ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆಎಸ್‌ಎನ್ ರಾಜೇಶ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
2021ಎ ಸೆ.25 ರಂದು ಮಧ್ಯಾಹ್ನ ರಾಜೇಶ್ ತನ್ನ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಬಂದಿದ್ದ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದಳು.
ಈ ಸಂದರ್ಭ ಆರೋಪಿ ಆಕೆಗೆ ಜೀವಬೆದರಿಕೆ ಹಾಕಿದ್ದಲ್ಲದೇ ಕೃತ್ಯದ ಬಗ್ಗೆ ದೂರಿನ ವಿಚಾರವನ್ನು ಮುಕ್ತಾಯಗೊಳಿಸುವಂತೆ ಮಂಗಳೂರಿನ ವಕೀಲ ಬಾರ್ ಅಸೋಸೊಯೇಶನ್ ಅಧ್ಯಕ್ಷರಿಗೆ ಒತ್ತಾಯ ಪತ್ರದಲ್ಲಿ ಬರೆಯಿಸಿಕೊಂಡು ಸಹಿ ಪಡೆದುಕೊಂಡಿದ್ದ.
ಬಳಿಕ ಕೃತ್ಯವನ್ನು ಮರೆಮಾಚುವ ಉದ್ದೇಶದಿಂದ ಒತ್ತಾಯದಿಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ.
ಆತನಿಗೆ ಅನಂತ ಭಟ್ ಮತ್ತು ಅಚ್ಯುತ್ ಭಟ್ ನೆರವು, ಆಶ್ರಯ ಒದಗಿಸಿದ್ದರು ಎಂದು ದೋಷಾರೋಪ ಪತ್ರದಲ್ಲಿ ತಿಳಿಸಿದ್ದಾರೆ.
ಮಂಗಳೂರು ನಗರ ಕಮೀಷನರೇಟ್‌ನ ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು ಅನಂತರ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.