Connect with us

LATEST NEWS

ದೇಶಕಲ್ಯಾಣಾರ್ಥವಾಗಿ ಕೊಲ್ಲೂರು ದೇಗುಲದಲ್ಲಿ ಶತಚಂಡಿಕಾಯಾಗ

Published

on

ಕುಂದಾಪುರ: ದೇಶದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಕಳೆದ‌ ನಾಲ್ಕು ದಿನಗಳಿಂದ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಶತಚಂಡಿಕಾ ಯಾಗ ನಡೆಯಿತು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕ ಕಾಳೀದಾಸ ಭಟ್ಟರ ಮಾರ್ಗದರ್ಶನದಲ್ಲಿ ನಡೆದ ನಾಲ್ಕು ದಿನಗಳ ಶತಚಂಡಿಕಾಯಾಗ ಶುಕ್ರವಾರ ಪೂರ್ಣಾಹುತಿಗೊಂಡಿತು.


ಮಾಧ್ಯಮ ಜೊತೆ ಮಾತನಾಡಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನನ್ನ ಕ್ಷೇತ್ರ ಮಾತ್ರವಲ್ಲ, ದೇಶದ ಕಲ್ಯಾಣಕ್ಕಾಗಿ ಶತಚಂಡಿಕಾಯಾಗ ಮಾಡಲಾಗಿದೆ.

ಇಪ್ಪತ್ತು ವರ್ಷಗಳ ಹಿಂದೆ ಕಮಲಶಿಲೆಯಲ್ಲಿ ಇದೇ ತರಹದ ಶತಚಂಡಿಕಾಯಾಗ ಮಾಡಿದ್ದು, ದೇಶ ಸುಭಿಕ್ಷವಾಗಬೇಕು.

ಅತಿವೃಷ್ಟಿ, ಅನಾವೃಷ್ಟಿ, ಪ್ರಕೃತಿ ವಿಕೋಪಗಳಿಂದ ಮುಕ್ತಿ ದೊರಕಿ ಜನಸಾಮಾನ್ಯರು ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಲಾಗಿದೆ ಎಂದರು.

ರಾಜ್ಯಸಭಾ ಸದಸ್ಯ ನಟ ಜಗ್ಗೇಶ್, ಇಂಧನ ಸಚಿವರಾದ ಸುನಿಲ್ ಕುಮಾರ್ ಶೃಂಗೇರಿ ಶಾಸಕ ರಾಜೇಗೌಡ ,ಯಸ್ ಪಾಲ್ ಸುವರ್ಣ, ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಪಕ್ಷದ ಕಾರ್ಯಕರ್ತರು ಅಧಿಕಾರಿ ವರ್ಗದವರು ಸಾವಿರಾರು ಜನ ಭಕ್ತರು ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

FILM

ಟಿ ಆರ್ ಪಿ ಪಟ್ಟಿಯಲ್ಲಿ ಯಾವ ಧಾರಾವಾಹಿಗೆ ಸಿಕ್ಕಿದೆ ಮೊದಲ ಸ್ಥಾನ?

Published

on

ಬೆಂಗಳೂರು : ‘ಕಿರುತೆರೆ’ ಜನರ ನೆಚ್ಚಿನ ಮನರಂಜನಾ ತಾಣ. ಇಲ್ಲಿ ಸಾವಿರಾರು ಧಾರಾವಾಹಿಗಳು, ರಿಯಾಲಿಟಿ ಶೋ ಗಳದೇ ದರ್ಬಾರು. ಮನೆಮಂದಿಯೆಲ್ಲಾ ಕಿರುತೆರೆಯನ್ನು ನೆಚ್ಚಿಕೊಂಡಿದ್ದಾರೆ. ದೈನಂದಿನ ದಿನಚರಿಯಲ್ಲಿ ಧಾರಾವಾಹಿಗಳೂ ಸೇರಿಕೊಂಡಿವೆ. ತಮ್ಮ ನೆಚ್ಚಿನ ಧಾರಾವಾಹಿಗಳನ್ನು ನೋಡಲು ಕಾಯುತ್ತಿರುತ್ತಾರೆ.

ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರೂ ಧಾರಾವಾಹಿ ಪ್ರಿಯರು. ಮಧ್ಯಾಹ್ನ, ರಾತ್ರಿ ಪ್ರಸಾರವಾಗುವ ಧಾರಾವಾಹಿಗಳನ್ನು ಬಿಡದೆ ನೋಡುವ ವರ್ಗವಿದೆ. ಆಯಾ ಧಾರಾವಾಹಿಗೆ ಆಯಾ ವೀಕ್ಷಕ ವರ್ಗವಿದೆ. ಹೀಗಿರುವ ಯಾವ ಧಾರಾವಾಹಿ ಎಷ್ಟು ಟಿ ಆರ್ ಪಿ ಹೊಂದಿದೆ ಅನ್ನೋ ಡಿಟೇಲ್ಸ್ ಇಲ್ಲಿದೆ.

ಟಾಪ್ 5 ಧಾರಾವಾಹಿಗಳು :

ಪುಟ್ಟಕ್ಕನ ಮಕ್ಕಳು


ಮೂವರು ಹೆಣ್ಣುಮಕ್ಕಳ ತಾಯಿಯಾಗಿ ಕಷ್ಟ ಕಾರ್ಪಣ್ಯಗಳಿಂದ ಬೆಂದಿರುವ ಮಹಿಳೆಯ ಪ್ರಧಾನ ಕಥೆ ಒಳಗೊಂಡಿರುವ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’. ಹಿರಿಯ ನಟಿ ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ 17ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ವೀಕ್ಷಕರ ಅಚ್ಚುಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿದೆ. ಹಿರಿಯ ನಟಿ ಉಮಾಶ್ರೀ, ಹಿರಿಯ ನಟ ರಮೇಶ್‌ ಪಂಡಿತ್‌, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಪಾತ್ರವಾಗಿದೆ.

ಲಕ್ಷ್ಮೀ ನಿವಾಸ

ಇತ್ತೀಚೆಗೆ ಆರಂಭಗೊಂಡ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಟಿಆರ್‌ಪಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದ ಮೊದಲು ಮೊದಲ ಸ್ಥಾನದಲ್ಲಿದ್ದ ಲಕ್ಷ್ಮೀ ನಿವಾಸ ಧಾರಾವಾಹಿ ಈ ವಾರ ಕೆಲವೇ ಕೆಲವು ಪಾಯಿಂಟ್‌ ಅಂತರದಲ್ಲಿ ಎರಡನೇ ಸ್ಥಾನದದಲ್ಲಿದೆ. ಕೌಟುಂಬಿಕ ಕಥಾಹಂದರವುಳ್ಳ ಈ ಧಾರಾವಾಹಿ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ನವಿರಾದ ಪ್ರೇಮಕಥೆ, ಸಂಸಾರದ ತಲ್ಲಣಗಳಿವೆ.

ಸೀತಾ ರಾಮ


ನವಿರಾದ ಪ್ರೇಮಕಥೆ ಇರುವ ಸೀತಾ ರಾಮ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಜನಮನ ಗೆದ್ದಿರುವ ಈ ಧಾರಾವಾಹಿಯಲ್ಲಿ ಪುಟಾಣಿ ಸಿಹಿ ಎಲ್ಲರಿಗೂ ಅಚ್ಚುಮೆಚ್ಚು. ದಿನದಿಂದ ದಿನಕ್ಕೆ ಸೀತಾ ರಾಮ ಧಾರಾವಾಹಿ ಕುತೂಹಲ ಪೂರ್ಣವಾಗಿ ಸಾಗುತ್ತಿದೆ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

ಶ್ರಾವಣಿ ಸುಬ್ರಮಣ್ಯ


ಇತ್ತೀಚೆಗೆ ಆರಂಭಗೊಂಡ ವಿಭಿನ್ನ ಕಥಾ ಹಂದರ ಹೊಂದಿರುವ ಶ್ರಾವಣಿ ಸುಬ್ರಮಣ್ಯ ಧಾರಾವಾಹಿ ಟಿಆರ್​ಪಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮಿನಿಸ್ಟರ್‌ ಮಗಳು ಶ್ರಾವಣಿಯ ತರಲೆ, ಮಿನಿಸ್ಟರ್‌ ಬಲಗೈ ಬಂಟ ಸುಬ್ರಮಣ್ಯನ ಕಥೆ ಧಾರಾವಾಹಿಯಲ್ಲಿದೆ. ಮಗಳನ್ನು ದ್ವೇಷಿಸುವ ತಂದೆ, ತಂದೆಯನ್ನು ಪ್ರೀತಿಸುವ ಮಗಳು, ಒಂದಷ್ಟು ಸಸ್ಪೆನ್ಸ್ ಧಾರಾವಾಹಿಯ ಜೀವಾಳ.

ರಾಮಾಚಾರಿ :


ವಿಭಿನ್ನ ಕತೆಯನ್ನೊಳಗೊಂಡ ರಾಮಾಚಾರಿ ಆರಂಭದಿಂದಲೂ ಜನಮನ ಗೆದ್ದಿತ್ತು. ಟಿಆರ್​ಪಿ ಪಟ್ಟಿಯಲ್ಲಿ ರಾಮಾಚಾರಿ ಐದನೇ ಸ್ಥಾನದಲ್ಲಿದೆ. ಸದ್ಯ ಧಾರಾವಾಹಿ ಬೇರೆಯೇ ಆದ ಆಯಾಮಕ್ಕೆ ಹೊರಳಿದೆ. ರಾಮಾಚಾರಿಗೊಬ್ಬ ತಮ್ಮನೂ ಎಂಟ್ರಿ ಕೊಟ್ಟಾಗಿದೆ. ಅಣ್ಣ-ತಮ್ಮ ಹಾಗೂ ಚಾರು ಒಂದಾಗಿ ಶತ್ರುಗಳ ವಿರುದ್ಧ ಗೆಲ್ಲುವ ಹೋರಾಟಕ್ಕೆ ಇಳಿದಿದ್ದಾರೆ.

Continue Reading

LATEST NEWS

Trending