Thursday, August 11, 2022

ಮೋರ್ಗನ್ಸ್‌ಗೇಟ್‌ನಲ್ಲಿ ತಂದೆಯಿಂದ ಮಗನ ಮೇಲೆ ಶೂಟೌಟ್‌: ಆಸ್ಪತ್ರೆಗೆ ದಾಖಲು

ಮಂಗಳೂರು: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.

 

ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್‌ ಪ್ರಭು ಬಳಿ ಕೆಲಸದವರೊಬ್ಬರ ಬಳಿ ಸಂಬಳ ವಿಷಯವಾಗಿ ಜಟಾಪಟಿ ನಡೆದಿದೆ ಎನ್ನಲಾಗಿದೆ.

ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ಹಣೆಗೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.

ಗಾಯಗೊಂಡ ಮಗನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.

LEAVE A REPLY

Please enter your comment!
Please enter your name here

Hot Topics

ಹಂತಕರನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಪ್ರವೀಣ್ ಕುಟುಂಬ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ.ಈ ಬಗ್ಗೆ...

ಟಿ.ವಿ ನೋಡಲು ಬರುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ-ವ್ಯಕ್ತಿ ಬಂಧನ

ತೀರ್ಥಹಳ್ಳಿ: ಟಿ.ವಿ ನೋಡಲು ಬರುತ್ತಿದ್ದ ಪಕ್ಕದ ಮನೆಯ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗದ ತೀರ್ಥ ಹಳ್ಳಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಮುರುಳೀಧರ್ ಭಟ್ ಬಂಧನಕ್ಕೊಳಗಾದ ವ್ಯಕ್ತಿ.ತೀರ್ಥಹಳ್ಳಿಯ ನಾಲೂರಿನಲ್ಲಿ...

ಅಮೃತ ಮಹೋತ್ಸವ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯಬೇಕು-ಶಾಸಕ ಪೂಂಜಾ

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ...