DAKSHINA KANNADA
ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ..!
ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ..!
ಮಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಅವರು ಶಶಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ನೂತನ ಕಮಿಷನರ್ ಎನ್. ಶಶಿಕುಮಾರ್ ಅವರು ಚಿತ್ರದುರ್ಗ ಮೂಲದವರಾಗಿದ್ದು, 2007ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಬಿಎಸ್ಸಿ ಕೃಷಿ ಪದವೀಧರರಾಗಿರುವ ಇವರು, ಈ ಮೊದಲು ಬೆಂಗಳೂರು ಉತ್ತರ ಡಿಸಿಪಿ ಆಗಿ, ವೈರ್‌ಲೆಸ್ ವಿಭಾಗ, ಹಾವೇರಿ, ಚಿಕ್ಕಮಗಳೂರು ಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದಾರೆ.
ಈ ಸಂದರ್ಭ ಸುದ್ದಿಗಾರೊಂದಿಗೆ ಮಾತನಾಡಿದ ಪೊಲೀಸ್ ಸಿಬಂದಿ ಅಥವಾ ಅಧಿಕಾರಿಗಳ ಮೇಲೆ ದಾಳಿ ನಡೆಸಿದರೆ ಸುಮ್ಮನಿರಲ್ಲ. ನಗರದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಘಟನೆ ಬಗ್ಗೆ ತಿಳಿದಿದೆ.
ಇಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸದೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವಾಗ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ.
ಸರ ಅಪಹರಣ, ಕಳ್ಳತನ ಮೊದಲಾದ ಕೃತ್ಯಗಳನ್ನು ತಡೆಗಟ್ಟಲು ಈಗಾಗಲೇ ನಗರದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ.
ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು. ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಪೊಲೀಸ್ ಪೋನ್-ಇನ್ ಕಾರ್ಯಕ್ರಮ ಪುನಃ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಅಧಿಕಾರ ಹಸ್ತಾಂತರ ಮಾಡಿದ ನಿರ್ಗಮಿತ ಪೊಲೀಸ್ ಆಯುಕ್ತರಾದ ವಿಕಾಶ್ ಕುಮಾರ್ ಅವರು ಟ್ವೀಟ್ ಮಾಡಿ ಮಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸಿದ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ.
Handed over the charge today to Mr Shashi Kumar. Wishing him good luck in his new assignment. I had a wonderful association with Mangalore City which will be etched in my long lasting memory lane. I thank the wonderful people of Kudla for being extremely communicative & cordial.
— Mangaluru City Police (@compolmlr) January 1, 2021
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
DAKSHINA KANNADA
ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.
ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!