10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ.ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.
ಶಿವಮೊಗ್ಗ: ಎಳೆ ವಯಸ್ಸಿನ ಮಕ್ಕಳು ಹೃದಾಯಾಘಾತಕ್ಕೆ ಬಲಿಯಾಗುತ್ತಿರು ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ.
ಮಡಿಕೇರಿ ಘಟನೆ ಮಾಸುವ ಮುಂಚೆ ಇದೀಗ ಮತ್ತೆ ಅದೇ ರೀತಿ ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ.
10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ.
ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.
ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ.
ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಆದ್ರೆ ಅಷ್ಟೊತ್ತಿಗಾಗಲೇ ಜಯಂತ್ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.