ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದರು. ಮೃತ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದ್ದು,
ಪರಿಸ್ಥಿತಿ ಪೊಲೀಸರ ಕೈ ಮೀರಿದ್ದು, ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.
ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆಸಿ ಮೃತ ಹರ್ಷನನ್ನು ಅಂತಿಮ ದರ್ಶನಕ್ಕಾಗಿ ಆತನ ಮನೆಗೆ ಕರೆದೊಯ್ಯಲಾಗಿತ್ತು. ತದನಂತರ ಅಲ್ಲಿಂದ ರೋಟರಿ ಚಿತಾಗಾರಕ್ಕೆ ಮೆರವಣಿಗೆ ಆರಂಭವಾಗಿತ್ತು.
ಮೆರವಣಿಗೆ ಹೊರಟು ನಗರದ ಸಿದ್ಧಯ್ಯ ರಸ್ತೆ ತಲುಪುತ್ತಿದ್ದಂತೆಯೇ ಮೆರವಣಿಗೆಯಲ್ಲಿ ಕಲ್ಲು ತೂರಾಟ ಆರಂಭವಾಗಿದೆ.
ಕಲ್ಲು ತೂರಾಟದಿಂದ ಹಲವು ಮಂದಿಗೆ ಗಾಯವಾಗಿದ್ದು, ಓರ್ವನಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದುಬಂದಿದೆ.
ಕಲ್ಲು ತೂರಾಟದಿಂದ ಹಲವು ಮಂದಿಗೆ ಗಾಯವಾಗಿದ್ದು, ಓರ್ವನಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಪ್ರಹಾರ ನಡೆಸಲಾಗಿದ್ದು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಕೆಲವು ಕಡೆಗಳಲ್ಲಿ ಟಿಯರ್ ಗ್ಯಾಸ್ ಪ್ರಯೋಗ ಮಾಡಲಾಗಿದೆ. ಶಿವಮೊಗ್ಗದಾದ್ಯಂತ ಪರಿಸ್ಥಿತಿ ಪೊಲೀಸರ ಕೈ ಮೀರಿದೆ.