಡೆದ ಸ್ಥಳ ಪರಿಶೀಲನೆ ನಡೆಸಲು ಬಂದಾಗ ಈ ಘಟನೆ ನಡೆದಿದೆ.
ಆಗ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಗಳಿಗೆ ಗುಂಡು ಹಾರಿಸಿದ್ದಾರೆ. ಹೃದಯ್ ಬಾಬುಗೆ ಬಲಗಾಲಿಗೆ, ಸಾಗರ್ ಗೆ ಎಡಗಾಲಿಗೆ ಗುಂಡು ಹಾರಿಸಲಾಗಿದೆ. ಇಂದು ಬೆಳಗ್ಗೆ 6.30 ರಲ್ಲಿ ಈ ಘಟನೆ ನಡೆದಿದೆ. ಗಾಯಾಳು ಆರೋಪಿಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇನ್ನು ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಮಾಹಿತಿ ನೀಡಿದ್ದಾರೆ.
ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾಗಿ ಮಾಹಿತಿ ಕೊಟ್ಟಿದ್ದಾರೆ. ಯುವತಿ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳ ಬಂಧನ ಹಾಗೂ ಪ್ರಕರಣ ತನಿಖೆ ಬಗ್ಗೆ ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
LATEST NEWS
ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ
ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್ (26) ಮೃ*ತ ಯುವಕ.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪ*ಲ್ಟಿಯಾಗಿದೆ. ಕೊಡುಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್, ಮಂಡ್ಯ ಜಿಲ್ಲೆಯ ಯೋಗೇಶ್ ಎಂಬವರಿಗೆ ಗಂ*ಭೀರ ಗಾ*ಯವಾಗಿದೆ.
ಇದನ್ನೂ ಓದಿ : ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್ ಮಾಡಿ ಎಂದ ಕಿರಾತಕ ಬೆಡಗಿ
ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿತ್ತು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
LATEST NEWS
ಪೊಳಲಿ ಸೇತುವೆ ಬಂದ್: ಮಂಗಳವಾರ ಗ್ರಾಮಸ್ಥರಿಂದ ಪ್ರತಿಭಟನೆ
ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರದ ಮೂಲಕ ಪರಿಶೀಲನೆ ನಡೆಸಿ ಎರಡು ತಿಂಗಳಾದ್ರೂ ಏನಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಇದರಿಂದ ತೊಂದರೆಗೆ ಒಳಗಾಗಿರುವ ಅಮ್ಮುಂಜೆ , ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಮತ್ತು ಸುತ್ತಮುತ್ತಲಿನ ಜನ ಸಭೆ ನಡೆಸಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯೇ ನೀಡದ ಜನಪ್ರತಿಧಿಗಳು, ಹಾಗೂ ಅಧಿಕಾರಿಗಳ ವಿರುದ್ಧ ಅಕ್ಟೋಬರ್ 15 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿಯ ರಾಮಕೃಷ್ಣ ತಪೋವನ ರಾಜರಾಜೇಶ್ವರಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದು ಹೋರಾಟದ ಬಗ್ಗೆ ಜನಾಭಿಪ್ರಾಯ ಪಡೆದುಕೊಂಡಿದ್ದಾರೆ.
LATEST NEWS
ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.
ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್‌ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್‌ಗೆ ಮರಳಿದ್ದಾನೆ.
ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಾಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.
ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನಿಗೆ ಹಾಸ್ಟೇಲ್‌ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್‌ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.
- FILM6 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS6 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA7 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು
- BIG BOSS7 days ago
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!