Connect with us

    UDUPI

    ಬೈಂದೂರಿನಲ್ಲಿ ಚುನಾವಣೆ ಪ್ರಚಾರಕ್ಕೆ ಇಳಿದ ಹ್ಯಾಟ್ರಿಕ್ ಹೀರೋ! ಕಾಣೆ, ಅಂಜಲ್, ಭೂತಾಯಿ ಮೀನೆಂದರೆ ನನಗೆ ಇಷ್ಟ ಅಂದ್ರು ಶಿವಣ್ಣ

    Published

    on

    ಉಡುಪಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರದಲ್ಲಿ ನಿರತರಾಗಿರುವ ಕನ್ನಡ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಇತ್ತೀಚೆಗೆ ಉಡುಪಿಯ ಬೈಂದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಕರಾವಳಿಯ ಮೀನು ಊಟದ ಕುರಿತು ಮಾತನಾಡಿದ್ದಾರೆ.  ಕಾಣೆ, ಅಂಜಲ್, ಭೂತಾಯಿ ಮೀನೆಂದರೆ ನನಗೆ ಇಷ್ಟ. ಅದೇ ರೀತಿ ಇಲ್ಲಿನ ಜನರ ಬಗ್ಗೆಯೂ ವಿಶೇಷ ಪ್ರೀತಿ ಇದೆ ಎಂದು ಹೇಳಿ ಕರಾವಳಿ ಭಾಗದ ಜನರ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾರೆ.

    shivarajkumar

    ‘ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಇದಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಗಿಂತ ಬೇರೆ ಉದಾಹರಣೆ ಬೇಕಾ? ನನ್ನ ಪತ್ನಿ ಗೀತಾ ಶಕ್ತಿಧಾಮ ನಿರ್ವಹಣೆ ಮಾಡುತ್ತಿದ್ದಾರೆ. ಆಕೆಗೆ ಸೇವಾ ಅನುಭವ ಇದೆ. ಚುನಾವಣೆಯಲ್ಲಿ ಜನರ ಆಶೀರ್ವಾದಕ್ಕಾಗಿ ಬಂದಿದ್ದೇವೆ’ ಎಂದು ಶಿವರಾಜ್ ಕುಮಾರ್ ಹೇಳಿದರು.

    ಕಾಂಗ್ರೆಸ್ ಪರ ಮಾತ್ರ ಪ್ರಚಾರ

    ಕಾಂಗ್ರೆಸ್ ಹಾಗೂ ಜೆಡಿಎಸ್  ಎರಡೂ ಪಕ್ಷಗಳಲ್ಲಿ ನನಗೆ ಹೆಚ್ಚು ವ್ಯತ್ಯಾಸ ಕಾಣಿಸುತ್ತಿಲ್ಲ. ಬೇರೆ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪರ ಮಾತ್ರ ಪ್ರಚಾರ ಮಾಡುತ್ತೇನೆ. ಉಡುಪಿ ಶಿವಮೊಗ್ಗ ಜೊತೆ ನಮಗೆ ಬಹಳ ನಂಟಿದೆ. ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಚಿತ್ರ ಇಲ್ಲೇ ಶೂಟಿಂಗ್ ನಡೆದಿತ್ತು. ಕರಾವಳಿಯಲ್ಲಿ ತಂದೆಯವರನ್ನು ಬಿಟ್ರೆ ನಾನು ಹೆಚ್ಚು ಶೂಟಿಂಗ್ ಮಾಡಿದ್ದೇನೆ. ಎರಡನೇ ಸಲ ಬೈಂದೂರಿಗೆ ಬರುತ್ತಿದ್ದೇವೆ. ಖಂಡಿತಾ ಒಳ್ಳೆ ಕೆಲಸ ಮಾಡುತ್ತೇವೆ. ಅವಕಾಶ ಕೊಡಿ ಎಂದು ಶಿವಣ್ಣ ಜನರಲ್ಲಿ ಮನವಿ ಮಾಡಿದರು.

    ಫಿಲಂ ಚೇಂಬರ್, ಪ್ರೊಡ್ಯೂಸರ್ ಗಳಿಂದಲೂ ಪ್ರಚಾರ

    ನಮಗೆ ಬಂಗಾರಪ್ಪ ಆಶೀರ್ವಾದ, ಮಧು ಬಂಗಾರಪ್ಪ ಸಾಥ್ ಇದೆ. ಕೊಲ್ಲೂರಿನ ತಾಯಿ ಮೂಕಾಂಬಿಕಾ ಆಶೀರ್ವಾದ ಬೇಡಿದ್ದೇವೆ. ಇದೀಗ ಜನರ ಆಶೀರ್ವಾದಕ್ಕಾಗಿ ಬಂದಿದ್ದೇವೆ. ಫಿಲಂ ಚೇಂಬರ್, ಪ್ರೊಡ್ಯೂಸರ್ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ. ಶೇಕಡ 85ರಷ್ಟು ನಾನು ಕ್ಷೇತ್ರದಲ್ಲಿ ಪ್ರಚಾರದಲ್ಲಿ ಇರುತ್ತೇನೆ. ಎಲ್ಲಾ ಊರಿಗೂ ಹೋಗುತ್ತೇನೆ ಎಂದು ಅವರು ಹೇಳಿದರು.

    ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜಕುಮಾರ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ. ಪತ್ನಿ ಪರ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಪ್ರಚಾರಕ್ಕೆ ಬರುವುದಾಗಿ ಕಾಂಗ್ರೆಸ್ ಪಕ್ಷಕ್ಕೆ ಶಿವರಾಜ್ ಕುಮಾರ್ ಹೇಳಿದರು.

    1 Comment

    1 Comment

    1. Jane Dcunha

      21/03/2024 at 7:52 PM

      Good job Shivanna!

    Leave a Reply

    Your email address will not be published. Required fields are marked *

    LATEST NEWS

    ಪರಶುರಾಮ ಥೀಂ ಪಾರ್ಕ್‌ ವಿವಾದ : ನಕಲಿ ಪರಶುರಾಮನ ಮೂರ್ತಿ ಸ್ಥಾಪನೆಯಲ್ಲಿ ಮೊದಲ ತಲೆದಂಡ

    Published

    on

    ಉಡುಪಿ : ಕಾರ್ಕಳದ ಉಮಿಕಲ್‌ ಬೆಟ್ಟದ ಪರಶುರಾಮ ಥೀಂ ಪಾರ್ಕ್ ಸಂಬಂಧಿಸಿ ಮಹತ್ವದ ಬೆಳವಣಿಗೆ ಆಗಿದ್ದು, ನಿರ್ಮಿತಿ ಕೇಂದ್ರದ ಉಡುಪಿ ಜಿಲ್ಲೆಯ ಯೋಜನಾ ನಿರ್ದೇಶಕರನ್ನು ಅಮಾನತುಗೊಳಿಸಿ ಜಿಲ್ಲಾಡಳಿತ ಆದೇಶ ನೀಡಿದೆ. ಈಗಾಗಲೇ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವಿಚಾರಣಾ ಆಯೋಗವು ತನಿಖೆ ಕೈಗೊಂಡಿದೆ.


    ಈ ನಿಟ್ಟಿನಲ್ಲಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ನಡೆಸದಂತೆ ಹಾಗೂ ಅಡ್ಡಿ ಉಂಟು ಮಾಡುವ ಸಾಧ್ಯತೆ ಹಿನ್ನೆಲೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾಗಿದ್ದ ಅರುಣ್‌ ಕುಮಾರ್‌ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಈ ಪ್ರಕರಣದ ಮೊದಲ ತಲೆದಂಡ ಇದಾಗಿದೆ. ಈ ಮೂಲಕ ಭಾರಿ ವಿವಾದ ಸೃಷ್ಟಿಸಿದ್ದ ಥೀಂ ಪಾರ್ಕ್ ಪ್ರಕರಣ ತನಿಖೆ ಭಾರೀ ಕುತೂಹಲ ಮೂಡಿಸಿದೆ.

    ತೆರವಾದ ಸ್ಥಾನಕ್ಕೆ ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ನಿರ್ದೇಶಕರಾಗಿದ್ದ ದಿವಾಕರ್‌ ಪಿ. ಅವರಿಗೆ ಹೆಚ್ಚುವರಿಯಾಗಿ ಪ್ರಭಾರ ಆದೇಶ ನೀಡಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

    ಇದನ್ನೂ ಓದಿ : ಸುರತ್ಕಲ್ : ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾ*ವು
    2023ರ ಜನವರಿ 27 ರಂದು ಪರಶುರಾಮ ಥೀಂ ಪಾರ್ಕ್ ಇದನ್ನು ಅಂದಿನ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಉದ್ಘಾಟನೆ ಮಾಡಿದ್ದರು. ನಂತರದ ದಿನಗಳಲ್ಲಿ ಅಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮನ ಮೂರ್ತಿ ಫೈಬರ್‌ನಿಂದ ಕೂಡಿದ್ದೇ ಹೊರತು ಕಂಚಿನ ಪ್ರತಿಮೆ ಅಲ್ಲ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದರು. ಕಾಂಗ್ರೆಸ್‌ ಪಕ್ಷ ಆಡಳಿತಕ್ಕೆ ಬಂದ ಮೇಲೆ ಇದರ ವಿಚಾರಣೆ ಕೈಗೆತ್ತಿಕೊಂಡಿತ್ತು. ಸ್ಥಳೀಯ ಶಾಸಕ ಸುನಿಲ್‌ ಕುಮಾರ್‌ ಅವರ ಮಹತ್ವದ ಈ ಯೋಜನೆಯ ಬಗ್ಗೆ ಭಾರಿ ಟೀಕೆ ವ್ಯಕ್ತವಾಗಿತ್ತು.

    Continue Reading

    LATEST NEWS

    ಉಡುಪಿ: ಪೆರ್ಡೂರು ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇ*ಣಿಗೆ ಶರಣು

    Published

    on

    ಉಡುಪಿ: ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಯನಾ (17) ಆತ್ಮಹ*ತ್ಯೆಗೆ ಮಾಡಿಕೊಂಡ ಘಟನೆ ಪೆರ್ಡೂರು ಗ್ರಾಮದಲ್ಲಿ ನಡೆದಿದೆ.

    ಆತ್ಮಹ*ತ್ಯೆ ಮಾಡಿಕೊಂಡ ನಯನಾ ಅವರು ಪೆರ್ಡೂರು ಗ್ರಾಮದ ಶೋಬಾ (50) ಎಂಬವರ ಮಗಳು. ಈ ಘಟನೆಯು ಜುಲೈ 22, 2024 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:20 ರ ನಡುವೆ ಸಂಭವಿಸಿದೆ.

    ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇ*ಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಕೊಲ್ಲೂರು : ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್

    Published

    on

    ಕೊಲ್ಲೂರು : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಎಂಬಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘ*ಡ ಸಂಭವಿಸಿದೆ.

    ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ‌ ಸುರಿದ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು, ವಿಪರೀತವಾದ ಮಳೆಯಿಂದ ಚಾಲಕನಿಗೆ ‌ರಸ್ತೆ ಕಾಣದೆ ಪಕ್ಕಕ್ಕೆ ಜರಿದಿದೆ. ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.

    Continue Reading

    LATEST NEWS

    Trending