ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೈಯುವ ಮೂಲಕ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ.
ಈ ಪ್ರಕರಣವನ್ನು ಎನ್‌ಐಎಗೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರಕಾವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತ ಪ್ರವೀಣ್ ಯಾವುದೇ ದುಷ್ಕೃತ್ಯಗಳಲ್ಲಿ ಭಾಗಿಯಾಗಿಲ್ಲ.
ಇದೊಂದು ಪೂರ್ವ ನಿಯೋಜಿತ ಕೃತ್ಯ. ಘಟನೆಯ ಹಿಂದಿರುವವರ ತನಿಖೆಯಾಗಬೇಕು ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು.
ಇದಕ್ಕೆ ಕುಮ್ಮಕ್ಕು ಕೊಟ್ಟಿರುವವರು, ಪ್ರವೀಣ್‌ನನ್ನು ತೋರಿಸಿರುವವರು ಹಾಗೂ ಇದರ ಹಿಂದೆ ಇರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಸಾಧ್ಯ ಆದ್ರೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.