Thursday, September 29, 2022

ಮಂಗಳೂರು: ಕಿರು ಸೇತುವೆ ಉದ್ಘಾಟಿಸಿದ ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ಕೊಡಿಯಾಲ್‌ಬೈಲ್ ವಾರ್ಡಿನ ಕೃಷ್ಣಮಠ ಹಿಂಬದಿ ರಸ್ತೆ ಹಾಗೂ ಕಿರು ಸೇತುವೆಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದಲ್ಲಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಲಾಗಿದೆ. ಈಗಾಗಲೇ ಪ್ರಾರಂಭವಾಗಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕೊಡಿಯಾಲ್‌ಬೈಲ್ ವಾರ್ಡಿನಲ್ಲಿ ಈಗಾಗಲೇ ರಾಜಕಾಲುವೆಗಳ‌ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ ಪುನರ್ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ವಾರ್ಡಿನ ಪ್ರಮುಖ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿ ಬೇಡಿಕೆ ಈಡೇರಿಸುವ ಕುರಿತು ಪ್ರಯತ್ನ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರು ಹಾಗೂ ಸ್ಥಳೀಯ ಕಾರ್ಪೋರೇಟರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಬಿಜೆಪಿ ಮುಖಂಡರಾದ ಪ್ರಶಾಂತ್ ಆಳ್ವ, ಯಶವಂತ್ ಕುದ್ರೋಳಿ, ವಿವೇಕ್ ದೇವಾಡಿಗ,ವಸಂತ್ ಜೆ ಪೂಜಾರಿ, ಸದಾಶಿವ ಬಿಜೈ, ಪ್ರವೀಣ್ ಭಟ್, ಶಶಾಂಕ್, ಜೀವನ ಕದ್ರಿ, ಕಿರಣ್ ಕುಮಾರ್, ಹೇಮಾನಂದ್, ಅಜೇಯ್ ಶೆಟ್ಟಿ, ಗಂಗಾಧರ್, ಪುರುಷೋತ್ತಮ್, ರವಿ ಶಂಕರ್, ಹಾಗೂ ಪರಿಸರ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...