DAKSHINA KANNADA
“ಶೈಲಜಾ ಅಮರನಾಥ್ ಹಿಂದೂಗಳ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಉಗ್ರ ಹೋರಾಟ”
Published
2 years agoon
By
Adminಪುತ್ತೂರು: ಹಿಂದೂ ಸಮಾಜದ ಭಾವನೆಗೆ ನೋವು ಮಾಡಿದ ಶೈಲಜಾ ಅಮರನಾಥ್ ತಕ್ಷಣ ಹಿಂದೂಗಳ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾಳೆಯಿಂದ ಹೋರಾಟ, ಧರಣಿ ಮುಂದುವರೆಲಿದೆ. ಜಾಗ್ರತೆಯಿಂದ ಇರಿ ಎಂದು ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ನೀವು ಹಿಂದೂ ಸಮಾಜದ ಭಾವನೆಗೆ ನೋವುಂಟು ಮಾಡಿದ್ದೀರಿ, ಈ ಮೂಲಕ ಹಿಂದೂ ಸಮಾಜಕ್ಕೆ ದ್ರೋಹ ಬಗೆಯುತ್ತಿದ್ದೀರಿ.
ಇದನ್ನು ವಿಹೆಚ್‌ಪಿ ತೀವ್ರವಾಗಿ ಖಂಡಿಸುತ್ತದೆ. ಈ ಬಗ್ಗೆ ಪೊಲೀಸ್ ಇಲಾಖೆ ದೂರು ನೀಡಿದ್ದು, ದಾಖಲಾಗಿದೆ. ಎಂದರು.
ಆದ್ದರಿಂದ ತಕ್ಷಣ ಹಿಂದೂಗಳ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾಳೆಯಿಂದ ಹೋರಾಟ ಧರಣಿ ಮುಂದುವರೆಲಿದೆ. ಜಾಗ್ರತೆಯಿಂದ ಇರಿ ಎಂದು ಎಚ್ಚರಿಸಿದ್ದಾರೆ.
BIG BOSS
ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ
Published
8 minutes agoon
23/11/2024ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.
ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
BIG BOSS
ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್
Published
2 hours agoon
23/11/2024ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.
ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.
ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .
ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
LATEST NEWS
ಕರ್ನಾಟಕ ಉಪಚುನಾವಣೆ : ‘ಕೈ’ ಹಿಡಿದ ಮತದಾರ…ಕಮಲಕ್ಕೆ ಶಾಕ್
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
ಬಾಗಲಕೋಟೆ ಹೇರ್ ಡ್ರೈಯರ್ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಪ್ರಕರಣದ ಹಿಂದಿದೆ ಪ್ರೇಮ ಪುರಾಣ
ಪತಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನು ಕೊಂ*ದ ಪಾಪಿ ತಾಯಿ!
ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !
ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್..! 6 ಕೋಟಿ ಮೌಲ್ಯದ ಡ್ರ*ಗ್ಸ್ ಜಪ್ತಿ..!
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- Baindooru21 hours ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!