ಮಂಗಳೂರು/ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಈಗಗಾಲೇ 0-1ರ ಅಂತರದ ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಗೆ, ಎರಡನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಇರುವಾಗಲೇ ಆಘಾತ ಎದುರಾಗಿದೆ.
ಆಸ್ಟ್ರೇಲಿಯಾ ತಂಡದ ಅನುಭವಿ ವೇಗದ ಬೌಲರ್ ಜೋಶ್ ಹೇಜಲ್ ವುಡ್ ಗಾಯದ ಸಮಸ್ಯೆಗೆ ಒಳಗಾಗಿದ್ದು ಮುಂಬರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎನ್ನಲಾಗಿದೆ. ಹೇಜಲ್ ವುಡ್ ದೇಹದ ಎಡಭಾಗದಲ್ಲಿ ನೋವು ಉಲ್ಬಣಗೊಂಡಿದ್ದು, ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟನೆ ತಿಳಿಸಿದೆ.
ಆಸ್ಟ್ರೇಲಿಯಾದ ಅಡಿಲೇಡ್ ನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯವು ಡಿಸೆಂಬರ್ 6ರಂದು ಆರಂಭವಾಗಲಿದೆ. ಇನ್ನು ಹೇಜಲ್ ವುಡ್ ಅನುಪಸ್ಥಿತಿಯಲ್ಲಿ ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ಸೀನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಈ ಇಬ್ಬರು ವೇಗಿಗಳು ಇನ್ನಷ್ಟೇ ಚೊಚ್ಚಲ ಪಂದ್ಯ ಆಡಬೇಕಿದೆ. ಇದಕ್ಕೂ ಮೊದಲು ಬ್ಯೂ ವೆಬ್‌ಸ್ಟರ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿತ್ತು. ಹೇಜಲ್ ವುಡ್ ಅನುಪಸ್ಥಿತಿಯಿಂದ ಆಸ್ಟ್ರೇಲಿಯಾಗೆ ಸರಣಿ ಹಿನ್ನಡೆಯಾಗುವ ಸಾಧ್ಯತೆಯಿದೆ.
ಮಂಗಳೂರು/ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಸರ್ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಗ್ರೀನ್ ಕ್ಯಾಪ್ ಹರಾಜಿನಲ್ಲಿ 2. 63 ಕೋಟಿ ರೂಪಾಯಿಗೆ ಮಾರಾಟವಾಗಿ ಅಚ್ಚರಿ ಮೂಡಿಸಿದೆ.
ಕ್ರಿಕೆಟ್ ಇತಿಹಾಸದ ಅಪರೂಪದ ವಸ್ತುವೊಂದನ್ನು ಮಂಗಳವಾರ ಹರಾಜಿಗಿಟ್ಟ ನಂತರ ಬ್ರಾಡ್ಮನ್ ಅವರ ಕ್ಯಾಪ್ ಗೆ ಇಷ್ಟೊಂದು ದೊಡ್ಡ ಮೊತ್ತ ಲಭಿಸಿದೆ. 1947-48ರಲ್ಲಿ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸದ ವೇಳೆ ಬ್ರಾಡ್ಮನ್ ಈ ಕ್ಯಾಪ್ ಧರಿಸಿದ್ದರು ಎಂದು ಹೇಳಲಾಗಿದೆ. ಈ ಕ್ಯಾಪ್ ಗೆ ಈಗ 80 ವರ್ಷ ವಯಸ್ಸಾಗಿದೆ ಎಂದು ಹರಾಜು ಸಂಸ್ಥೆ ಬೊನ್ಸಾಮ್ ಹೇಳಿದೆ.
ಕ್ರಿಕೆಟ್ ಅಂಗಳದಲ್ಲಿ ”ದಿ ಡಾನ್” ಎಂದು ಕರೆಸಿಕೊಂಡಿದ್ದ ಬ್ರಾಡ್ಮನ್ 2001ರಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಆದರೆ 20 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ ನಲ್ಲಿ ನಿರ್ಮಿಸಿದ ದಾಖಲೆಗಳು ಇನ್ನೂ ಸಹ ಅವರನ್ನು ಅಜರಾಮರರನ್ನಾಗಿರಿಸಿದೆ.
ಆಸ್ಟ್ರೇಲಿಯಾ ಪರ 52 ಟೆಸ್ಟ್ ಗಳನ್ನಾಡಿದ್ದ ಬ್ರಾಡ್ಮನ್, 2 ತ್ರಿಶತಕ, 12 ದ್ವಿಶತಕ, 29 ಶತಕಗಳು ಮತ್ತು 13 ಅರ್ಧ ಶತಕಗಳೊಂದಿಗೆ 6996 ರನ್ ಗಳನ್ನು ಗಳಿಸಿದ್ದಾರೆ. ಅಂದರೆ ಅವರ ಬ್ಯಾಟಿಂಗ್ ಸರಾಸರಿ 99.94 ಇತ್ತು. ಇದು ಕ್ರಿಕೆಟ್ ಇತಿಹಾಸದಲ್ಲೇ ಬ್ಯಾಟರ್ ರೊಬ್ಬರ ಗರಿಷ್ಠ ರನ್ ಸರಾಸರಿ ಎಂಬುದು ವಿಶೇಷ.
ಮಂಗಳೂರು/ಶ್ರೀಹರಿಕೋಟ :ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು ಬುಧವಾರ ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ (ESE) ಗಾಗಿ ಅತ್ಯಾಧುನಿಕ ತಂತ್ರಜ್ಞಾನ ಪ್ರದರ್ಶನ ಮಿಷನ್ ಪ್ರೊಬಾ-3 ಬಾಹ್ಯಾಕಾಶ ನೌಕೆಯನ್ನು ಉಡಾಯಿಸಲು ಸಜ್ಜಾಗಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಇಂದು ಅಪರಾಹ್ನ 4:08 ನಿಮಿಷಕ್ಕೆ ಉಡಾವಣೆಯಾಗಲಿದ್ದು, ಇದು ಇಸ್ರೋದ ವಾಣಿಜ್ಯ ಬಾಹ್ಯಾಕಾಶ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿರುತ್ತದೆ.
ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ (ESE) ಜತೆ ಒಪ್ಪಂದವನ್ನು ಪಡೆದುಕೊಂಡಿರುವ ಇಸ್ರೋ ಈ ಮಿಷನ್ ಅನ್ನು ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL)ನ ವಾಣಿಜ್ಯ ವಿಭಾಗದ ಅಡಿಯಲ್ಲಿ ಲಾಂಚ್ ಮಾಡುತ್ತಿದೆ. ಇದು ಪೋಲಾರ್ ಸ್ಯಾಟ್ ಲೈಟ್ ಲಾಂಚ್ ವಹಿಕಲ್ (ಪಿಎಸ್ ಎಲ್ ವಿ ರಾಕೆಟ್)ನ 61ನೇ ಹಾರಾಟವಾಗಿದೆ. ಹೆಚ್ಚು ತೂಕದ ಬಾಹ್ಯಾಕಾಶ ಮಿಷನ್ ಕೈಗೊಳ್ಳುವಲ್ಲಿ ಪಿಎಸ್ ಎಲ್ ವಿ ರಾಕೆಟ್ ಹೆಸರುವಾಸಿಯಾಗಿದೆ.ಈ ಮಿಷನ್ ಅಡಿ ಕರೋನಾಗ್ರಾಫ್ ಮತ್ತು ಆಕಲ್ಚರ್ ಎಂಬ ಎರಡು ಬಾಹ್ಯಾಕಾಶ ನೌಕೆಗಳನ್ನು ನಭಕ್ಕೆ ಕೊಂಡೊಯ್ಯಲಾಗುತ್ತದೆ. ಇದು ಸೂರ್ಯನ ಹೊರಗಿನ ವಾತಾವರಣ ಅಧ್ಯಯನ ಮಾಡುವ ಸಲುವಾಗಿ ವಿಶೇಷವಾಗಿ ವಿನ್ಯಾಸ ಮಾಡಿರುವ ನೌಕೆಗಳಾಗಿವೆ.
ಈಯೋಜನೆಯಲ್ಲಿ ಇಸ್ರೋ ಪಾತ್ರ
ಐರೋಪ್ಯ ಬಾಹ್ಯಾಕಾಶ ಸಂಸ್ಥೆಯು ಪ್ರೋಬಾ-3 ಮಿಷನ್ ನ ವೈಜ್ಞಾನಿಕ ಅಂಶಗಳನ್ನು ಮುನ್ನಡೆಸುತ್ತದೆ. ಈ ಯೋಜನೆಯ ಉಡಾವಣೆ ಯಶಸ್ಸಿಗೆ ಇಸ್ರೋ ಪಲ್ಗೊಳ್ಳುವಿಕೆ ಅತ್ಯಂತ ನಿರ್ಣಾಯಕವಾಗಿದೆ. ಈ ಯೋಜನೆಗಾಗಿ ಇಸ್ರೋ ಪಿಎಸ್‌ಎಲ್‌ವಿ-ಎಕ್ಸ್‌ಎಲ್ ರಾಕೆಟ್ ಅನ್ನು ಒದಗಿಸುತ್ತದೆ. ನಿಗದಿತ ಕಕ್ಷೆಗೆ 500 ಕೆಜಿವರೆಗಿನ ಪೇಲೋಡ್‌ಗಳನ್ನು ಕೊಂಡೊಯ್ಯುವ ವಿಷಯದಲ್ಲಿ ಪಿಎಸ್‌ಎಲ್‌ವಿ ರಾಕೆಟ್ ಹೆಸರುವಾಸಿಯಾಗಿದೆ. ಈ ಬಾಹ್ಯಾಕಾಶ ನೌಕೆಗಳನ್ನು ನಿಗದಿಪಡಿಸಿದ ಕಕ್ಷೆಗೆ ನಿಯೋಜಿಸುವಲ್ಲಿ ಇಸ್ರೋದ ಪಾತ್ರ ಮಹತ್ವದ್ದಾಗಿದೆ.
ಈಗಾಗಲೇ ಭಾರತವು ಸೌರ ಮಿಷನ್ ಕೈಗೊಂಡಿದೆ. ಆದಿತ್ಯ-L1 ಅನ್ನು ಸೆಪ್ಟೆಂಬರ್ 2023 ರಲ್ಲಿ ಯಶಸ್ವಿಯಾಗಿ ನಿಯೋಜಿಸಿದೆ. ಇಸ್ರೋದ ಈ ಪರಿಣತಿಯನ್ನು ಮನಗಂಡು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಭಾರತಕ್ಕೆ ಈ ಮಹತ್ವದ ಕೆಲಸವನ್ನು ನೀಡಿದೆ.
ಸೌರ ಕರೋನಾದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಈ ಮಿಷನ್ ಕೊಡುಗೆ ನೀಡಲಿದೆ.
ಮಂಗಳೂರು/ಕ್ಯಾನ್ ಬೆರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಆಲ್ಬನೀಸ್ ಅವರನ್ನು ಭೇಟಿ ಮಾಡಿತು. ಈ ವೇಳೆ ಆಸೀಸ್ ಪ್ರಧಾನಿ, ಕೊಹ್ಲಿ ಅವರ ಆಟೋಗ್ರಾಫ್ ಪಡೆದುಕೊಂಡಿದ್ದು ತುಂಬಾ ಸದ್ದು ಮಾಡಿತ್ತು.
ಅಷ್ಟಕ್ಕೂ, ಆಂಥೋನಿ ಆಲ್ಬನೀಸ್ ಅವರು ಟೀಂ ಇಂಡಿಯಾ ನಾಯಕ ರೋಹಿತ್ ಅವರನ್ನು ಬಿಟ್ಟು ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆದಿದ್ದೇಕೆ ಎಂಬುದನ್ನು ಸ್ವತಃ ಅವರೇ ರಿವಿಲ್ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಆಲ್ಬನೀಸ್,’ನನ್ನ ಖಾಸಗಿ ವೈದ್ಯರು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಅವರು ಕೊಹ್ಲಿಯ ಬಗ್ಗೆ ಎಷ್ಟು ಭಾವೋದ್ರಿಕೃತರಾಗಿದ್ದಾರೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ನಾನು ಕೊಹ್ಲಿಯನ್ನು ಭೇಟಿಯಾಗುತ್ತೇನೆ ಎಂದು ಹೇಳಿದಾಗ ಅವರಿಗೆ ನಂಬಲು ಸಾಧ್ಯವಾಗಲಿಲ್ಲ. ಈಗಾಗೀ ಕೊಹ್ಲಿಯ ಆಟೋಗ್ರಾಫ್ ಕೊಡಿಸಲು ಅವರು ನನ್ನಲ್ಲಿ ಹೇಳಿದ್ದಾರೆ. ಎಂದು ತಿಳಿಸಿದರು.
ಇನ್ನೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಎರಡನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯಾವು ಶುಕ್ರವಾರದಿಂದ ಶುರುವಾಗಲಿದೆ.
Pingback: ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ಸ್ವೀಕಾರ - NAMMAKUDLA NEWS - ನಮ್ಮಕುಡ್ಲ ನ್ಯೂಸ್