ಜಾರ್ಜಿಯಾ: ಅಮೆರಿಕದ ಜಾರ್ಜಿಯಾದಲ್ಲಿ ಗುಂಡಿನ ದಾಳಿ ನಡೆದಿದೆ. ಇಲ್ಲಿನ ಮೂರು ಪ್ರತೇಕ ಸ್ಥಳಗಳಲ್ಲಿ ಬಂದೂಕುದಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಬಂದೂಕು ಹೊಂದಿದ್ದ ಅಪರಿಚಿತರು ಈಶಾನ್ಯ ಅಟ್ಲಾಂಟಾದ ಎರಡು ಸ್ಪಾಗಳ ಮೇಲೆ ಗುಂಡು ಹಾರಿಸಿದ್ದಾರೆ ಮತ್ತು ಚೆರೋಕೀ ಕೌಂಟಿ ಸ್ಪಾದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಚೆರೋಕೀ ಕೌಂಟಿ ಮಸಾಜ್ ಪಾರ್ಲರ್ನಲ್ಲಿ ಗುಂಡಿನ ದಾಳಿ ಮಾಡುತ್ತಿದ್ದ ಶಂಕಿತ ಬಂದೂಕುಧಾರಿ ವುಡ್‌ಸ್ಟಾಕ್‌ನ ರಾಬರ್ಟ್ ಆರನ್ ಲಾಂಗ್ (21) ಎಂಬ ಯುವಕ ಬಂಧನಕ್ಕೊಳಗಾಗಿದ್ದಾನೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥ ರೊಡ್ನಿ ಬ್ರ್ಯಾಂಟ್ ಅವರು, ಈಶಾನ್ಯ ಅಟ್ಲಾಂಟಾ ಸ್ಪಾಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆಂದು ಎಂದು ಸ್ಪಷ್ಟಪಡಿಸಿದ್ದಾರೆ.
ಗೋಲ್ಡ್ ಮಸಾಜ್ ಸ್ಪಾದಲ್ಲಿ ದರೋಡೆ ನಡೆಯುತ್ತಿದೆ ಎಂಬ ಮಾಹಿತಿ ಬಂದಿತ್ತು. ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತಿದ್ದ ವೇಳೆ ದಾರಿ ಮಧ್ಯೆ ಕರೆಯೊಂದು ಬಂದಿತ್ತು. ದಾರಿ ಮಧ್ಯೆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಕರೆಯಲ್ಲಿ ಹೇಳಿಲಾಗಿತ್ತು. ಆಗ ಸ್ಥಳಕ್ಕೆ ಭೇಟಿ ನೀಡಿದಾಗ ವ್ಯಕ್ತಿ ಮೃತಪಟ್ಟಿದ್ದ ಎಂದು ಬ್ರ್ಯಾಂಟ್ ತಿಳಿಸಿದ್ದಾರೆ.
ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು/ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಮತ್ತೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆ ಕರ್ನಾಟಕ ಸರ್ಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರ ಏರಿಕೆ ಮಾಡಿದೆ.
ಮದ್ಯದ ಬಾಟಲ್ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ ಏರಿಕೆಯಾಗಲಿದ್ದು, ಜನವರಿ 20 ರಿಂದ ಇದು ಜಾರಿಯಾಗಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬಿಯರ್ ದರ ಪರಿಷ್ಕರಿಸಲು 2024 ರ ಆಗಸ್ಟ್ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರೀಮಿಯಂ ಬಿಯರ್ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.
ಎರಡುಪಟ್ಟುಹೆಚ್ಚಿದ ಬಿಯರ್ ಮಾರಾಟ :
ಕರ್ನಾಟಕದಲ್ಲಿ ಕಳೆದ ಎರಡು ವರ್ಷಗಳಿಂದ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ವರುಣ್ ಆರನ್ ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಹೃದಯಸ್ಪರ್ಶಿ ಪೋಸ್ಟ್ನೊಂದಿಗೆ ಎಲ್ಲಾ ರೀತಿಯ ಕ್ರಿಕೆಟ್’ನಿಂದ ನಿವೃತ್ತಿ ಘೋಷಿಸಿದ್ದಾರೆ.
ಅಂದ್ಹಾಗೆ, ವರುಣ್, 2010-11ರ ವಿಜಯ್ ಹಜಾರೆ ಟ್ರೋಫಿ ಫೈನಲ್ನಲ್ಲಿ ಗುಜರಾತ್ ವಿರುದ್ಧ 153 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಸುದ್ದಿಯಾಗಿದ್ದರು.
ದುರದೃಷ್ಟವಶಾತ್, ಭಾರತೀಯ ವೇಗದ ಬೌಲರ್ ವೃತ್ತಿಜೀವನವು ಪುನರಾವರ್ತಿತ ಗಾಯಗಳಿಂದ ಬಳಲುತ್ತಿದೆ. ಯಾಕಂದ್ರೆ, ವರುಣ್ ಆರನ್, ಒಟ್ಟು 18 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನ ಪ್ರತಿನಿಧಿಸಿದ್ದು, ಕೇವಲ 29 ವಿಕೆಟ್ಗಳನ್ನು ಪಡೆದಿದ್ದಾರೆ. ಆದಾಗ್ಯೂ, ಆರೋನ್ ನಿಯಮಿತವಾಗಿ ಜಾರ್ಖಂಡ್ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದರು.
ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ವರುಣ್ ಆರನ್ .!
ಗಾಯಗಳಿಂದಾಗಿ ವರುಣ್ ಆರೋನ್ ಕಳೆದ ಫೆಬ್ರವರಿಯಲ್ಲಿ ರೆಡ್-ಬಾಲ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು, ಮತ್ತು ಈಗ ಅವರು ಅಂತಿಮವಾಗಿ ಎಲ್ಲಾ ರೀತಿಯ ಆಟದಿಂದ ಹೊರಗುಳಿದಿದ್ದಾರೆ. ಜನವರಿ 10 ರಂದು ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ 2024-25 ರಲ್ಲಿ ಗೋವಾ ವಿರುದ್ಧ ಜಾರ್ಖಂಡ್ ಪರ ವೇಗದ ಬೌಲರ್ ತಮ್ಮ ಕೊನೆಯ ಪಂದ್ಯವನ್ನ ಆಡಿದರು.
ತಮ್ಮ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಸಮಯವನ್ನ ಕರೆದ ಆರೋನ್ ಇನ್ಸ್ಟಾಗ್ರಾಮ್’ನಲ್ಲಿ, “ಕಳೆದ 20 ವರ್ಷಗಳಿಂದ, ನಾನು ವೇಗವಾಗಿ ಬೌಲಿಂಗ್ ಮಾಡುವ ಅವಸರದಲ್ಲಿ ಬದುಕಿದ್ದೇನೆ, ಉಸಿರಾಡಿದ್ದೇನೆ ಮತ್ತು ಅಭಿವೃದ್ಧಿ ಹೊಂದಿದ್ದೇನೆ. ಇಂದು, ಅಪಾರ ಕೃತಜ್ಞತೆಯೊಂದಿಗೆ, ನಾನು ಪ್ರತಿನಿಧಿ ಕ್ರಿಕೆಟ್ನಿಂದ ಅಧಿಕೃತವಾಗಿ ನಿವೃತ್ತಿ ಘೋಷಿಸುತ್ತೇನೆ” ಎಂದು ಹೇಳಿದ್ದಾರೆ.
ಮಂಗಳೂರು/ಚೆನ್ನೈ : ಇತ್ತೀಚೆಗೆ ರವಿಚಂದ್ರನ್ ಆಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿ ಕ್ರಿಕೆಟ್ ಜಗತ್ತನ್ನು ಮತ್ತು ಅವರ ಅಭಿಮಾನಿಗಳನ್ನು ದಿಗ್ಬ್ರಮೆಗೊಳಿಸಿದ್ದರು. ಇದೀಗ ಹಿಂದಿ ಭಾಷೆ ವಿಚಾರದಲ್ಲಿ ಮತ್ತೆ ಹೆಡ್ ಲೈನ್ ಆಗಿದ್ದಾರೆ.
ಏನಿದು ವಿವಾದ
ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಚೆನ್ನೈನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದರು. ಪದವಿ ಪ್ರದಾನ ಸಮಾರಂಭ ಹಿನ್ನೆಲೆಯಲ್ಲಿ ಅಶ್ವಿನ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ವೇದಿಕೆಗೆ ಆಗಮಿಸಿದ್ದ ಅಶ್ವಿನ್, ಸಭಿಕರಲ್ಲಿ ಪ್ರಶ್ನೆಯನ್ನು ಕೇಳಿದರು.
‘ಇಲ್ಲಿ ಎಷ್ಟು ಜನ ಇಂಗ್ಲಿಷ್ ಮಾತನಾಡುತ್ತಾರೆ’ ಎಂದು ಮೊದಲ ಪ್ರಶ್ನೆ ಕೇಳಿದರು. ವೇದಿಕೆ ಮುಂಭಾಗದಲ್ಲಿದ್ದ ಸಭಿಕರು ಕೈ ಎತ್ತಿದ್ದಾರೆ. ಅದೇ ರೀತಿ ಎಷ್ಟು ಜನ ತಮಿಳು ಮಾತನಾಡುತ್ತಾರೆ ಎಂದು ಕೇಳಿದ್ದಾರೆ. ಆಗ ಇಡೀ ಸಭಾಂಗಣ ಪ್ರತಿಧ್ವನಿಸಿದೆ. ನಂತರ ‘ಎಷ್ಟು ಜನ ಹಿಂದಿ ಮಾತನಾಡುತ್ತಾರೆ’ ಎಂದಿದ್ದಾರೆ. ಆಗ ಸಭಾಂಗಣದಲ್ಲಿ ಮೌನ ಆವರಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಅಶ್ವಿನ್ ‘ಹಿಂದಿ ರಾಷ್ಟ್ರಭಾಷೆಯಲ್ಲ; ಅಧಿಕೃತ ಭಾಷೆ’ ಎಂದಿದ್ದಾರೆ. ಅಶ್ವಿನ್ ಅವರ ಈ ಹೇಳಿಕೆಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಸೇರಿದಂತೆ ಹಲವು ವಿರೋಧ ಪಕ್ಷಗಳು ಕೇಂದ್ರವು ರಾಜ್ಯಗಳ ಮೇಲೆ, ವಿಶೇಷವಾಗಿ ದಕ್ಷಿಣದಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಅಶ್ವಿನ್ ನೀಡಿರುವ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.