Connect with us

DAKSHINA KANNADA

ಶತಕ ಧ್ವಜ ಬಿರುದಾಂಕಿತ ಶರತ್ ಕುಮಾರ್‌ಗೆ ಶ್ರೀ ವಾಗೀಶ್ವರೀ ಶತಮಾನೋತ್ಸವ ಸಂಮಾನ

Published

on

ಮಂಗಳೂರು: “ಹಲವು ವರ್ಷಗಳಿಂದ ಈ ಸಂಘದ ಕಾರ್ಯಕ್ರಮಗಳ ಬಗ್ಗೆ ತಿಳಿದಿದ್ದೆ. ಈಗ ಶತಮಾನೋತ್ಸವ ಸಂದರ್ಭದ ಸರಣಿಯಲ್ಲಿ ತನಗೆ ಅಧ್ಯಕ್ಷ ಸ್ಥಾನ ನೀಡಿದ್ದು ಅತ್ಯಂತ ಸಂತೋಷ ನೀಡಿದೆ. ಈ ಸಂಘ ಇನ್ನಷ್ಟು ಹೆಸರು ಗಳಿಸಲಿ” ಎಂದು ವೀರಸಿಂಹ ಶೆಣೈ ಹೇಳಿದರು.

ಅವರು ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 17ನೆಯ ಸರಣಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಶರತ್ ಕುಮಾರ್ ಕದ್ರಿಯವರನ್ನು ಸಮ್ಮಾನಿಸಿ ತಮ್ಮ ಆಶಯವನ್ನು ತಿಳಿಸಿದರು.


ಕರ್ನಾಟಕ ಯಕ್ಷಗಾನ ಅಕಾಡಮಿಯ ಸಹಭಾಗಿತ್ವದಲ್ಲಿ 50 ಕಲಾವಿದರ ಸಂಮಾನ ,50 ಕೀರ್ತಿಶೇಷ ಕಲಾವಿದರ ಸಂಸ್ಮರಣೆ ಹಾಗೂ 50 ವಿಶೇಷ ತಾಳಮದ್ದಳೆ ಕೂಟಗಳು ಕಳೆದ ನಾಲ್ಕು ತಿಂಗಳುಗಳಿಂದ ಪ್ರತೀ ಭಾನುವಾರ ಸಂಯೋಜಿಸಲ್ಪಟ್ಟಿವೆ.

”ಶರತ್ ಕುಮಾರ್ ಕದ್ರಿಯವರು ಉತ್ತಮ ಸಂಘಟಕ ,ಹವ್ಯಾಸಿ ಬಳಗ ಕದ್ರಿ (ರಿ ), ಇದರ ಸ್ಥಾಪಕಾಧ್ಯಕ್ಷ, ಶಾಲೆ ಕಾಲೇಜುಗಳಲ್ಲಿ ಯಕ್ಷಗಾನ ಕಲಿಸಿ, ಸ್ಪರ್ಧೆಗಳಿಗೆ ತರಬೇತಿ ನೀಡಿದವರು.

100 ಕಲಾವಿದರಿಗೆ ಸಂಮಾನ ಮಾಡಿ “ಶತಕ ಧ್ವಜ” ಎಂಬ ಬಿರುದನ್ನು ಪಡೆದವರು” ಎಂದು ಶರತ್ ಕುಮಾರ್ ಕದ್ರಿ ಇವರನ್ನು ಪ್ರಧಾನ ಕಾರ್ಯದರ್ಶಿ ಪಿ.ಸಂಜಯ ಕುಮಾರ್ ರಾವ್ ಅಭಿನಂದಿಸಿದರು.

ಸನ್ಮಾನಕ್ಕೆ ಉತ್ತರಿಸಿದ ಶ್ರೀ ಶರತ್ ಕುಮಾರ್ ಕದ್ರಿಯವರು, 1991 ರಲ್ಲಿ ಭಾರತೀಯ ವಿದ್ಯಾಭವನದಲ್ಲಿ ಕಲಿತ ಬಳಿಕ ಯಕ್ಷಗಾನವನ್ನು ಮುಂದಿವರಿಸಿದ್ದು ಈ ಸಂಘದಲ್ಲಿ.

ತನಗೆ ನೀಡಿದ ಸನ್ಮಾನ ನನ್ನ ಗುರುಗಳಾದ ಪಿ.ವಿ.ಪರಮೇಶ್ ಮತ್ತು ಸರ್ಪಂಗಳ ಈಶ್ವರ ಭಟ್ ಇವರಿಗೆ ಅರ್ಪಿಸುತ್ತೇನೆ ಎಂದರು.

ಸಂಘದ ಗೌರವಾಧ್ಯಕ್ಷ ಪ್ರದೀಪ್ ಕುಮಾರ ಕಲ್ಕೂರ ಅವರು ” ಶರತ್ ಕುಮಾರ್ ಕದ್ರಿಯವರು ಮದ್ದಳೆ ವಾದನ, ಪ್ರಸಾಧನ ಹಾಗೂ ನಾಟ್ಯಗುರು ಮತ್ತು ಸಂಘಟಕ. ಇಂತಹ ಕಲಾವಿದರು ಬಹಳ ವಿರಳ. ಇವರಿಗೆ ಮಹಾಮಾಯೆಯ ಅನುಗ್ರಹ ಸದಾ ಇರಲಿ” ಎಂದು ಹಾರೈಸಿದರು.

ನಾರಾಯಣ ದೇವಾಂಗ ಸಂಸ್ಮರಣೆ
ಕೀರ್ತಿಶೇಷ ನಾರಾಯಣ ದೇವಾಂಗರು ಹಲವು ವರ್ಷಗಳ ಕಾಲ ವಾಗೀಶ್ವರೀ ಸಂಘದಲ್ಲಿ ಅರ್ಥಧಾರಿಯಾಗಿ, ಭಾಗವತರಾಗಿ ಕಲಾ ಸೇವೆಯನ್ನು ಮಾಡಿದವರು.

ವೃದ್ಧಾಪ್ಯದಲ್ಲಿಯೂ ಪ್ರತಿ ವಾರವೂ ತಪ್ಪದೆ ಭಾಗವಹಿಸುತ್ತಿದ್ದ ದೇವಾಂಗರ ಸಂಸ್ಮರಣೆ ಮಾಡಲಾಯಿತು.

ಶಿವಾನಂದ ಪೆರ್ಲಗುರಿ ಸನ್ಮಾನ ಪತ್ರ ವಾಚಿಸಿದರು. ಶ್ರೀಮತಿ ಮಧುಮತಿ ಶೆಣೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಅಧ್ಯಕ್ಷ ಶ್ರೀ ಶ್ರೀನಾಥ್ ಪ್ರಭು, ಕೋಶಾಧಿಕಾರಿ ಶ್ರೀ ಶಿವಪ್ರಸಾದ್ ಪ್ರಭು, ಉಪಾಧ್ಯಕ್ಷೆ ಶ್ರೀಮತಿ ಪ್ರಫುಲ್ಲ ನಾಯಕ್ , ಭಾಗವತ ಅಶೋಕ್ ಬೋಳೂರು ಉಪಸ್ಥಿತರಿದ್ದರು.

ಬಳಿಕ ಸಂಘದ ಕಲಾವಿದರಿಂದ “ಸೇತು ಬಂಧನ” ತಾಳಮದ್ದಳೆ ಜರಗಿತು

DAKSHINA KANNADA

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್‌ಗಳ ಹಗಲು ದರೋಡೆ..! ಏನಿದು ಘಟನೆ?

Published

on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್‌ಆರ್‌ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿ‌ಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್‌2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್‌ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

subrahmanya

ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.

Continue Reading

DAKSHINA KANNADA

ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Published

on

ಮಂಗಳೂರು : ಬಿಗ್‌ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್‌ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ.  ಅಲ್ಲದೇ ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು. ತುಳು ಸಿನಿಮಾದಲ್ಲಿ ಮಿಂಚಿದ್ದ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಬಳಿಕ ಕನ್ನಡ ಚಿತ್ರರಂಗದಲ್ಲೂ ಅವಕಾಶ ಸಿಕ್ಕಿತ್ತು. ಇದೀಗ ತಮಿಳು ಚಿತ್ರರಂಗಕ್ಕೂ ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ಅಮೃತ ಸಾರಥಿ ಎಂಬುವವರು ನಿರ್ದೇಶನ ಮಾಡುತ್ತಿರುವ ತಮಿಳು ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ. ಯೋಗಿ ಬಾಬು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ‘ಸನ್ನಿಧಾನಂ PO’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರೂಪೇಶ್ ಶೆಟ್ಟಿ, “ನನ್ನ ಮೊದಲ ತಮಿಳು ಚಿತ್ರ ಸನ್ನಿಧಾನಮ್ PO ಇದರ ಶೂಟಿಂಗ್ ನಿಮ್ಮೆಲ್ಲರ ಆಶೀರ್ವಾದದಿಂದ ಭರದಿಂದ ಸಾಗುತ್ತಿದೆ. ಯೋಗಿ ಬಾಬು ಅವರ ಜತೆ ನಟಿಸುವುದೇ ನನ್ನ ಪಾಲಿನ ಅದೃಷ್ಟ. ನನ್ನ ಸಿನಿ ಪಯಣ ಈ ರೀತಿಯಾಗಿ ಸಾಗಲು ನೀವೇ ಮೊದಲ ಕಾರಣ. ನಿಮ್ಮ ಪ್ರೀತಿ ಪ್ರೋತ್ಸಾಹ ಎಂದೂ ಹೀಗೆ ಇರಲಿ. ದೇವರಿಗೆ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.

2023ರ ನವೆಂಬರ್ ತಿಂಗಳಲ್ಲಿ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರದ ಮೂರನೇ ಹಂತದ ಶೂಟಿಂಗ್ ಈಗ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ದಿನಾಂಕವನ್ನು ರೂಪೇಶ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರೂಪೇಶ್ ಶೆಟ್ಟಿ ಅವರು ತುಳು ಸಿನಿಮಾಗಳಿಂದ ಬಣ್ಣದ ಬದುಕು ಆರಂಭಿಸಿದರು. 2015ರಲ್ಲಿ ರಿಲೀಸ್ ಆದ ‘ಐಸ್​ ಕ್ರೀಮ್’ ಹೆಸರಿನ ತುಳು ಚಿತ್ರದ ಮೂಲಕ ಅವರು ಹೀರೋ ಆದರು. 2023ರಲ್ಲಿ ಅವರ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್ ಆಯಿತು. ಅವರು ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ ವಿನ್ನರ್ ಆಗಿದ್ದಾರೆ.

Continue Reading

DAKSHINA KANNADA

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಶುಭಾರಂಭ

Published

on

ಮಂಗಳೂರು : ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್‍ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.

ಸಾಮಾಜಿಕ ಕಳಕಳಿ ಶ್ಲಾಘನೀಯ : ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ,  ಶ್ರೀಮಂತ ವರ್ಗದವರಿಗೆ ನಗರಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು, ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.’

ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆ : ಚಿತ್ತರಂಜನ್ ಬೋಳಾರ್

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು, ಉಳ್ಳಾಲದ ಮಾಡೂರಿನಲ್ಲಿ ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದರು.

ಭದ್ರತಾಕೋಶ ಉದ್ಘಾಟನೆ : 

ಎಲ್ಯಾರ್ ಪದವು ಹೊಲಿ ಕ್ರಾಸ್ ಚರ್ಚ್‌ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು.

ಕೊಣಾಜೆ ಬೆಳ್ಮ ಸಿಎಸ್‍ಐ ಬೆತಾನೀಯ ಚರ್ಚ್‌ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್‍ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾ. ಪಂ. ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು.

ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು.

ಇದನ್ನೂ ಓದಿ : ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್‍ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ .ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

”ಕೊರೊನಾ ಸಂದರ್ಭದಲ್ಲಿ 10 ಕೋಟಿ ಇದ್ದ ಚಿನ್ನಾಭರಣ ಸಾಲ ಒಮ್ಮೆಲೇ 90 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್‍ಗಳಿಗೆ ಡಿಪಾಸಿಟ್ ಮಾಡಲು ಆರ್ ಟಇ ಜಿ ಎಸ್ ಸೌಲಭ್ಯ, ಇ ಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.”

ಸಹಕಾರ ರತ್ನ ಚಿತ್ತರಂಜನ್ ಬೋಳಾರ, ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಮಂಗಳೂರು

Continue Reading

LATEST NEWS

Trending