Thursday, October 21, 2021

ಶಾರದಾ ಮಾತೆಗೆ ಪ್ರಿಯವಾದ ಶಂಕರಪುರ ಮಲ್ಲಿಗೆ ಬೆಲೆ ಹೆಚ್ಚಳ: ಬೆಳೆಗಾರರಲ್ಲಿ ಮಂದಹಾಸ

ಉಡುಪಿ: ಶಾರದಾ ದೇವಿಗೆ ಅತ್ಯಂತ ಪ್ರಿಯವಾದ ಶಂಕಪುರ ಮಲ್ಲಿಗೆಯ ಬೆಲೆಯು ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಬೀರಿದೆ.

ಮಾರುಕಟ್ಟೆಯಲ್ಲಿ ಶಂಕರಪುರ ಮಲ್ಲಿಗೆಯ ಒಂದು ಅಟ್ಟೆಗೆ (ಸ್ಥಳೀಯ ಕರಾವಳಿ ಭಾಷೆಯಲ್ಲಿ ಅಟ್ಟೆ ಎಂದರೆ ಸುಮಾರು 3,200 ಹೂವುಗಳು)

1400 ರೂಪಾಯಿಗೆ ಮಾರಾಟವಾಗುತ್ತಿದ್ದು, ಶಂಕರಪುರದಲ್ಲಿ ಬೆಳೆಯುವ ಈ ಮಲ್ಲಿಗೆ ಹೂ ಪೇಟೆಂಟ್ ಪಡೆದ ಕರಾವಳಿಯ ಏಕಮಾತ್ರ ಹೂವಾಗಿದೆ.
ಮುಂಬೈ ಸೇರಿದಂತೆ ದೇಶ ವಿದೇಶಗಳಲ್ಲಿ ಈ ಮಲ್ಲಿಗೆಗೆ ಭಾರೀ ಬೇಡಿಕೆ ಇದ್ದು, ಸದ್ಯ ನವರಾತ್ರಿ ಹಿನ್ನೆಲೆಯಲ್ಲಿ ದೇವಿಗೆ ಪ್ರಿಯವಾದ ಶಂಕರಪುರ ಮಲ್ಲಿಗೆಯನ್ನು ಭಕ್ತರು ಹೆಚ್ಚಾಗಿ ಖರೀದಿ ಮಾಡುತ್ತಿದ್ದಾರೆ.

ಮಲ್ಲಿಗೆ ಜೊತೆಗೆ ಉಪ ಬೆಳೆಯಾದ ಜಾಜಿ ದರ 850 ರೂಪಾಯಿಗಳಿಗೆ ಏರಿಕೆಯಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...