Thursday, August 11, 2022

ಉಡುಪಿ: ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ- ಮನೆಯಲ್ಲಿ ಪ್ರೇಮ ಪತ್ರ ಪತ್ತೆ

ಉಡುಪಿ: ಇಲ್ಲಿನ ಕುಂದಾಪುರದ ಲವ್, ಸೆಕ್ಸ್ ಜಿಹಾದ್ ಗೆ ಬಲಿಯಾದ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯೇ ಬರೆದಿದ್ದ ಪತ್ರವೊಂದು ಪತ್ತೆಯಾಗಿದೆ.


ಆ ಪತ್ರದಲ್ಲಿ ಕುಂದಾಪುರ ತಾಲೂಕು ಉಪ್ಪಿನಕುದ್ರು ನಿವಾಸಿ ಶಿಲ್ಪಾ ಎರಡು ದಿನಗಳ ಹಿಂದೆಯಷ್ಟೇ ಮುಸ್ಲಿಂ ಯುವಕನ ಪ್ರೀತಿ ಪಾಶಕ್ಕೆ ಸಿಲುಕಿ ಚಿತ್ರಹಿಂಸೆ ಅನುಭವಿಸಿ,

ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು. ಸದ್ಯ ಪತ್ತೆಯಾಗಿರುವಂತಹ ಪತ್ರದಲ್ಲಿ ತನ್ನ ಹಾಗೂ ಅಜೀಜ್ ನಡುವೆ ಇರುವ ಘಟನೆಗಳನ್ನು ಕವನ ರೂಪದಲ್ಲಿ ಆಕೆ ಬರೆದಿದ್ದಾಳೆ.

ಅಜೀಜ್ ದಂಪತಿ ಬಂಧನಕ್ಕೆ: ವಿಹಿಂಪ ಆಗ್ರಹ
ಉಡುಪಿ: ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಗ್ರಾಮದ ಶಿಲ್ಪ ಎಂಬ ಹುಡುಗಿಯನ್ನು ಪ್ರೀತಿ ಪ್ರೇಮದ ನಾಟಕವನ್ನಾಗಿ

ಅವಳನ್ನು ಅತ್ಯಾಚಾರ ಮಾಡಿ ಅವಳ ಅಶ್ಲೀಲ ವೀಡಿಯೋ ಚಿತ್ರೀಕರಣ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಾ ನಿರಂತರ 23 ವರ್ಷಗಳಿಂದ ದೈಹಿಕ ಮಾನಸಿಕ ಹಿಂಸೆಯನ್ನು

ನೀಡಿರುವ ಅಜೀಜ್ ದಂಪತಿ ಬಂಧಿಸಬೇಕೆಂದು ಒತ್ತಾಯ ಸಿಐಡಿ ತನಿಖೆ ನಡೆಸಬೇಕು ಮತ್ತು ಲವ್ ಜಿಹಾದ್ ಷಡ್ಯಂತ್ರಕ್ಕೆ ಬಲಿಯಾಗಿರುವ ಶಿಲ್ಪ ಕುಟುಂಬಕ್ಕೆ ಸರಕಾರ 10 ಲಕ್ಷ ನಗದು ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಡುಪಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಡಿದ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಸುನಿಲ್ ಕೆ ಆರ್‌ಅವರು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸದರು. ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟು ಕಾಪಿಕಾಡಿನಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರರಿಗೆ ಗಾಯ – ಕಾರು ಕಮರಿಗೆ ..!

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...