ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನಿಗೆ ದಾಳಿಯ ಬಗ್ಗೆ ಈ ಮೊದಲೇ ಪೊಲೀಸರು ಎಚ್ಚರಿಕೆ ನೀಡಿದ್ದರು ಎಂಬ ಅಂಶ ಬಯಲಾಗಿದೆ.
ಈ ಹಿಂದೇ ಕೂಡಾ ಹರ್ಷನ ಮೇಲೆ ಎರಡು ಬಾರಿ ಕೊಲೆ ಯತ್ನ ನಡೆದಿತ್ತು.
ಹರ್ಷನ ಮೇಲೆ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಹಾಗೂ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ ಈತ ಆರು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ.
ಬಜರಂಗದಳ ಹಾಗೂ ವಿಶ್ವ ಹಿಂದೂಪರಿಷತ್ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ ಹರ್ಷ, ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಪರ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಿದ್ದ.
ಆರು ತಿಂಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೆ ಒಳಪಟ್ಟಿದ್ದ. ಬಳಿಕ ಬಿಡುಗಡೆಗೊಳ್ಳುವಾಗ ದುಷ್ಕರ್ಮಿಗಳು ಈತನ ಕೊಲೆಗೆ ಸ್ಕೆಚ್ ಹಾಕಿದ್ದರು ಎಂಬ ಅಂಶ ಬಯಲಾಗಿದೆ. ಈ ಬಗ್ಗೆ ಪೊಲೀಸರೇ ಎಚ್ಚರವಿರುವಂತೆ ಹರ್ಷನಿಗೆ ಕಿವಿಮಾತು ಹೇಳಿದ್ದರು.