Connect with us

    LATEST NEWS

    ನಿಧಿ ಆಸೆಗೆ ಸೊಸೆಯನ್ನೇ ಬಲಿ ಕೊಡಲು ಮುಂದಾದ ಅತ್ತೆ-ಮಾವ.!

    Published

    on

    ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ನಿಧಿಯ ಆಸೆಗಾಗಿ ಮನೆಯ ಸೊಸೆಯನ್ನೇ, ತೋಟದ ಮನೆಯಲ್ಲಿ ಗುಂಡಿ ತೋಡಿ ಜೀವಂತ ಸಮಾಧಿಗೆ ಆಕೆಯ ಅತ್ತೆ ಮಾವ ಸಂಚು ರೂಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮದ ತೋಟದ ಮನೆಯಲ್ಲಿ ಈ ಒಂದು ಆಘಾತಕಾರಿ ಘಟನೆ ನಡೆದಿದೆ.

    ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮ ಸೊಸೆ ಮುತ್ತಕ್ಕ ಪೂಜಾರ ಸಮಾಧಿ ಮಾಡಲು ಮನೆಯಲ್ಲಿಯೇ ಗುಂಡಿ ತೋಡಿದ್ದಾರೆ. ಸುಮಾರು 5 ಅಡಿ ಅಗಲ 5 ಅಡಿ ಆಳದ ಗುಂಡಿ ತೋಡಿದ್ದ ಆರೋಪ ಕೇಳಿ ಬರುತ್ತಿದೆ. ಅತ್ತೆ, ಮಾವ,ನಾದಿನಿ, ವಿರುದ್ಧ ಸೊಸೆ ಮುತ್ತಕ್ಕ ಸಂಬಂಧಿಕರು ಈ ಒಂದು ಆರೋಪ ಮಾಡಿದ್ದಾರೆ.

    ಸೊಸೆ ಮುತ್ತಕ್ಕ ಪೂಜಾರಗಳನ್ನು ಬಲಿಕೊಡಲು ಸಂಚು ರೂಪಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಈ ವೇಳೆ ಸಂಬಂಧಿಕರು ಊರಿಗೆ ಬರುವ ವಿಚಾರ ತಿಳಿದ್ದು ಗುಂಡಿ ಮುಚ್ಚಿದ್ದಾರೆ. ಮೂರ ವಿರುದ್ಧ ಮುಟ್ಟಕ್ಕ ಸಹೋದರ ನಾಗರೆಡ್ಡಿ ಈ ಒಂದು ಆರೋಪ ಮಾಡುತ್ತಿದ್ದಾರೆ. ವಿಷಯ ತಿಳಿದು ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

    LATEST NEWS

    87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ; 5 ನಿರ್ಣಾಯಗಳು ಮಂಡನೆ

    Published

    on

    ಮಂಗಳೂರು/ಮಂಡ್ಯ: ಸಕ್ಕರೆ ನಾಡಿನಲ್ಲಿ ಕಳೆದ 3 ದಿನಗಳಿಂದ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿಚವೃದ್ದಿ ಅಧಿನಿಯಮ, ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಘೋಷಣೆ ಸೇರಿದಂತೆ 5 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

    ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು,ನುಡಿಯ ಡಿಂಡಿಮ ಮೊಳಗಿದೆ. ಮೊದಲ ದಿನ ಬರೋಬ್ಬರಿ 2 ಲಕ್ಷ ಜನ ಸೇರಿ ದಾಖಲೆ ಬರೆದಿದ್ದರೆ, ಎರಡು ಮತ್ತು ಮೂರನೇ ದಿನ ಕೂಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು.

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಂತಿಮ ದಿನದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಟೇಲ್ ಪಾಂಡು ಅವರು ಈ 5 ನಿರ್ಣಯಗಳನ್ನು ಮಂಡನೆ ಮಾಡಿದರು.

    ಇದನ್ನೂ ಓದಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಾವ ಜಿಲ್ಲೆಯಲ್ಲಿ ನಡೆಯುತ್ತೆ ಗೊತ್ತಾ ?

    ಬಹಿರಂಗ ಅಧಿವೇಶನದಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ತೆಗೆದುಕೊಂಡ ನಿರ್ಣಾಯಗಳು ಹೀಗಿವೆ.
    1. ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮ 2022ರ ಎಲ್ಲ ಉಪಬಂಧಗಳು ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮ ಜಾರಿಗೆ ಬರಬೇಕು. ಇದು ಕೂಡಲೇ ಅನುಷ್ಠಾನ ಆಗಬೇಕು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ತಿದ್ದುಪಡಿ ತರಬೇಕು.

    2.ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿ ಇತರೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು‌. ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಯ ಕ್ರಮಕ್ಕೆ ಸರ್ಕಾರ ಶೀಘ್ರವೇ ಕ್ರಮ ತೆಗೆದುಕೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು.

    3.ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು

    4.ದಾವಣಗೆರೆಯಲ್ಲಿ ನಡೆಯಬೇಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತೀ ಶೀಘ್ರದಲ್ಲೇ ನಡೆಸಬೇಕು.

    5.ಕರ್ನಾಟಕ ಸರ್ಕಾರ ರಾಷ್ಟ್ರಕವಿ ಪ್ರಶಸ್ತಿಯನ್ನ ಶೀಘ್ರದಲ್ಲೇ ಘೋಷಿಸಬೇಕು

    Continue Reading

    LATEST NEWS

    ಅಮೆಜಾನ್ ಸಂಸ್ಥಾಪಕನ ಮದುವೆ ಅಂಬಾನಿ ಮದುವೆಗಿಂತನೂ ಗ್ರ್ಯಾಂಡ್…

    Published

    on

    ಮಂಗಳೂರು/ವಾಷಿಂಗ್ಟನ್‌: ಅಮೆಜಾನ್‌ನ ಸಂಸ್ಥಾಪಕ ಜೆಫ್‌ ಬೆಜೋಜ್‌, ಶೀಘ್ರವೇ ತಮ್ಮ ಗೆಳತಿ, ಪತ್ರಕರ್ತೆ ಲಾರೆನ್‌ ಸ್ಯಾಂಚೆಜ್‌ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕಾಗಿ ಭಾರೀ ತಯಾರಿ ನಡೆಸಿದ್ದು, ವಿವಾಹ ಕಾರ್ಯಕ್ರಮದ ಒಟ್ಟಾರೆ ವೆಚ್ಚ 5096 ಕೋಟಿ ರೂ. ದಾಟಲಿದೆ ಎನ್ನಲಾಗಿದೆ.

    ಲಾರೆನ್ ಸ್ಯಾಂಚೆಝ್ ಸಂದರ್ಶನಗಳ ಸಮಯದಲ್ಲಿ ತನ್ನ ಮದುವೆಯ ಯೋಜನೆಗಳ ಬಗ್ಗೆ ಸುಳಿವು ನೀಡಿದ್ದಾರೆ ಆದರೆ ದಿನಾಂಕವನ್ನು ದೃಢಪಡಿಸಿಲ್ಲ. ದಿ ಟುಡೇ ಶೋ ಜೊತೆಗಿನ ಚಾಟ್‌ನಲ್ಲಿ, ಬಿಡುವಿಲ್ಲದ ವೇಳಾಪಟ್ಟಿಯೊಂದಿಗೆ ಮದುವೆಯ ಯೋಜನೆಯನ್ನು ಕುಶಲತೆಯಿಂದ ಮಾಡುವ ಬಗ್ಗೆ ತಮಾಷೆ ಮಾಡಿದರು, “ನನ್ನ ಬಳಿ Pinterest ಇದೆ. ನಾನು ಎಲ್ಲ ವಧುವಿನಂತೆಯೇ ಇದ್ದೇನೆ.

    ಇದನ್ನೂ ಓದಿ : ಭಾರತವಿಲ್ಲದೆ ಜಗತ್ತೇ ಶೂನ್ಯ ; ಮಾಜಿ ಜರ್ಮನ್ ರಾಯಭಾರಿ ಲಿಂಡ್ನರ್

    ಅಮೆರಿಕದ ಕೊಲರಾಡೋದ ಆ್ಯಸ್ಪೆನ್ಸ್‌ನಲ್ಲಿ  ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಮೊದಲ ಪತ್ನಿ ಮೆಕೆನ್ಜಿಗೆ 2019ರಲ್ಲಿ ಡೈವೋರ್ಸ್‌ ನೀಡಿದ್ದ ಬೆಜೋಸ್‌, ಮಾಜಿ ಪತ್ನಿಗೆ 3 ಲಕ್ಷ ಕೋಟಿ ರು.ಪರಿಹಾರ ನೀಡಿದ್ದರು. ಬಳಿಕ ಸ್ಯಾಂಜೆಜ್‌ ಜೊತೆ ನಂಟು ಹೊಂದಿದ್ದರು. ಸದ್ಯ, ಬೆಜೋಸ್‌ ಅವರ ಆಸ್ತಿ 20 ಲಕ್ಷ ಕೋಟಿ ರು.ನಷ್ಟಿದೆ. ಕೆಲ ತಿಂಗಳ ಹಿಂದೆ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಅವರ ವಿವಾಹ ಸಮಾರಂಭದ ಖರ್ಚು ಬರೋಬ್ಬರಿ 5000 ಕೋಟಿ ರು. ದಾಟಿತ್ತು.

    Continue Reading

    DAKSHINA KANNADA

    ಕರಾವಳಿ ಉತ್ಸವ: ಕದ್ರಿ ಪಾರ್ಕಿನಲ್ಲಿ ರೋಮಾಂಚಕಾರಿಯಾದ ಚಿಟ್ಟೆ ಪ್ರದರ್ಶನ

    Published

    on

    ಮಂಗಳೂರು : ಕೆಲವು ವರ್ಷಗಳ ಬಳಿಕ ಈ ಬಾರಿ ಮತ್ತೆ ಆರಂಭಗೊಂಡಿರುವ ಕರಾವಳಿ ಉತ್ಸವ ಎರಡೇ ದಿನಗಳಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಇದಕ್ಕೆ ಜಿಲ್ಲಾಡಳಿತ ಉತ್ತಮ ವ್ಯವಸ್ಥೆಯನ್ನು ಕೂಡಾ ಮಾಡಿದ್ದು, ಈ ಬಾರಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಸಂಘಟಿಸಿರುವುದಕ್ಕೆ ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಗಿದೆ.

    ಡಿಸೆಂಬರ್ 21ರಿಂದ ಆರಂಭಗೊಂಡಿರುವ ಕರಾವಳಿ ಉತ್ಸವದ ಆಕರ್ಷಕ ಮೆರವಣಿಗೆ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡಿವೆ. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಡಿ.೨೧ರಿಂದ ಜನವರಿ ೧೯ರವರೆಗೆ ನಡೆಯಲಿದೆ. ಪ್ರತೀ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಝಲಕ್ ಇರಲಿದೆ. ಕರಾವಳಿ ಕರ್ನಾಟಕದ ಕಲೆ, ಕರಕುಶಲ ಮತ್ತು ಖಾದ್ಯಗಳ ಪ್ರದರ್ಶನ, ಸಾಂಸ್ಕೃತಿಕ ವೈವಿಧ್ಯಗಳ ಜೊತೆಗೆ ಮನೋರಂಜನೆಯ ಭರಪೂರವಿದೆ. ಇದಲ್ಲದೇ ಡಿ.29ರವರೆಗೆ ಮೇರಿಹಿಲ್ ಹೆಲಿಪ್ಯಾಡಿನಲ್ಲಿ ಹೆಲಿಕಾಫ್ಟರ್ ರೈಡ್ ಆರಂಭಿಸಲಾಗಿದ್ದು, ಇದಕ್ಕೂ ಬಹಳಷ್ಟು ಜನ ಆಗಮಿಸುತ್ತಿದ್ದಾರೆ. ಡಿ.22ರಿಂದ ಜ.19ರವರೆ ಕದ್ರಿ ಪಾರ್ಕಿನಲ್ಲಿ ರೋಬೋಟಿಕ್ ಚಿಟ್ಟೆ ಪ್ರದರ್ಶನವಿದ್ದು, ಈ ಪ್ರದರ್ಶನವನ್ನು ವೀಕ್ಷಣೇ ಮಾಡಲು ಬಹಳಷ್ಟು ಜನ ಆಗಮಿಸುತ್ತಿದ್ದಾರೆ.

    ಶನಿವಾರ ಮತ್ತು ಭಾನುವಾರ ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಕಂಡು ಬಂದಿದ್ದು, ಈ ಪ್ರದರ್ಶನ ಸಂಜೆ 4 ರಿಂದ ರಾತ್ರಿ 9 ರವರೆಗೆ ಮಾತ್ರ ಇರಲಿದೆ. ಅಲ್ಲದೆ ಇಂದು ವಸ್ತುಪ್ರದರ್ಶನ ವೇದಿಕೆಯಲ್ಲಿ ನೃತ್ಯರೂಪಕವಿರಲಿದೆ. ನೃತ್ಯೋಪಾಸನ ಕಲಾ ಅಕಾಡೆಮಿ ಪುತ್ತೂರು ಇವರಿಂದ ಕಾರ್ಯಕ್ರಮವಿದೆ. ನಾಳೆ ಸಂಜೆ ದೇವದಾಸ್ ಕಾಪಿಕಾಡ್‌ ನಿದೇಆರ್ಶನದ ತುಳುಹಾಸ್ಯ ನಾಟಕ ಎರ್ಲಾ ಗ್ಯಾರಂಟಿ ಅತ್ತ್‌ ಎನ್ನುವ ನಾಟಕ ವಸ್ತು ಪ್ರದರ್ಶನ ವೇದಿಕೆಯಲ್ಲಿ ಪ್ರದರ್ಶಿಸಲ್ಪಡಲಿದೆ.

     

    Continue Reading

    LATEST NEWS

    Trending