Thursday, April 22, 2021

ಅಮೇರಿಕಾದಲ್ಲಿ ಮೂರು ಸ್ಪಾಗಳ ಮೇಲೆ ಗುಂಡಿನ ದಾಳಿ: 8 ಮಂದಿ ದಾರುಣ ಸಾವು..!

ಜಾರ್ಜಿಯಾ: ಅಮೆರಿಕದ ಜಾರ್ಜಿಯಾದಲ್ಲಿ ಗುಂಡಿನ ದಾಳಿ ನಡೆದಿದೆ. ಇಲ್ಲಿನ ಮೂರು ಪ್ರತೇಕ ಸ್ಥಳಗಳಲ್ಲಿ ಬಂದೂಕುದಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಬಂದೂಕು ಹೊಂದಿದ್ದ ಅಪರಿಚಿತರು ಈಶಾನ್ಯ ಅಟ್ಲಾಂಟಾದ ಎರಡು ಸ್ಪಾಗಳ ಮೇಲೆ  ಗುಂಡು ಹಾರಿಸಿದ್ದಾರೆ ಮತ್ತು ಚೆರೋಕೀ ಕೌಂಟಿ ಸ್ಪಾದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಚೆರೋಕೀ ಕೌಂಟಿ ಮಸಾಜ್ ಪಾರ್ಲರ್​ನಲ್ಲಿ ಗುಂಡಿನ ದಾಳಿ ಮಾಡುತ್ತಿದ್ದ ಶಂಕಿತ ಬಂದೂಕುಧಾರಿ ವುಡ್‌ಸ್ಟಾಕ್‌ನ ರಾಬರ್ಟ್ ಆರನ್ ಲಾಂಗ್ (21) ಎಂಬ ಯುವಕ ಬಂಧನಕ್ಕೊಳಗಾಗಿದ್ದಾನೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥ ರೊಡ್ನಿ ಬ್ರ್ಯಾಂಟ್ ಅವರು, ಈಶಾನ್ಯ ಅಟ್ಲಾಂಟಾ ಸ್ಪಾಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆಂದು ಎಂದು ಸ್ಪಷ್ಟಪಡಿಸಿದ್ದಾರೆ.

ಗೋಲ್ಡ್ ಮಸಾಜ್ ಸ್ಪಾದಲ್ಲಿ ದರೋಡೆ ನಡೆಯುತ್ತಿದೆ ಎಂಬ ಮಾಹಿತಿ ಬಂದಿತ್ತು. ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತಿದ್ದ ವೇಳೆ ದಾರಿ ಮಧ್ಯೆ ಕರೆಯೊಂದು ಬಂದಿತ್ತು. ದಾರಿ ಮಧ್ಯೆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಕರೆಯಲ್ಲಿ ಹೇಳಿಲಾಗಿತ್ತು. ಆಗ ಸ್ಥಳಕ್ಕೆ ಭೇಟಿ ನೀಡಿದಾಗ ವ್ಯಕ್ತಿ ಮೃತಪಟ್ಟಿದ್ದ ಎಂದು ಬ್ರ್ಯಾಂಟ್ ತಿಳಿಸಿದ್ದಾರೆ.

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...