Tuesday, January 31, 2023

ಮಡಿಕೇರಿಯಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಬೂಬ್ಬಕ್ಕರ್ ಅರೆಸ್ಟ್..!

ಮೇಯಲು ಬಿಟ್ಟಿದ್ದ ಮೂಕ ಪ್ರಾಣಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ  ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ನಡದಿದೆ.

ಮಡಿಕೇರಿ: ಮೇಯಲು ಬಿಟ್ಟಿದ್ದ ಮೂಕ ಪ್ರಾಣಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ  ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ನಡದಿದೆ.

ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿ ಅಬೂಬ್ಬಕ್ಕರ್ ಸಿದ್ಧಿಕ್ ಬಂದಿತ ಆರೋಪಿಯಾಗಿದ್ದು,  ಗ್ರಾಮಸ್ಥರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗ್ರಾಮದ ಸಿ.ಎ. ದೇವಯ್ಯ ಎಂಬುವವರು ಹಸುವನ್ನು ಮೇಯಲು ಬಿಟ್ಟು ಸಂತೆಗೆ ತೆರಳಿದ್ದರು.

ಸಂತೆಯಿಂದ ವಾಪಸ್ ಬಂದಾಗ ತಮ್ಮ ಹೊಲದ ದಾರಿಯಲ್ಲಿ ಬೈಕ್ ನಿಂತಿರುವುದನ್ನು ದೇವಯ್ಯ ಕಂಡಿದ್ದಾರೆ.

ಬಳಿಕ ಮೇಯಲು ಕಟ್ಟಿದ್ದ ಹಸುವನ್ನು ಮನೆಗೆ ಕರೆದುಕೊಂಡು ಬರಲು ಹೊಲದ ಬಳಿ ತೆರಳಿದ್ದಾರೆ.

ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದನ್ನು ಕಣ್ಣಾರೆ ಕಂಡಿದ್ದಾರೆ.

ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಆರೋಪಿಯನ್ನು ಬೆಂಬತ್ತಿ ಕೊನೆಗೂ ಹಿಡಿಯಲು ಯಶಸ್ವಿಯಾಗಿದ್ದು ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಭಾರತೀಯ ದಂಡ ಸಂಹಿತೆಯ ಕಲಂ 377ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾರವಾರ : ಕಾಡುಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ..! ಇಬ್ಬರ ಬಂಧನ

ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಾರವಾರ:...

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...