ಬೀದರ್: ಒಂಭತ್ತನೇ ತರಗತಿ ಬೋರ್ಡ್ ಪರೀಕ್ಷೆಯ ಪ್ರವೇಶಾತಿಗಾಗಿ ಶಾಲೆಯಿಂದ ನೀಡಲಾದ ಪ್ರವೇಶ ಪತ್ರವನ್ನು ಕುರಿ ತಿಂದಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ಮಾ.25ರಂದು ನಡೆದಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗೋಕುಳ ಗ್ರಾಮದ ನಿವಾಸಿ ಪೂಜಾ ಮಾರುತಿ ಮೇತ್ರೆ (14) ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ.
ಈಕೆಯ ಪ್ರವೇಶ ಪತ್ರವನ್ನು ಕುರಿ ತಿಂದಿದೆ ಎಂದು ಆತಂಕಗೊಂಡು, ಶಾಲೆಯ ಮುಖ್ಯ ಗುರುಗಳ ಹೆಸರಿನಲ್ಲಿ ಪತ್ರ ಬರೆದಿಟ್ಟು ಆತ್ಮಹ*ತ್ಯೆಗೆ ಪ್ರಯತ್ನಪಟ್ಟಿದ್ದಾಳೆ. ವಿದ್ಯಾರ್ಥಿನಿ ಬರೆದ ಪತ್ರದಲ್ಲಿ “ನನ್ನ ಪರೀಕ್ಷೆ ಪ್ರವೇಶ ಪತ್ರ( ಹಾಲ್ ಟಿಕೆಟ್)ಕಳೆದ ಕಾರಣ ನನಗೆ ಶಾಲೆಗೆ ಬರಲು ಆಗಲ್ಲ. ನಾನು ಸ*ತ್ತು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಬಿಡಿ” ಎಂದು ಬರೆದಿದ್ದಾಳೆ.
ಶಿಕ್ಷಕರ ಹೆಸರಿನಲ್ಲಿ ಬರೆದ ಪತ್ರವನ್ನು ತನ್ನ ಅಣ್ಣನ ಕೈಯಲ್ಲಿ ಕೊಟ್ಟು, ಸಂಜೆ 7 ಗಂಟೆ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದಾಳೆ. ಮನೆಯಿಂದ ಇವಳು ನಾಪತ್ತೆಯಾಗಿರುವುದನ್ನು ಗಮನಿಸಿದ ಸ್ಥಳೀಯರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬಾವಿಗಳಲ್ಲಿ ಹುಡುಕಾಟ ಆರಂಭಿಸಿದ್ದಾರೆ.
ರಾತ್ರಿ 11-30ರ ಸುಮಾರಿಗೆ ಈಕೆ ತನ್ನ ಸಂಬಂಧಿಕರ ಜಮೀನಿನಲ್ಲಿರುವ ಬಾವಿಯಲ್ಲಿ ಅಳುತ್ತ ಕುಳಿತ್ತಿದ್ದು, ತಕ್ಷಣ ಆಕೆಯನ್ನು ಬಾವಿಯಿಂದ ಮೇಲೆ ತಗೆದು ರಕ್ಷಣೆ ಮಾಡಿದ್ದಾರೆ. ಸುಮಾರು 30 ಅಡಿಗಳಷ್ಟು ಆಳವಾಗಿರುವ ಬಾವಿಯಲ್ಲಿ ನೀರು ಕಡಿಮೆ ಇರುವ ಕಾರಣ ಜೀವಕ್ಕೆ ತೊಂದರೆಯಾಗಲಿಲ್ಲ. ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.
ಈ ಹಿಂದೆ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೇ ದೊಡ್ಡ ಸವಾಲಾಗಿತ್ತು. ಇದೀಗ ಸರಕಾರ ಹೊಸದಾಗಿ 5,8,9,10 ನೇ ತರಗತಿಯವರಿಗೆ ಬೋರ್ಡ್ ಪರೀಕ್ಷೆಯನ್ನು ಜಾರಿಗೊಳಿಸಿದೆ. ಗೊಂದಲಗಳ ನಡುವೆ ಆರಂಭವಾಗಿರು ಬೋರ್ಡ್ ಪರೀಕ್ಷೆ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಆದ್ರೆ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬಗ್ಗೆ ಸರಿಯಾದ ಅರಿವು ಮೂಡಿಸುವಲ್ಲಿ ಶಿಕ್ಷಣ ಇಲಾಖೆ ವಿಫಲವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಗೊಂದಲದ ಜೊತೆಯಲ್ಲಿ ಭಯದಲ್ಲೇ ಪರೀಕ್ಷೆ ಬರೆಯುತ್ತಿದ್ದಾರೆ.
ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.
ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.
ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ !!
ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.
ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.
ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.