Connect with us

BELTHANGADY

ಉಜಿರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆ

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯ ಪೆರ್ಲದಲ್ಲಿರುವ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಗ್ರಾಮಸ್ಥರು ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ಡಿಸೆಂಬರ್‌ 16 ರಂದು ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ.


ಈ ದೇವಸ್ಥಾನದಲ್ಲಿ ಇದೇ ಡಿಸೆಂಬರ್‌ 8 ಮತ್ತು 9 ರಂದು ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆದಿತ್ತು. ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆ ಎಂಬುದಾಗಿ ಗೋಚರಿಸುತ್ತದೆ ಎಂದು ತಿಳಿಸಿದ್ದರು.

ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ದೇಗುಲದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ನಡೆಯುತ್ತಿದ್ದು ಉಜಿರೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮೊಕ್ತೇಸರ ಹಾಗೂ ಕಾರ್ಯದರ್ಶಿ ಕೃಷ್ಣ ಒಪ್ಪಂತಾಯ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ಅಷ್ಟಮಂಗಲ ಪ್ರಶ್ನೆ ಸಂದರ್ಭದಲ್ಲಿ ಶ್ರೀಧರ ಗೋರೆ ಅವರ ಜತೆಗೆ ಮಂಗಳೂರು ಮಂಗಳಾದೇವಿ ದೇವಸ್ಥಾನದ ಅರ್ಚಕ ಗಣೇಶ್ ಐತಾಳ, ಶ್ರೀನಿಧಿ ಮುಚ್ಚಿನ್ನಾಯ ಕಾರಿಂಜ, ಅರ್ಚಕ ಅನಂತ ಇರ್ವತ್ರಾಯ ಅವರು ಸಹಕರಿಸಿದರು.

ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ, ಸ್ಥಳೀಯರಾದ ರಾಮಣ್ಣ ನಾಯ್ಕ, ಪಿ.ಬಿ ಬೂಚನಾಯ್ಕ, ದಾಮೋದರ, ಪ್ರವೀಣ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending