Saturday, November 27, 2021

ಪುತ್ತೂರು: ವ್ಯಾಯಾಮ ಹೇಳುವ ನೆಪದಲ್ಲಿ ಅಪ್ರಾಪ್ತೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

 

ಪುತ್ತೂರಿನ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ.ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು.

ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.25ರಂಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಪುತ್ತೂರು ಕ್ಲಬ್ ಬಳಿ ಬಂಧಿಸಲಾಗಿದೆ.

ಸೊಂಟ ನೋವು ಎಂದು ಹೇಳಿದ್ದ ವಿದ್ಯಾರ್ಥಿನಿಗೆ ಎಲ್ಯಾಸ್ ಪಿಂಟೋರವರು ವ್ಯಾಯಾಮ ಮಾಡಿಸಿದರೆಂದೂ ಈ ವೇಳೆ ಆಕೆಯ ಸೊಂಟ ಮುಟ್ಟಿದರೆಂದೂ ಆರೋಪ ಕೇಳಿ ಬಂದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...