BANTWAL
ಉಪ್ಪಿನಂಗಡಿ: ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಅಶ್ರಫ್ನನ್ನು ಪೊಲೀಸರಿಗೊಪ್ಪಿಸಿದ ಸಹಪ್ರಯಾಣಿಕರು
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸಹ ಪ್ರಯಾಣಿಕರು ಸೇರಿ ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.
ಪೆರ್ನೆ ಗ್ರಾಮದ ನಿವಾಸಿ ಅಶ್ರಫ್ (45) ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮುಕ.
ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಬಸ್ಸಿಗೆ ನೆಲ್ಯಾಡಿಯಿಂದ ಹತ್ತಿದ್ದ ಸಹ ಪ್ರಯಾಣಿಕ ಅಶ್ರಫ್ ತನ್ನ ದೇಹದ ಖಾಸಗಿ ಭಾಗಗಳನ್ನು ಸ್ಪರ್ಶಿಸುವಂತೆ ಒತ್ತಾಯಿಸಿದ್ದ.
ಇದರಿಂದ ಆತಂಕಗೊಂಡ ವಿದ್ಯಾರ್ಥಿನಿ ಕಂಡೆಕ್ಟರ್ ಬಳಿ ದೂರು ನೀಡಿದ್ದಾಳೆ.ಕಂಡೆಕ್ಟರ್ ಹಾಗೂ ಸಹ ಪ್ರಯಾಣಿಕರು ಆರೋಪಿಯನ್ನು ಅಶ್ರಫ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಶ್ರಫ್ ಈಗಾಗಲೇ ಮೂರು ಮಕ್ಕಳ ತಂದೆಯಾಗಿದ್ದು ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದಾನೆ. ಬಸ್ಸಿನಲ್ಲಿ ಪ್ರಯಾಣಿಕ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಸ್ಸಿನ ಸಿಬ್ಬಂದಿ ನೇರವಾಗಿ ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ ಕಾರಣ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಲು ಸಾಧ್ಯವಾಯಿತು.
ಕಲಿಕಾ ಪ್ರಕ್ರಿಯೆಗೆ ಅಡಚಣೆಯಾಗುವ ಭೀತಿಯಿಂದ ವಿದ್ಯಾರ್ಥಿನಿ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!