Connect with us

    DAKSHINA KANNADA

    ಸತ್ಯವಾದ ದೈವದ ನುಡಿ… ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿ

    Published

    on

    ಉಡುಪಿ: ಅಭಯ ನೀಡಿದ್ದ ದೈವದ ಕಾರ್ಣಿಕದಿಂದ ಕೊಲೆ ಆರೋಪಿ ಪತ್ತೆಯಾಗಿದ್ದು, ತಾನಾಗೆ ಬಂದು ನ್ಯಾಯಾಲಯಕ್ಕೆ ಶರಣಾಗಿರುವ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ವರ್ಷ ಪಾಂಗಾಳದಲ್ಲಿ ಡ್ರ್ಯಾಗರ್ ನಿಂದ ಚುಚ್ಚಿ ಶರತ್‌ ಶೆಟ್ಟಿಯನ್ನು ಕೊಲೆಗೈದ ಆರೋಪಿ ಇದೀಗ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಹಿಂದೆ ದೈವ ನೀಡಿದ್ದ ಕಾರ್ಣಿಕದ ನುಡಿ ಸತ್ಯವಾಯಿತಾ ಎಂಬ ಮಾತು ಕೇಳಿ ಬರುತ್ತಿದೆ. ಶರತ್‌ ಶೆಟ್ಟಿ ಹತ್ಯೆ ನಡೆದು ದಿನಗಳು ಕಳೆದರೂ ಕೊಲೆ ಆರೋಪಿಯ ಪತ್ತೆಯಾಗದೇ ಇದ್ದಾಗ ಕುಟುಂಬದವರು ದೈವದ ಮೊರೆ ಹೋಗಿದ್ದರು. ಈ ವೇಳೆ ‘ಕೊಲೆಗಾರ ಎಲ್ಲೇ ಇದ್ದರೂ ತಂದು ನಿಲ್ಲಿಸುತ್ತೇನೆ’ ಎಂದು ದೈವ ಅಭಯ ನೀಡಿತ್ತು. ಇದೀಗ ಆರೋಪಿ ತಾನಾಗಿಯೇ ಬಂದು ನ್ಯಾಯಾಲಯಕ್ಕೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.

                                                        ಶರತ್ ಶೆಟ್ಟಿ

    ಘಟನೆ:
    2023 ರ ಫೆಬ್ರವರಿ 5 ರಂದು ಉಡುಪಿಯ ಪಾಂಗಳ ಪಡುವಿನಲ್ಲಿ ಬಬ್ಬು ಸ್ವಾಮಿ ದೈವಸ್ಥಾನದ ನೇಮದಲ್ಲಿ ಭಾಗವಹಿಸಿದ್ದ ಶರತ್ ಶೆಟ್ಟಿ (42) ಅವರು ದುಷ್ಕರ್ಮಿಗಳಿಗೆ ಬಲಿಯಾಗಿದ್ದರು. ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದುರ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತಾದ್ರೂ ಆರೋಪಿಗಳು ಯಾರು ಅನ್ನೋದು ಪತ್ತೆಯಾಗಿರಲಿಲ್ಲ. ಇದರಿಂದ ಬೇಸತ್ತ ಕುಟುಂಬಸ್ಥರು ಪಾಂಗಾಳದ ಮನೆಯಲ್ಲಿ ವರ್ತೆ ಪಂಜುರ್ಲಿಗೆ ನೇಮೋತ್ಸವವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ದೈವ ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ ಎಂದು ಅಭಯ ನೀಡಿತ್ತು.

    Read More..; ಪಾಂಗಳ ಶರತ್ ಶೆಟ್ಟಿ ಕೊಲೆ ಪ್ರಕರಣ-ನಾಲ್ವರ ಬಂಧನ: ಕಲಿ ಯೋಗೀಶ ಸೇರಿ ಹಲವರಿಗೆ ಶೋಧ

    ಅದರಂತೆಯೇ ಮೇ.23ರಂದು ಪ್ರಕರಣ ಎ1 ಆರೋಪಿ ಯೋಗೀಶ್ ಆಚಾರ್ಯ ತಾನಾಗಿಯೇ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಒಂದು ವರ್ಷ ಮೂರು ತಿಂಗಳು ತಲೆಮರಿಸಿಕೊಂಡಿದ್ದ ಈತ ಉಡುಪಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿದ್ದಾರೆ.
    ಶರತ್ ಶೆಟ್ಟಿ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯನನ್ನು ಮೇ.30ರ ವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಪ್ರಕರಣದ ಪ್ರಸ್ತುದ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending