ಬೆಂಗಳೂರು: ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಜಿಲ್ಲೆಯಲ್ಲಿ ಕೊಲೆ ಆಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಕೊಲೆ ಆರೋಪಿಗಳಿಗೆ ಕಠಿಣವಾದ ಶಿಕ್ಷೆಯಾಗಬೇಕು. ಸುಮ್ಮನೆ ಇಲ್ಲಿ ಕುಳಿತು ಹೇಳಿಕೆಗಳನ್ನು ನೀಡಬಾರದು ಅಂತ ಹೇಳಿದರು.
ಇಂದು ಶವ ಯಾತ್ರೆ
ನಿನ್ನೆ ರಾತ್ರಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಮರಣೋತ್ತರ ಪರೀಕ್ಷೆ ನಡೆದಿದ್ದು, ಶಿವಮೊಗ್ಗ ನಗರದ ಮೃತ ಹರ್ಷ ನಿವಾಸ ರವಿವರ್ಮ ಬೀದಿಯಲ್ಲಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಮನೆಗೆ ರವಾನೆ ತೆಗೆದುಕೊಂಡು ಹೋಗಲಾಗುವುದು.
ಮನೆಯಲ್ಲಿ ಪೂಜೆ ಬಳಿಕ ಶವ ಯಾತ್ರೆ ಆರಂಭವಾಗಲಿದೆ. ಸಿದ್ದಯ್ಯ ರಸ್ತೆ, ಗಾಂಧಿ ಬಜಾರ್, ಶಿವಪ್ಫ ನಾಯಕ ವೃತ್ತ, ಬಿ ಎಚ್ ರಸ್ತೆ ಮಾರ್ಗ ಮೂಲಕ ಶವಯಾತ್ರೆ ನಡೆಯಲಿದೆ. ಶಿವಮೊಗ್ಗದ ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮರಾಠಾ ಬಾವಸಾರದ ವಿಧಿ ವಿಧಾನದಂತೆ ಅಂತಿಮ ಕ್ರಿಯೆ ನೆರವೇರಲಿದೆ.