Tuesday, October 19, 2021

ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಸಹಚರ ಸಾದೀಕ್ ಬಂಗಾಳಿಯ ಬಂಧನ.!

ಮುಂಬಯಿ : ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಹಾಗೂ ಮೋಸ್ಟ್ ವಾಟೆಂಡ್ ಆಗಿದ್ದ ಶಾರ್ಪ್ ಶೂಟರ್ ಒಬ್ಬನನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

ಸಾದೀಕ್ ಬಂಗಾಳಿ (44) ಬಂಧಿತ ಆರೋಪಿಯಗಿದ್ದಾನೆ. ಆತನಿಂದ ಒಂದು ಪಿಸ್ತೂಲ್ ಮುಂಬಯಿ ಕ್ರೈಂ ಬ್ರಾಂಚ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಸಾದೀಕ್ ರವಿ ಪೂಜಾರಿ ಗ್ಯಾಂಗ್ ನ ಪ್ರಮುಖ ಶಾರ್ಪ್ ಶೂಟರ್ ಆಗಿದ್ದ.ಆತ ಮುಂಬಯಿಯ ರಾಜಕೀಯ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪರಾರಿಯಾಗಿದ್ದ.ಮತ್ತು ಕೆಲವೊಂದು ಕೇಸ್ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಎಂದು ತಿಳಿದು ಬಂದಿದೆ.

ಇನ್ನೊಂದು ಕೊಲೆ ಮಾಡಲು ಮುಂಬಯಿಗೆ ಆಗಮಿಸಿದ್ದಾನೆ ಎಂಬ ಖಚಿತ ಮಾಹಿತಿ ಆಧಾರಿಸಿ ಮುಂಬಯಿ ಕ್ರೈಂ ಬ್ರಾಂಚ್ ಎಇಸಿ ತಂಡ ಪೊಲೀಸ್ ಅಧಿಕಾರಿ ಸುನೀಲ್ ಪವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಸಾದೀಕ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಆತನಲ್ಲಿದ್ದ ಪಿಸ್ತೂಲ್ ಸೇರಿ ಕೆಲವೊಂದು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಭೂಗತ ಪಾತಕಿ ರವಿ ಪೂಜಾರಿ ಈಗಾಗಲೇ ಮುಂಬೈ ಪೋಲಿಸರ ವಶದಲ್ಲಿದ್ದು, ಸಾದೀಕ್ ಬಂಧನದಿಂದ ಭೂಗತ ಜಗತ್ತಿನ ಆನೇಕ ಕರಾಳ ಕಥೆಗಳು ಹೊರಬರಲಿವೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...