Home ಪ್ರಮುಖ ಸುದ್ದಿ ಸ್ಮಶಾನದಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆದ ಶಿವಭಕ್ತರು

ಸ್ಮಶಾನದಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆದ ಶಿವಭಕ್ತರು

ಸ್ಮಶಾನದಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆದ ಶಿವಭಕ್ತರು

ಬಂಟ್ವಾಳ: ಶಿವರಾತ್ರಿಯ ಪರಿಕಲ್ಪನೆ ನಿಜಾರ್ಥದಲ್ಲಿ ಸಾಕ್ಷಾತ್ಕಾರಗೊಂಡ ಸನ್ನಿವೇಶವದು. ಮಧ್ಯರಾತ್ರಿಯಾದರೂ  ಆ ಸ್ಮಶಾನದಲ್ಲಿ ಯಾರ ಮೊಗದಲ್ಲೂ ಭಯವೆಂಬುದಿಲ್ಲ.. ಎಲ್ಲೆಡೆಯೂ ಭಕ್ತಿಯ ಪರಾಕಾಷ್ಠೆ.. ಈ ಸನ್ನಿವೇಶ ಕಂಡು ಬಂದದ್ದು ಸಜಿಪನಡು ಕಂಚಿನಡ್ಕ ಪದವಿನಲ್ಲಿ.  ಶಿವರಾತ್ರಿಯ ದಿನವಾದ ನಿನ್ನೆ ಸಂಜೆ 6 ರಿಂದ ಶಿವ ಧ್ಯಾನದ ಪುಣ್ಯಕಾರ್ಯ ಮಧ್ಯರಾತ್ರಿ ತನಕವೂ ವಿವಿಧ ಭಜನಾತಂಡಗಳ ಭಜನೆಯ ಜೊತೆಗೆ ಸಂಪನ್ನ ಗೊಂಡಿತು.

ಪುರುಷ-ಮಹಿಳೆ ಎಂಬ ಬೇಧಭಾವ ವಿಲ್ಲದೆ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗಿನ ಎಲ್ಲರೂ ಶಿವಧ್ಯಾನದಲ್ಲಿ ತೊಡಗಿದ್ದ ಅಪೂರ್ವ ಸನ್ನಿವೇಶ ಅಲ್ಲಿ ನಿರ್ಮಾಣಗೊಂಡಿತ್ತು. ಸಜಿಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ರುದ್ರಭೂಮಿ ದೇವಭೂಮಿಯಲ್ಲಿ ಹಿಂದೂ ರುಧ್ರಭೂಮಿ ಸಮಿತಿ ಹಾಗೂ ಹಿಂದೂ ರುಧ್ರಭೂಮಿ ಅಭಿವೃದ್ದಿ ಸಮಿತಿ ಮಹಾಶಿವರಾತ್ರಿಯ ಅಂಗವಾಗಿ ಆಯೋಜಿಸಿದ್ದ ವಿಶಿಷ್ಟ ಮತ್ತು ಅಪರೂಪದ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬಂತು.

ಸಾಮಾನ್ಯವಾಗಿ ರುದ್ರಭೂಮಿಯಲ್ಲಿ ಭಜನಾ ಕಾರ್ಯಕ್ರಮ ನಡೆಯುವುದೇ ಅದು ವಿಶೇಷ. ಅದರಲ್ಲೂ ರುದ್ರಭೂಮಿಗೆ ಜನರು ಬರುವುದೇ ವಿರಳ. ಅಂತಹ ಸ್ಥಳದಲ್ಲಿ ರಾತ್ರಿ ಹೊತ್ತಿನಲ್ಲಿ ಶಿವನ ಪ್ರತಿಮೆಯ ಬಳಿ ಕರ್ಪೂರದ ಆರತಿ ಬೆಳಗಿ, ಬಿಲ್ವಾರ್ಚನೆಗೈದು ಪ್ರಾರ್ಥನೆ ಸಲ್ಲಿಸುವ ಅಭೂತಪೂರ್ವ ಕ್ಷಣ ಇಲ್ಲಿತ್ತು.

ರುದ್ರಭೂಮಿ ಮನುಷ್ಯನ ಮೋಕ್ಷ ಸ್ಥಳ, ಇಂತಹ ಪವಿತ್ರ ಸ್ಥಳದ  ಶಿವನ ಸಾನಿಧ್ಯವೂ ಹೌದು, ಇದರ ಬಗ್ಗೆ ಭಯಬೇಡ ಎಂಬ ಸಾಮಾಜಿಕ ಜಾಗೃತಿಯ ಕಾರಣಕ್ಕೆ ಶಿವರಾತ್ರಿಯಂದು ಭಜನೆಯ ಮೂಲಕ ಶಿವಾರಾಧನೆ ನಡೆಸಲಾಗುತ್ತಿದೆ ಎಂದು ಹಿಂದೂ ರುದ್ರಭೂಮಿ ಸಮಿತಿಯ ಅಧ್ಯಕ್ಷ ಯಶವಂತ ದೇರಾಜೆ ತಿಳಿಸಿದ್ದಾರೆ. ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವದಾಸ ಅಡಪ ಮತ್ತು ಉಭಯ ಸಮಿತಿಗಳ ಸದಸ್ಯರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಮಧ್ಯರಾತ್ರಿವರೆಗೂ ನಡೆದ ಭಜನಾ ಸಂಕೀರ್ತನೆಯಲ್ಲಿ ಸುಮಾರು 10ಕ್ಕೂ ಅಧಿಕ ಭಜನಾ ತಂಡಗಳು ಭಾಗವಹಿಸಿ ಶಿವರಾತ್ರಿಯನ್ನು ಅರ್ಥಪೂರ್ಣವಾಗಿಸಿತು.  ಮಧ್ಯರಾತ್ರಿವರೆಗೂ ಸಾಲುಸಾಲಾಗಿ ಭಕ್ತಾಧಿಗಳು ಆಗಮಿಸುತ್ತಿದ್ದುದು ವಿಶೇಷವಾಗಿತ್ತು. ಆಗಮಿಸಿದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...