Saturday, November 27, 2021

ಶಿರೂರು: ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ- ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ ಎಂದ ಹೈಕೋರ್ಟ್

ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ‌ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.


ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಅವರ ಪೀಠವು ಈ ಆದೇಶವನ್ನು ಹೊರಡಿಸಿದ್ದು,

ಪೀಠಾಧಿಪತಿಗಳ ನೇಮಕ ವಿಚಾರದಲ್ಲಿ 800 ವರ್ಷಗಳಿಂದ‌ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನ್ನು ಪೀಠಾಧಿಪತಿಯಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಲಾತವ್ಯ ಆಚಾರ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಇಂದು ಪ್ರಕಟಿಸಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...