ಬೆಂಗಳೂರು: ನಿಮ್ಮ ಪಕ್ಷಕ್ಕೆ ಬೆಂಬಲ ನೀಡುವ ಸದಸ್ಯನಿಗೆ ರಕ್ಷಣೆ ನೀಡಿಲ್ಲ. ಇನ್ನು ನೀವು ಈ ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮುಂದೆ ರಾಜ್ಯದಲ್ಲಿ ಏನಾಗುತ್ತೆ ಎಂಬುದಕ್ಕೆ ಇದು ಟ್ರೇಲರ್ ಎಂಬ ಬಗ್ಗೆ ನನಗೆ ಅನುಮಾನವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ.
ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು.
ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು ಗೊತ್ತಾಗಬೇಕು ಎಂದು ಪ್ರಶ್ನಿಸಿದ್ದಾರೆ.