ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು..!
ಶಿವಮೊಗ್ಗ:ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ರಾಯಚೂರು ಮೂಲದ ಲಲಿತಾ (23) ಎಂದು ಗುರುತಿಸಲಾಗಿದೆ.
ಈಕೆ ಶಿವಮೊಗ್ಗ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದು, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು.ಲಲಿತಾ ರಾತ್ರಿ 2 ಗಂಟೆಯವರೆಗೆ ಕೊಠಡಿಯಲ್ಲಿ ಓದುತ್ತಿದ್ದಳು. ಆದರೆ ಮುಂಜಾನೆ ಕೊಠಡಿಯಿಂದ ಲಲಿತಾ ಹೊರ ಬಾರದೆ ಇದ್ದುದನ್ನು ಗಮನಿಸಿ ಬಾಗಿಲು ಬಡಿದಿದ್ದಾರೆ. ಆದರೂ ಬಾಗಿಲು ತೆಗೆದಿಲ್ಲ.
ನಂತರ ಅನುಮಾನಗೊಂಡ ಆಕೆಯ ಸಹಪಾಠಿಗಳು ಹಾಸ್ಟೆಲ್ ವಾರ್ಡನ್ ಅವರಿಗೆ ವಿಷಯ ತಿಳಿಸಿದ್ದಾರೆ. ನಂತರ ಕೊಠಡಿ ಬಾಗಿಲು ಒಡೆದು ನೋಡಿದಾಗ ಲಲಿತಾ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮೃತ ಲಲಿತಾ ಈ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ತಿಳಿಸಿದ್ದಾರೆ. ಘಟನೆ ನಂತರ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಲಲಿತಾ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೋಷಕರಿಗೆ ನೀಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ