BANTWAL
ಶಾಸ್ತ್ರಿ ಶೂಟೌಟ್ ಪ್ರಕರಣ: ರಾಘವೇಶ್ವರ ಶ್ರೀ, ಡಾ.ಪ್ರಭಾಕರ ಭಟ್ ವಿರುದ್ದದ ಪ್ರಕರಣ ರದ್ದು ಮಾಡಿ ಹೈಕೋರ್ಟ್ ತೀರ್ಪು..!
Published
2 years agoon
By
Adminಪುತ್ತೂರಿನಲ್ಲಿ ರಾಮಚಂದ್ರಾಪುರ ಮಠದ ಭಕ್ತನೆನ್ನಲಾದ ಬಂಟ್ವಾಳ ಸಮೀಪದ ಕೆದಿಲ ನಿವಾಸಿ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ ರಾಘವೇಶ್ವರ ಶ್ರೀ ಹಾಗೂ ಆರ್.ಎಸ್.ಎಸ್. ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದದ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
ಬೆಂಗಳೂರು: ಪುತ್ತೂರಿನಲ್ಲಿ ರಾಮಚಂದ್ರಾಪುರ ಮಠದ ಭಕ್ತನೆನ್ನಲಾದ ಬಂಟ್ವಾಳ ಸಮೀಪದ ಕೆದಿಲ ನಿವಾಸಿ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ ರಾಘವೇಶ್ವರ ಶ್ರೀ ಹಾಗೂ ಆರ್.ಎಸ್.ಎಸ್. ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದದ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ರಾಘವೇಶ್ವರ ಶ್ರೀಗಳ ವಿರುದ್ದ ಹಲವು ಪ್ರಕರಣಗಳು ಮುನ್ನಲೆಗೆ ಬಂದ ಸಂದರ್ಭದಲ್ಲೇ ರಾಮಚಂದ್ರಾಪುರ ಮಠದ ಭಕ್ತ ಎನ್ನಲಾಗಿದ್ದ ಶ್ಯಾಮಪ್ರಸಾದ್ ಶಾಸ್ತ್ರಿ ಎಂಬವರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
2014ರ ಆಗಸ್ಟ್ 31ರಂದು ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಮಚಂದ್ರಾಪುರ ಮಠದವರ ಬೆದರಿಕೆಗಳೇ ಈ ಘಟನೆಗೆ ಕಾರಣ ಎಂದು ಮೃತರ ಪತ್ನಿ ದೂರಿದ್ದರು.
ಈ ಪ್ರಕರಣದಲ್ಲಿ ರಾಘವೇಶ್ವರ ಶ್ರೀ, ಉದ್ಯಮಿ ಬೋನಂತಾಯ ಶಿವಶಂಕರ ಭಟ್, ಹಾಗೂ ಆರೆಸ್ಸೆಸ್ ನಾಯಕ ಪ್ರಭಾಕರ ಭಟ್ ಅವರನ್ನು ಆರೋಪಿಗಳೆಂದು ಪರಿಗಣಿಸಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಗಂಭೀರ ಪ್ರಕರಣದಲ್ಲಿ ಆರೆಸ್ಸೆಸ್ ನಾಯಕ ಪ್ರಭಾಕರ ಭಟ್ ಪರವಾಗಿ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಹೈಕೋರ್ಟ್‌ನಲ್ಲಿ ಈ ಚರ್ಜ್‌ಶೀಟನ್ನು ಪ್ರಶ್ನಿಸಿದರು.
ಅದೇ ಹೊತ್ತಿಗೆ ರಾಘವೇಶ್ವರ ಶ್ರೀಗಳೂ ತಮ್ಮ ವಿರುದ್ದ ಆಧಾರ ರಹಿತ ಆರೋಪ ಹೊರಿಸಲಾಗಿದೆ ಎಂದು ಕೋರ್ಟ್‌ನ ಗಮನಸೆಳೆದರು.
ಹೈಕೋರ್ಟ್‌ನಲ್ಲಿಂದು ಈ ಅರ್ಜಿ ಕುರಿತಂತೆ ನಡೆದ ವಿಚಾರಣೆ ಕುತೂಹಲದ ಕೇಂದ್ರಬಿಂದುವಾಯಿತು.
ಡಾ.ಪ್ರಭಾಕರ ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಪಿ.ಪಿ.ಹೆಗ್ಡೆ, ಈ ಪ್ರಕರಣದಲ್ಲಿ ಗಣ್ಯರ ವಿರುದ್ದ ದುರುದ್ದೇಶದಿಂದ ಪ್ರಚೋದನೆಯ ಸುಳ್ಳು ಆರೋಪ ಹೊರಿಸಲಾಗಿದೆ.
ಯಾವುದೇ ಸಾಕ್ಷ್ಯಾಧಾರವಿಲ್ಲದೆ ಸಿಐಡಿ ಪೊಲೀಸರು ದೋಷಾರೋಪ ಹೊರಿಸಿದ್ದಾರೆ ಎಂದು ನ್ಯಾಯಪೀಠದ ಗಮನಸೆಳೆದರು.
ವಾದವನ್ನು ಆಲಿಸಿದ ಹೈಕೋರ್ಟ್ ಪೀಠ, ರಾಘವೇಶ್ವರ ಶ್ರೀಗಳ ಹಾಗೂ ಡಾ.ಪ್ರಭಾಕರ ಭಟ್ ವಿರುದ್ದದ ದೋಷಾರೋಪವನ್ನೇ ರದ್ದುಪಡಿಸಿತು ಎಂದು ಪಿ.ಪಿ.ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಏನಿದು ಪ್ರಕರಣ..?
ಹೊಸನಗರ ಶ್ರೀ ರಾಮಚಂದ್ರಾಪುರ ಮಠದದಲ್ಲಿ ಸೇವೆ ಸಲ್ಲಿಸುತ್ತಿದ್ದರೆನ್ನಲಾದ ಶ್ಯಾಮ ಪ್ರಸಾದ್ ಶಾಸ್ತ್ರಿ ಅವರು 2014ರ ಆಗಸ್ಟ್ 31ರಂದು ಕೋವಿಯಿಂದ ಗುಂಡು ಹಾರಿಸುಕೊಂಡು ಸಾವನ್ನಪ್ಪಿದ್ದರು.
ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಮೃತರ ಪತ್ನಿ ಸಂದ್ಯಾ ಲಕ್ಷ್ಮಿ ದೂರು ದಾಖಲಿಸಿದ್ದರು.
ಮಠದ ಪರವಾಗಿರುವ ಮಂದಿಯಿಂದ ನಿರಂತರ ಬೆದರಿಕೆ ಕರೆ ಬರುತ್ತಿದ್ದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿ ತನ್ನ ಪತಿ ಸಾವಿಗೆ ಶರಣಾಗಿದ್ದಾರೆಂದು ಅವರು ದೂರಿದ್ದರು.
ರಾಜ್ಯಾದ್ಯಂತ ಭಾರೀ ಸುದ್ದಿಯಾದ ಈ ಪ್ರಕರಣದ ತನಿಖೆಯನ್ನು ಆಗಿನ ಸರ್ಕಾರ ಸಿಐಡಿಗೆ ವಹಿಸಿತ್ತು.
ಈ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ರಾಘವೇಶ್ವರ ಶ್ರೀ ವಿರುದ್ದದ ಪ್ರಕರಣಗಳಲ್ಲಿ ದಿವಾಕರ ಶಾಸ್ತ್ರಿ ಹಾಗೂ ಪ್ರೇಮಲತಾ ಶಾಸ್ತ್ರಿ ವಿರುದ್ದ ಹೇಳಿಕೆ ನೀಡಲು ಬೋನಂತಾಯ ಶಿವಶಂಕರ ಭಟ್ ಹಾಗೂ ಡಾ.ಪ್ರಭಾಕರ ಭಟ್ ಅವರು ಶ್ಯಾಮಪ್ರಸಾದ್ ಶಾಸ್ತ್ರಿ ಮೇಲೆ ಒತ್ತಡ ಹೇರಿದ್ದು, ನಿರಾಕರಿಸಿದಲ್ಲಿ ತಾವೂ ಬಂಧನಕ್ಕೊಳಗಾಗಬೇಕಾದೀತು ಎಂದು ಬೆದರಿಸಿದ್ದರು.
ಇದರಿಂದ ನೊಂದು ಶ್ಯಾಮ್ ಪ್ರಸಾದ್ ಶಾಸ್ತ್ರಿ ಸಾವಿಗೆ ಶರಣಾಗಿದ್ದಾರೆ ಎಂದು ಸಾಕ್ಷಿದಾರರ ಹೇಳಿಕೆ ದಾಖಲಿಸಿಕೊಂಡಿದ್ದರು.
ಈ ಹೇಳಿಕೆಗಳನ್ನು ಆಧರಿಸಿ ರಾಘವೇಶ್ವರ ಶ್ರೀ, ಡಾ.ಪ್ರಭಾಕರ ಭಟ್, ಹಾಗೂ ಬೋನಂತಾಯ ಶಿವಶಂಕರ ಭಟ್ ವಿರುದ್ದ ಸಿಐಡಿ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಆದರೆ ತನಿಖಾಧಿಕಾರಿಗಳು ಈ ಆರೋಪ ಸಂಬಂಧ ನಿರ್ದಿಷ್ಟ ಸಾಕ್ಷಿ ಒದಗಿಸಿಲ್ಲ ಎಂದು ವಕೀಲರಾದ ಪಿ.ಪಿ.ಹೆಗ್ಡೆ ಅವರು ಹೈಕೋರ್ಟ್‌ನಲ್ಲಿ ಬಲವಾಗಿ ವಾದ ಮಂಡಿಸಿದ್ದು, ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಈ ಪ್ರಮುಖರ ವಿರುದ್ಧದ ಆರೋಪಗಳನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ.
You may like
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
ನೀವು ಹೀಗೆ ಮಾಡಿದ್ರೆ ‘ಗೂಗಲ್ ಪೇ’ನಲ್ಲಿ ಸುಲಭವಾಗಿ 1,000 ರೂಪಾಯಿ ಪಡೆಯಬಹುದು
ತಾಯಂದಿರಿಂಲೇ ಮಕ್ಕಳ ಅ*ಪಹರಣ; ಉದ್ದೇಶ ಕೇಳಿದ್ರೆ ನೀವೆ ಶಾಕ್ ಆಗ್ತೀರ !!
ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
Trending
- LATEST NEWS1 day ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS3 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS1 day ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ