Saturday, March 6, 2021

ಮುಳುವಾದ ಫೇಸ್ ಬುಕ್ ಲವ್ : ಶೀಲದೊಂದಿದೆ 15 ಲಕ್ಷ ಕಳಕೊಂಡ ಮಹಿಳೆಯಿಂದ ದೂರು..!

ಮುಳುವಾದ ಫೇಸ್ ಬುಕ್ ಲವ್ : ಶೀಲದೊಂದಿದೆ 15 ಲಕ್ಷ ಕಳಕೊಂಡ ಮಹಿಳೆಯಿಂದ ದೂರು..!

ಚಿಕ್ಕಬಳ್ಳಾಪುರ :ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ಮಹಿಳೆ ವಂಚನೆಗೆ ಒಳಗಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಫೇಸ್​ಬುಕ್ ಮೂಲಕ ಪರಿಚಯವಾದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಇಡ್ಲಿಪಾಳ್ಯ ನಿವಾಸಿ ಸತೀಶ್, ಮಂಡ್ಯ ಮೂಲದ ವಿವಾಹಿತೆಗೆ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಫೇಸ್​ಬುಕ್​ನಲ್ಲಿ ಪರಿಚಯವಾದ ಸತೀಶ್ ಪ್ರೀತಿ, ಪ್ರೇಮ, ಕಾಮ ಎಂದು ವಿವಾಹಿತ ಮಹಿಳೆಯ ತಲೆ ಕೆಡಿಸಿದ್ದಾನೆ.

ಮಹಿಳೆಯ ಅತ್ಯಾಚಾರದ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ಸೈಟ್ ಹಾಗೂ ಮನೆ ಮಾರಿಸಿ 15 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಸತೀಶ್ ಚಿಂತಾಮಣಿಯಲ್ಲಿ ಫೈನಾನ್ಸಿಯರ್ ಆಗಿದ್ದಾನೆ. ಹಾಗೂ ಮಹಿಳೆ ಬ್ಯೂಟಿ ಪಾರ್ಲರ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...