Home ಉಡುಪಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಗೆ ಕಠಿಣ ಶಿಕ್ಷೆ ಆಗಬೇಕು: ಸಂಸದೆ ಶೋಭಾ ಕರಂದ್ಲಾಜೆ

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಗೆ ಕಠಿಣ ಶಿಕ್ಷೆ ಆಗಬೇಕು: ಸಂಸದೆ ಶೋಭಾ ಕರಂದ್ಲಾಜೆ

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಗೆ ಕಠಿಣ ಶಿಕ್ಷೆ ಆಗಬೇಕು: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ್‌ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಭಾರತ ವಿರೋಧಿ ಘೋಷಣೆ ಕೂಗುವ ಜಾಲ ನಿರ್ಮಾಣ ಆಗಿದೆ.

ಜಿನ್ನಾ ಮಾನಸಿಕತೆ ಸೃಷ್ಟಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಹಣ ಕೊಟ್ಟು ಒತ್ತಡ ಹಾಕಿ ಪ್ರಚಾರಕ್ಕಾಗಿ ಹೇಳಿಕೆ ಕೊಡಲಾಗುತ್ತಿದೆ. ಪಾಕ್ ಪರ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಭಾರತ ಮತ್ತು ರಾಜ್ಯದ ಕಾನೂನಲ್ಲಿ ಬದಲಾವಣೆ ಆಗಬೇಕು. ಭಾರತದ ಅನ್ನ ತಿಂದು, ಸಬ್ಸಿಡಿ ಪಡೆದು ಪಾಕ್ ಪರ ಘೋಷಣೆ ಕೂಗುತ್ತಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಜರಗಿಸಬೇಕು ಎಂದರು.

ಇನ್ನು ಘೋಷಣೆ ಕೂಗಿದ ಅಮೂಲ್ಯಳ ತಂದೆಯ ಬಗ್ಗೆಯೂ ತನಿಖೆಯಾಗಬೇಕು. ಅವರಿಗೆ ಹಿಂದೆ ನಕ್ಸಲರ ಜೊತೆ ಸಂಪರ್ಕ ಇತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಸಿರಿಮನೆ ನಾಗರಾಜು ಮತ್ತು ನಕ್ಸಲ್ ಬೆಂಬಲಿಗರ ಜೊತೆ ಒಡನಾಟ ಇದೆ. ಅಮೂಲ್ಯ ಅಪ್ಪನಿಗೆ ನಕ್ಸಲರ ಸಂಪರ್ಕ ಇದೆ ಎಂದು ಅವರು ಆರೋಪಿಸಿದ್ದಾರೆ.

ಅಮೂಲ್ಯಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಎಂಬ ಡಿಕೆಶಿ ಹೇಳಿಕೆಯನ್ನು ಉಲ್ಲೆಖಿಸಿದ ಅವರು, ಡಿಕೆಶಿ ಒರ್ಜಿನಲ್ ಕಾಂಗ್ರೆಸ್ಸಿಗ ಅಲ್ಲ. ನಿಜವಾದ ಕಾಂಗ್ರೆಸ್ಸಿಗರಾಗಿದ್ದರು ಈ ಹೇಳಿಕೆ ನೀಡುತ್ತಿರಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಪಕ್ಷ ಕಾಂಗ್ರೆಸ್ ಎನ್ನುತ್ತಾರೆ. ಈ ರೀತಿ ಹೇಳಿಕೆ ನೀಡಿದ ಡಿಕೆಶಿ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...