ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ.
ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಬೆಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಈಶ್ವರಪ್ಪ ಹರಕು ಬಾಯಿ: ಡಿ.ಕೆ.ಶಿವಕುಮಾರ್
ಈಶ್ವರಪ್ಪ ಹರಕು ಬಾಯಿ ಅಂತ ಗೊತ್ತಿದೆ. ಅವನ ಬಗ್ಗೆ ನಮ್ಮ ನಾಯಕರೇ ಹೇಳಿದ್ದಾರೆ. ಅವನ ನಾಲಿಗೆಗೂ ಮೆದುಳಿಗೂ ಸಂಬಂಧವಿಲ್ಲವೆಂದು. ಇದನ್ನ ನಾನು, ನಮ್ಮ ಪಕ್ಷದ ವತಿಯಿಂದ ಖಂಡಿಸುತ್ತೇವೆ.
ಈ ರೀತಿ ಹೇಳಿಕೆ ಕೊಟ್ಟ ಅವನ ಮೇಲೆ ಮೊದಲು ಕೇಸು ದಾಖಲಿಸಬೇಕು.
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ ಸೂಕ್ತ ತನಿಖೆಯಾಗಬೇಕು. ಯಾವುದೇ ಕಾರಣಕ್ಕೂ ತಪ್ಪಿತಸ್ಥರಿಗೆ ರಕ್ಷಣೆ ಸಿಗಬಾರದು.
ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕು ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.