Connect with us

    LATEST NEWS

    ಸಂಕಷ್ಟದಲ್ಲಿ ಶಿರ್ಡಿ ಸಾಯಿಬಾಬ..! ಮಂದಿರಗಳ ಮೂರ್ತಿ ಕಿತ್ತೆಸೆದ ಸನಾತನ ಸಂಘಟನೆ..!

    Published

    on

    ಕೊಟ್ಯಾಂತರ ಹಿಂದೂಗಳು ಭಕ್ತಿಯಿಂದ ನಂಬಿಕೊಂಡು ಬಂದಿರುವ ಶಿರ್ಡಿ ಸಾಯಿಬಾಬ ಅವರ ವಿಚಾರದಲ್ಲಿ ಸನಾತನ ಸಂಘಟನೆಗಳು ಮೂಗು ತೂರಿಸಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಸಾಯಿಬಾಬ ಮೂರ್ತಿಗಳಿರುವ ದೇವಸ್ಥಾನಗಳನ್ನು ಗುರಿಯಾಗಿಸಿ ಸಂಘಟನೆ ದಾಳಿ ನಡೆಸಿದೆ. ರಾತೋರಾತ್ರಿ ದೇವಾಸ್ಥಾನಗಳಿಗೆ ನುಗ್ಗಿ ಸಾಯಿ ಮೂರ್ತಿಯನ್ನು ತೆರವುಗೊಳಿಸಿದೆ. ಯುಪಿಯ ಸುಮಾರು 100 ದೇವಲಾಯಗಳನ್ನು ಗುರುತಿಸಲಾಗಿದ್ದು, ಅಲ್ಲಿರುವ ಸಾಯಿ ಮೂರ್ತಿಯನ್ನು ತೆರವುಗೊಳಿಸುವುದಾಗಿ ಸನಾತನ ಸಂಘಟನೆ ಹೇಳಿದೆ. ಅಷ್ಟೇ ಅಲ್ಲದೆ ದೇಶದೆಲ್ಲೆಡೆಯಲ್ಲೂ ಈ ಆಂದೋಲನ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

    ಸಾಯಿಬಾಬ ಮುಸ್ಲಿಂ ದಾರ್ಶನಿಕರಾಗಿದ್ದು, ಅವರನ್ನು ಸನಾತನ ಹಿಂದೂ ದೇವಾಲಯದಲ್ಲಿ ಪೂಜಿಸುವುದಕ್ಕೆ ಸನಾತನ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಸನಾತನ ರಕ್ಷಾ ದಳ ಎಂಬ ಸಂಘಟನೆಯ ಮುಖ್ಯಸ್ಥ ಅಜಯ್ ಶರ್ಮಾ ಎಂಬವರ ನೇತೃತ್ವದಲ್ಲಿ ಈಗಾಗಲೆ ಉತ್ತರ ಪ್ರದೇಶದ 14 ದೇವಸ್ಥಾನಗಳ ಸಾಯಿ ಮೂರ್ತಿಯನ್ನು ಕಿತ್ತು ಹಾಕಲಾಗಿದೆ.

    ಉತ್ತರ ಪ್ರದೇಶದ ವಾರಣಾಸಿಯ ಲೋಹಟ್ಟಿ ಎಂಬಲ್ಲಿಯ ದೊಡ್ಡ ಗಣೇಶ ಮಂದಿರಲ್ಲಿ ಸೆಪ್ಟಂಬರ್ 29 ರಂದು ಸಾಯಿ ಮೂರ್ತಿ ತೆರವು ಮಾಡಿದ ವಿಡಿಯೋ ವೈರಲ್ ಆಗಿತ್ತು. ಇದಾದ ಬಳಿಕ ಯುಪಿಯ ಹಲವೆಡೆ ಪೊಲೀಸರು ದಾಳಿ ನಡೆಸಿ ಮೂರ್ತಿ ತೆರವು ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಬಳಿಕ ಬಿಡುಗಡೆ ಕೂಡಾ ಮಾಡಿದ್ದಾರೆ. ಆದರೆ ಇದೀಗ ಈ ವಿಚಾರ ಗಂಭೀರತೆ ಪಡೆದುಕೊಂಡಿದ್ದು ಮಹಾರಾಷ್ಟ್ರದ ಶಿರ್ಡಿ ಸಾಯಿ ಮಂದಿರ ಟ್ರಸ್ಟ್‌ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಯುಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರಕ್ಕೂ ಮನವಿ ಮಾಡಿದ್ದು ಸಾಯಿ ಮಂದಿರಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಕೋರಿದ್ದಾರೆ.

    ಸನಾತನ ರಕ್ಷಾ ದಳದ ಈ ಕಾರ್ಯಕ್ಕೆ ಹಲವು ಸನಾತನ ಸಂಘಟನೆಗಳು ಹಾಗೂ ಸಂತರು ಬೆಂಬಲ ನೀಡಿದ್ದು, ಹಿಂದೂಗಳಿಗೆ ಮುಕ್ಕೋಟಿ ದೇವರು ಇರುವಾಗ ಮುಸ್ಲಿಂ ವ್ಯಕ್ತಿಯ ಮೂರ್ತಿಗೆ ಯಾಕೆ ಪೂಜೆ ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

     

    ಇದೊಂದು ರಾಜಕೀಯದ ಉದ್ದೇಶದಿಂದ ನಡೆಸಲಾಗುತ್ತಿರುವ ಕೃತ್ಯವಾಗಿದ್ದು, ಮಹಾರಾಷ್ಟ್ರ ಚುನಾವಣೆಯನ್ನು ಗಮನದಲ್ಲಿ ಇಟ್ಟು ಈ ಆಂದೋಲ ನಡಿತಾ ಇದೆ ಅಂತ ಕೆಲ ಸಂತರು ಅಭಿಪ್ರಾಯ ಪಟ್ಟಿದ್ದಾರೆ. ಚುನಾವಣೆಯ ಸಮಯದಲ್ಲಿ ಹಿಂದೂಗಳು ಹಿಂದೂಗಳ ನಡುವೆ ವೈಮನಸ್ಸು ಸೃಷ್ಟಿಸುವ ಉದ್ದೇಶ ಇದರಲ್ಲಿ ಅಡಗಿರುವ ಸಾದ್ಯತೆ ಇದೆ ಎಂದು ಹೇಳಿದ್ದಾರೆ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending