ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಯುವಕನ ಕೊಲೆಯಾದ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದೆ.
ಹಿಂದೂ ಸಂಘಟನೆಗಳು ಸೆಕ್ಷನ್ 144 ನಡುವೆಯೂ ಶವಯಾತ್ರೆ ನಡೆಸುತ್ತಿದ್ದರು. ಈ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ವಾಹನ, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.
ಕೊಲೆ ಪ್ರಕರಣದಲ್ಲಿ ಈಗಾಗಲೇ ಓರ್ವನನ್ನು ಶಿವಮೊಗ್ಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಮೂವರನ್ನು ಬೆಂಗಳೂರಿನ ಜೆ.ಜೆ ನಗರದಲ್ಲಿ ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಭದ್ರತೆಯಲ್ಲಿ ಮೃತದೇಹದ ಯಾತ್ರೆ ನಡೆಸುತ್ತಿದ್ದಾಗಲೇ,
ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಹೊರಟ ಶವಯಾತ್ರೆಯಲ್ಲಿ ಈ ಕೃತ್ಯ ನಡೆದಿದೆ.
ಎಸ್.ಪಿ ಲಕ್ಷ್ಮೀಪ್ರಸಾದ್, ಡಿಸಿ ಸೆಲ್ವಮಣಿ ಸ್ಥಳದಲ್ಲಿದ್ದು, ಬಂದೋಬಸ್ತ್ ನಡೆಸುತ್ತಿದ್ದಾರೆ.