Thursday, April 22, 2021

ಅಸಮರ್ಪಕ ಚರಂಡಿ ವ್ಯವಸ್ಥೆ ಸರಿಪಡಿಸಲು ಸ್ಮಾರ್ಟ್ ಸಿಟಿ ಯೋಜನೆಯಡಿ ಕಿರು ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ.! 

ಮಂಗಳೂರು:  ಮಹಾ ನಗರ ಪಾಲಿಕೆ ವ್ಯಾಪ್ತಿಯ 41 ನೇ ಸೆಂಟ್ರಲ್ ವಾರ್ಡಿನಲ್ಲಿ ಸ್ಮಾರ್ಟ್ ರೋಡ್ ಪ್ಯಾಕೇಜ್ -4ರಡಿ ಕೆ.ಎಸ್ ರಾವ್ ರಸ್ತೆಯ ಪ್ರಭಾತ್ ಚಿತ್ರಮಂದಿರದ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಿರು ಸೇತುವೆಯ ಗುದ್ದಲಿ ಪೂಜೆ ಬುಧವಾರ ಬೆಳಗ್ಗೆ  ನೆರವೇರಿತು.ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ್‌ ಕಾಮತ್  ಹಲವಾರು ವರ್ಷಗಳಿಂದ ಮಳೆ ಬಂದಂತಹ ಸಂದರ್ಭದಲ್ಲಿ ಪ್ರಭಾತ್ ಚಿತ್ರಮಂದಿರದ ಬಳಿ ಹಾಗೂ ಹಳೇ ಬಸ್ ನಿಲ್ದಾಣದವರೆಗೂ ನೀರು ನಿಲ್ಲುತ್ತಿತ್ತು. ಹೀಗಾಗಿ ಚರಂಡಿಯ ನೀರು ರಾಜ ಕಾಲುವೆಗೆ ಹೋಗದೇ ಇರುವುದನ್ನು ಗಮನಿಸಿ ಕಿರು ಸೇತುವೆ ನಿರ್ಮಾಣದ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದೇವೆ ಎಂದರು. ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ ” ವಿವಿಧ ರೀತಿಯ ಸೌಕರ್ಯಗಳನ್ನು ಒದಗಿಸುವಂತಹ ಕಾರ್ಯಗಳು ಸ್ಮಾರ್ಟ್ ಸಿಟಿಯಿಂದ ನಡೆಯುತ್ತಿದೆ.  ಇದಕ್ಕೆ ಪೂರಕವಾಗಿ  ಕೆ.ಎಸ್ ರಾವ್ ರೋಡ್ ನಲ್ಲಿ ಸುಸಜ್ಜಿತ  ಚರಂಡಿ ವ್ಯವಸ್ಥೆಯ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲಾಗುತ್ತಿದೆ.  ಸ್ಥಳೀಯರ ದೂರಿನ ಮೇರೆಗೆ ಶಾಸಕರು ತಕ್ಷಣ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು.ಈ ಸಂದರ್ಭ ಉಪ ಮೇಯರ್ ಸುಮಂಗಲಾ ರಾವ್, ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯೆ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...