Tuesday, July 5, 2022

ಶಿವಮೊಗ್ಗ: ಹರ್ಷ ವಿರುದ್ಧ ಅವಹೇಳನಕಾರಿ ಪೋಸ್ಟ್‌- ‘ಮಂಗಳೂರು ಮುಸ್ಲಿಂ’ ಪೇಜ್‌ ವಿರುದ್ಧ FIR

ಮಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರು ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿದ್ದಾರೆ.


ಹರ್ಷನ ಕೊಲೆಯಾಗುತ್ತಿದ್ದಂತೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ ಎಂದು ಉಲ್ಲೇಸಿದ್ದಾರೆ.

2015ರಲ್ಲಿ ಹರ್ಷ ಪ್ರವಾದಿಯನ್ನು‌ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಪ್ರವಾದಿ ನಿಂದನೆ ಮಾಡಿದವರನ್ನು ಎಂದಿಗೂ ಬಿಡಲ್ಲ ಎಂದು ಫೇಸ್‌ಬುಕ್ ಪೇಜ್ ನಲ್ಲಿ ಎಚ್ಚರಿಕೆ ನೀಡಲಾಗಿತ್ತು.

ಈ ಬಗ್ಗೆ ಮಂಗಳೂರು ಮುಸ್ಲಿಮ್ಸ್ ಫೇಸ್‌ಬುಕ್‌ ಪೇಜ್‌ನಲ್ಲಿ ಎಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...