Connect with us

    LATEST NEWS

    ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್ ಕುಮಾರ್ ಭೇಟಿ

    Published

    on

    ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಸಮೇತರಾಗಿ ಭೇಟಿ ನಟ ಶಿವರಾಜ್ ಕುಮಾರ್ ಭೇಟಿ ನೀಡಿದರು.

    ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಮಾತನಾಡಿದ ಅವರು, ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿ ಸಿಗುತ್ತದೆ. ನಂಬಿಕೆಯೂ ಇರುವುದರಿಂದ ಮಂಗಳೂರು ವ್ಯಾಪ್ತಿಗೆ ಬರುವಾಗ ಈ ಭಾಗಕ್ಕೆ ಭೇಟಿ ನೀಡುತ್ತಿರುತ್ತೇನೆ. ಶೃಂಗೇರಿ ಮಠ, ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ, ವನದೇವತೆ, ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಕ್ಕೆ ಭೇಟಿಕೊಟ್ಟಾಗ ನೆಮ್ಮದಿಯಿರುತ್ತದೆ.

    ನಂಬಿಕೆಯೂ ಬಲವಾಗಿರುವುದರಿಂದ ಜೀವನ ಚೆನ್ನಾಗಿರಲಿ ಅನ್ನುವ ಭರವಸೆಯ ಜೊತೆಗೆ ಭೇಟಿ ನೀಡುತ್ತಿರುತ್ತೇನೆ.ಎಂದರು. ಈ ಸಂದರ್ಭ ಗೀತಾ ಶಿವರಾಜ್ ಕುಮಾರ್ , ಸಿನೆಮಾ ನಿರ್ಮಾಪಕ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ಉಪಾಧ್ಯಕ್ಷ ಮಹಾಬಲ ಹೆಗ್ಡೆ ದೆಬ್ಬೇಲಿ, ಮೊದಲಾದವರು ಉಪಸ್ಥಿತರಿದ್ದರು.

    LATEST NEWS

    ಮೊದಲ ರಾತ್ರಿ ವಿಡಿಯೋ ವೈರಲ್; ಪತಿಯಿಂದ ಪತ್ನಿಗೆ ಬ್ಲ್ಯಾಕ್‌ಮೇಲ್…ಏನಿದು ಪ್ರಕರಣ ?

    Published

    on

    ಮಂಗಳೂರು/ರಾಯಚೂರು: ಮೊದಲ ರಾತ್ರಿಯ ವಿಡಿಯೋ ಮಾಡಿ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ರಾಯಚೂರಿನ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ಆರೋಪ ಕೇಳಿಬಂದಿದೆ.

    ಈ ಕುರಿತು ರಾಯಚೂರು ಜಿಲ್ಲೆ ಮಾನ್ವಿ ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

    ಫಸ್ಟ್ ನೈಟ್ ವಿಡಿಯೋ ರೆಕಾರ್ಡ್ ಮಾಡಿ ಇಟ್ಟುಕೊಂಡಿರುವ ಪತಿ, ತನ್ನ ವಿರುದ್ಧ ಮಾತನಾಡಿದರೆ ಖಾಸಗಿ ಕ್ಷಣದ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಾನ್ವಿ ವಿಭಾಗದ ಜೆಸ್ಕಾಂನಲ್ಲಿ ಮೇಲ್ವಿಚಾರಕ ಹುದ್ದೆಯಲ್ಲಿರುವ ಗುರುರಾಜ್ ಎಂಬವರ ವಿರುದ್ಧ ದೂರು ದಾಖಲಾಗಿದೆ.

    ಮದುವೆಯ ಹಿನ್ನಲೆ :

    ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಗುರುರಾಜ್​ನನ್ನು ನಂಬಿ ಮದುವೆಯಾಗಿದ್ದಾಳೆ. ಗುರುರಾಜ್ ತನ್ನ ಚಾಲಕನನ್ನು ಬಳಸಿಕೊಂಡು ಸಾಕಷ್ಟು ಜನರಿಗೆ ಪತ್ನಿಯ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ತೋರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಕೆಲವು ಮಂದಿ ಬೇರೆ ಹೆಣ್ಣುಮಕ್ಕಳಿಗೂ ಇದೇ ರೀತಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಮತ್ತೊಬ್ಬನ ಬಳಿ ಹೆಂಡತಿಯನ್ನು ಕಳುಹಿಸಲು ಮುಂದಾಗಿದ್ದ ಭೂಪ:

    ತಮಗೆ ಯಾರ ಬಳಿ ಕೆಲಸ ಆಗತ್ತದೆಯೋ ಅಂಥವರ ಬಳಿ ಹೋಗು ಎಂದು ಗುರುರಾಜ್ ಪತ್ನಿಗೆ ಟಾರ್ಚರ್ ಕೊಟ್ಟಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯರಿಗೆ ಅಶ್ಲೀಲವಾಗಿ ವಿಡಿಯೋ ಕಾಲ್ ಮಾಡಿರುವ ಸಾಕ್ಷಿಗಳಿವೆ ಎಂದೂ ಸಂತ್ರಸ್ತೆ ಆರೋಪಿಸಿದ್ದಾರೆ. ಜತೆಗೆ, ಈಗಾಗಲೇ ಪತಿ ಗುರುರಾಜ್ ನಾಲ್ಕು ಮದುವೆ ಆಗಿದ್ದಾರೆ. ತಾನಗೆ ಕೋಟಿಗಟ್ಟಲೇ ಲಾಭ ಬರತ್ತದೆ ಎಂದು ನಂಬಿಸಿ ಮದುವೆಯಾಗಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

    ಸಾಕಷ್ಟು ಬಾರಿ ಪತ್ನಿ ಮೇಲೆ ದಾಳಿ ಮಾಡಿದ್ದು, ರಕ್ಷಣೆಯ ಕೋರಿಕೆ ಕುರಿತು ಮಾನ್ವಿ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

    Continue Reading

    LATEST NEWS

    ಆಳ್ವಾಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ ಉದ್ಘಾಟನೆ

    Published

    on

    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ)ದ ವತಿಯಿಂದ ವಿದ್ಯಾಗಿರಿಯ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ನಿರ್ಮಾಣಗೊಂಡಿರುವ ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರವು ಸೋಮವಾರ ಉದ್ಘಾಟನೆಗೊಂಡಿತು.

    ಕೇಂದ್ರವನ್ನು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್ ಸತೀಶ್ ರೈ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜೀವನದಲ್ಲಿ ನಿರ್ದಿಷ್ಟ ಗುರಿ ಮತ್ತು ಸ್ಪಷ್ಟತೆ ಇರಲಿ. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ನುಡಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ವಿನಿಯೋಗಿಸಿಕೊಂಡರೆ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ನುಡಿದರು.

    ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಉಪಸ್ಥಿತರಿದ್ದು ಮಾತನಾಡಿದರು. ಲೋಕನಾಥ ಬೋಳಾರ್ ಅವರ ಪತ್ನಿ ಡಾ. ದೇವಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಎಸ್. ರಮಾನಂದ ಶೆಟ್ಟಿ, ಉದ್ಯಮಿ ಕಿಶೋರ್ ಶೆಟ್ಟಿ, ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಆಲ್ವಿನ್ ಪಿಂಟೊ, ಯುವಜನ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ ಸೋಜಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.

    Continue Reading

    LATEST NEWS

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ಯುವಕ ಮೃತ್ಯು

    Published

    on

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯಲ್ಲಿ ನಡೆದಿದೆ.

    ಸುಡಿಂಕಿರಿ ಮೂಲೆಯ ಚಂದ್ರಶೇಖರ (36)ರವರು ಶಂಕಿತ ಜ್ವರದ ಹಿನ್ನಲೆ ಕಳೆದ 1 ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ತಂದೆ, ತಾಯಿ, ತಂಗಿ ಇದ್ದಾರೆ.

    Continue Reading

    LATEST NEWS

    Trending